ಬೌಲಿಂಗ್ ದಾಳಿಗೆ ಕುಸಿದ ಭಾರತ; ಆಸೀಸ್ ಗೆ ಸರಣಿ ಜಯ

ಚೆನ್ನೈ: ಆಸ್ಟ್ರೇಲಿಯಾ ಹಾಗೂ ಭಾರತ ತಂಡದ ಸರಣಿಯ ಕೊನೆಯ ಹಾಗೂ ನಿರ್ಣಾಯಕ ಪಂದ್ಯದಲ್ಲಿ 21 ರನ್‌ಗಳ ಭರ್ಜರಿ ಜಯಗಳಿಸುವ ಮೂಲಕ ಮೂರು ಪಂದ್ಯಗಳ ಸರಣಿಯನ್ನು 2-1 ಅಂತರದಲ್ಲಿ ಗೆಲ್ಲುವ ಮೂಲಕ ಸರಣಿಯನ್ನು ತನ್ನದಾಗಿಸಿಕೊಂಡಿತು.

ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಉತ್ತಮ ಆರಂಭ ಪಡೆಯಿತು, ಮೊದಲ ವಿಕೆಟ್ ನಷ್ಟಕ್ಕೆ 68 ರನ್ ಗಳ ಭರ್ಜರಿ ಆರಂಭ ಪಡೆದ ಆಸ್ಟ್ರೇಲಿಯ ಹೆಡ್(33) ಹಾಗೂ ಮಿಚೆಲ್ ಮಾಷ್ (47) ರನ್ ಗಳಿಸಿದರು, ಭಾರತ ತಂಡಕ್ಕೆ ಉತ್ತಮ ಬ್ರೇಕ್ ಥ್ರೋ ಕೊಟ್ಟ ಹಾರ್ದಿಕ್ ಪಾಂಡ್ಯ ಮೊದಲ ಎರಡು ವಿಕೆಟ್ ಪಡೆದರು ನಂತರ ಬಂದ ನಾಯಕ ಸ್ಟೀವನ್ ಸ್ಮಿತ್ ಅವರನ್ನು ಬಲಿ ಪಡೆದರು.

ನಂತರ ವಾರ್ನರ್, ಲಬುಷನಿಗೆ, ಹಾಗೂ ಅಲೆಕ್ಸ್ ಹ್ಯಾರಿ, ಸ್ಟೋನಿಸ್ ಹಾಗೂ ಅಬ್ಬಾಟ್ ಉಪಯುಕ್ತ ಕಾಣಿಕೆ ನೀಡಿದರು, ಇದರ ಅನುಕೂಲದಿಂದಾಗಿ 269 ರನ್ ಗಳಿಸಿದರು, ಭಾರತದ ಪರವಾಗಿ ಕುಲದೀಪ್ ಯಾದವ್ ಹಾಗೂ ಹಾರ್ದಿಕ್ ಪಾಂಡ್ಯ ತಲಾ ಮೂರು ವಿಕೆಟ್ ಪಡೆದು ಗಮನ ಸೆಳೆದರು.

270 ರನ್ ಗಳ ಗುರಿ ಬೆನ್ನಟ್ಟಿದ ಭಾರತ ಆರಂಭಿಕ ಜೋಡಿ ಉತ್ತಮ ರನ್ ಗಳಿಸಿ ಭರವಸೆ ಮೂಡಿಸಿದ್ದರು, ರೋಹಿತ್ ಶರ್ಮ (30), ಶುಭ್ ಮನ್ ಗಿಲ್ (37) ರನ್‌ಗಳಿಸಿ ಮೊದಲ ವಿಕೆಟ್ ನಷ್ಟಕ್ಕೆ 65 ರನ್ ಗಳಿಸಿದರು, ನಂತರ ಬಂದ ವಿರಾಟ್ ಕೊಹ್ಲಿ (54)ರನ್ ಗಳಿಸಿ ಭರವಸೆ ಮೂಡಿಸಿದ್ದರು.

ಮದ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಗಳಾದ ಹಾರ್ದಿಕ್ ಪಾಂಡ್ಯ (40) ಹಾಗೂ ಕೆ. ಎಲ್. ರಾಹುಲ್ (32) ರನ್ ಗಳಿಸಿದರೂ ನಂತರ ದಿಢೀರ್ ಕುಸಿತ ಕಂಡ ಹಿನ್ನೆಲೆಯಲ್ಲಿ 248 ರನ್ ಗೆ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡರು.

ಆಸ್ಟ್ರೇಲಿಯಾ ಪರವಾಗಿ ಆಡಂ ಜಂಪಾ 4 ವಿಕೆಟ್ ಹಾಗೂ ಆಗರ್ 2 ವಿಕೆಟ್ ಪಡೆದರು, ಸರಣಿಯಲ್ಲಿ ಉತ್ತಮವಾಗಿ ಬೌಲಿಂಗ್ ಮಾಡಿ ಮಿಂಚಿದ ಮಿಚೆಲ್ ಸ್ಟಾಕ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರೆ ಆಡಂ ಜಂಪಾ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

9 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

16 hours ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

19 hours ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

21 hours ago

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

1 day ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

1 day ago