ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಹೆಸರಿನಲ್ಲಿ ಕರೆ ಮಾಡಿದ ವ್ಯಕ್ತಿಯೋರ್ವ ಕ್ರೆಡಿಟ್ ಕಾರ್ಡ್ ಸಾಲದ ಮಿತಿ ಹೆಚ್ಚಿಸುವುದಾಗಿ ಹೇಳಿ ವ್ಯಕ್ತಿಯೊಬ್ಬರ ಎರಡು ಬ್ಯಾಂಕ್ ಖಾತೆಗಳಿಂದ 58 ಸಾವಿರ ರೂ. ಎಗರಿಸಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.
ನಗರದ ಬಸವೇಶ್ವರನಗರದ ನಿವಾಸಿಯಾದ ರಾಕೇಶ್‌ಗೆ ಡಿ.5ರಂದು ಫೋನ್ ಕರೆ ಬಂದಿತ್ತು. ಎಸ್ಬಿಐ ಹೆಸರಿನಲ್ಲಿ ಕರೆ ಮಾಡಿದ ವ್ಯಕ್ತಿ, ಕ್ರೆಡಿಟ್ ಕಾರ್ಡ್‌ನ ಸಾಲದ ಮೊತ್ತದ ಮಿತಿ ಹೆಚ್ಚು ಮಾಡುತ್ತೇವೆ ಎಂದು ಹೇಳಿದ್ದಾನೆ. ಎಸ್ಬಿಐ ಬ್ಯಾಂಕ್‌ನವರೇ ಫೋನ್ ಮಾಡಿದ್ದಾರೆ ಎಂದು ನಂಬಿದ ರಾಕೇಶ್, ಕರೆ ಮಾಡಿದ ವ್ಯಕ್ತಿಗೆ ಆಧಾರ್ ಕಾರ್ಡ್, ಖಾತೆಯ ಮಾಹಿತಿಯೊಂದಿಗೆ ಒಟಿಪಿ ನಂಬರ್ ಕೂಡಾ ಕೊಟ್ಟಿದ್ದಾರೆ. ಇದಾದ ಬಳಿಕ ಇವರ ಎಸ್ಬಿಐ ಖಾತೆಯಲ್ಲಿದ್ದ 32 ಸಾವಿರ ರೂಪಾಯಿ ಮಾಯವಾಗಿದೆ.
ಖಾತೆಯಲ್ಲಿ ತಾಂತ್ರಿಕ ಸಮಸ್ಯೆ ಕಂಡುಬಂದಿದೆ ಎಂದು ಹೇಳಿ ರಾಕೇಶ್ ಪತ್ನಿಯ ಬ್ಯಾಂಕ್ ಆಫ್ ಬರೋಡಾ ಖಾತೆಯ ಮಾಹಿತಿಯನ್ನೂ ಪಡೆದ ವಂಚಕ, ಖಾತೆಯಲ್ಲಿದ್ದ 26 ಸಾವಿರ ರೂಪಾಯಿ ಎಗರಿಸಿದ್ದಾನೆ. ಹೀಗೆ ತಮ್ಮ ಎರಡೂ ಬ್ಯಾಂಕ್ ಖಾತೆಯಲ್ಲಿ ಹಣ ಖಾಲಿಯಾದ ಕೂಡಲೇ ಬ್ಯಾಂಕ್‌ಗೆ ಹೋಗಿ ವಿಚಾರಿಸಿದ್ದಾರೆ. ಬ್ಯಾಂಕ್‌ನಲ್ಲಿ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ರಾಕೇಶ್ ಬೆಂಗಳೂರಿನ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಜಗತ್ತು ಡಿಜಿಟಲ್ ಆಗಿ ಪರಿವರ್ತೆಯಾದ ನಂತರ ಸೈಬರ್ ಕಳ್ಳರ ಹಾವಳಿ ಹೆಚ್ಚಾಗಿದೆ. ಯುಪಿಐ ಪಿನ್ ಹಾಗೂ ಒಟಿಪಿಯನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ ಎಂದು ಬ್ಯಾಂಕ್ಗಳು ಸಂದೇಶ ರವಾನಿಸುತ್ತಲೇ ಇವೆ. ಇವುಗಳ ಕಡೆ ಗಮನಹರಿಸಿ.
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…
ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…