ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ಗಳ ವಿತರಣೆಗಾಗಿ ವಿಕಲಚೇತನರಿಂದ ಅರ್ಜಿ ಆಹ್ವಾನ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ದೈಹಿಕ ವಿಕಲಚೇತನರಿಗೆ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ಗಳನ್ನು ವಿತರಿಸಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿರುವ ಅರ್ಹ ವಿಕಲಚೇತನರು ಯೋಜನೆಯ ಸೌಲಭ್ಯ ಪಡೆಯಲು ಆನ್ ಲೈನ್ ಮೂಲಕ ಸೇವಾ ಸಿಂಧು (https://seva sindhu.Karnataka. gov.in/) ಪೊರ್ಟಲ್ ನಲ್ಲಿ ಜನವರಿ 21 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ವಿಕಲಚೇತನರು ಭಾರತದ ಪ್ರಜೆಯಾಗಿದ್ದು, ಕರ್ನಾಟಕದಲ್ಲಿ ಕನಿಷ್ಟ 10ವರ್ಷಗಳು ವಾಸವಾಗಿರಬೇಕು. ಈ ಯೋಜನೆ ಸೌಲಭ್ಯ ಪಡೆಯಲು ಕುಟುಂಬ ವಾರ್ಷಿಕ ಆದಾಯ ರೂ 2.00 ಲಕ್ಷಗಳಿಗಿಂತ ಕಡಿಮೆ ಇರಬೇಕು. ವಿಕಲಚೇತನರ ಅಧಿನಿಯಮದಲ್ಲಿ ಸೂಚಿಸಿರುವ ಹಾಗೂ ವೈದ್ಯಕೀಯ ಪ್ರಾಧಿಕಾರದಿಂದ ನೀಡಿರುವ ಗುರುತಿನ ಚೀಟಿಯೊಂದಿಗೆ ದೃಢೀಕೃತ ವೈದ್ಯಕೀಯ ಪ್ರಮಾಣ ಪತ್ರ ಸಲ್ಲಿಸಬೇಕು. ಇತರೆ ಇಲಾಖೆಗಳು ಅಥವಾ ಸಂಘ ಸಂಸ್ಥೆಗಳಿಂದ ಬ್ಯಾಟರಿ ಚಾಲಿತ ವೀಲ್ ಚೇರ್ ಪಡೆದಿದ್ದಲ್ಲಿ ಅಂತಹವರು ಅರ್ಹರಾಗಿರುವುದಿಲ್ಲ.

ಈ ಸೌಲಭ್ಯ ಪಡೆಯುವ ದೈಹಿಕ ವಿಕಲಚೇತನರು ಶೇ75% ಮತ್ತು ಅದಕ್ಕಿಂತ ಹೆಚ್ಚಿನ ದೈಹಿಕ ವಿಕಲಚೇತನರಾಗಿದ್ದು ಯಂತ್ರಚಾಲಿತ ದ್ವಿಚಕ್ರ ಮೋಟಾರು ವಾಹನವನ್ನು ಚಾಲನೆ ಮಾಡಲು ಸಾಮಾರ್ಥ್ಯ ಹೊಂದಿರದ ಹಾಗೂ ಕನಿಷ್ಟ ಒಂದು ಕೈ ಒಂದು ಕಣ್ಣು ಸ್ವಾಧೀನದಲ್ಲಿದ್ದು ಹಾಗೂ ಬ್ಯಾಟರಿಚಾಲಿತ ವ್ಹೀಲ್ ಚೇರ್ ಚಲಾಯಿಸಲು ಇತರೇ ಎಲ್ಲಾ ರೀತಿಯಲ್ಲಿ ಸದೃಢವಾಗಿರುವ ವಿಕಲಚೇತನರಾಗಿರಬೇಕು.
ಈ ಸೌಲಭ್ಯ ಪಡೆಯುವ ದೈಹಿಕ ವಿಕಲಚೇತನರು ಸರ್ಕಾರದಿಂದ ಯಂತ್ರಚಾಲಿತ ದ್ವಿಚಕ್ರ ವಾಹನವನ್ನು ಪಡೆದಿರಬಾರದು.

ಬ್ಯಾಟರಿ ಚಾಲಿತ ವ್ಹೀಲ್ ಚೇರ್‌ನ್ನು ಅವರ ಜೀವತಾವದಿಯಲ್ಲಿ ಯಾವುದೇ ಕಾರಣಕ್ಕೂ ಪರಭಾರೆ ಮಾಡಬಾರದು ಮಾಡಿದ್ದು ಕಂಡು ಬಂದಲ್ಲಿ ಅಂತಹವರ ಮೇಲೆ ಕಾನೂನು ಕ್ರಮ ಜರುಗಿಸಿ ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲಾಗುವುದು.

ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಮಾಹಿತಿ ಸಲಹಾ ಕೇಂದ್ರ ದೂರವಾಣಿ ಸಂಖ್ಯೆ-080-29787441 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಯುವಕರು ನೈತಿಕ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕು- ವಕೀಲ ಬಿ. ಸುರೇಶ್ ಗೌಡ

ಯುವಕರು ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ವೈಯಕ್ತಿಕ ಬೆಳವಣಿಗೆಗೆ ಮಾತ್ರವಲ್ಲದೆ, ಆರೋಗ್ಯಕರ ಮತ್ತು ಸಮೃದ್ಧ ಸಮಾಜದ ನಿರ್ಮಾಣಕ್ಕೂ ಅತ್ಯಗತ್ಯವಾಗಿದೆ ಎಂದು ಹೈಕೋರ್ಟ್…

4 hours ago

ಕದನ ವಿರಾಮ…., ಕೊನೆಗೆ ಗೆಲ್ಲುವುದು ಹಿಂಸೆಯಲ್ಲ ಅಹಿಂಸೆ

ಕದನ ವಿರಾಮ...... ಯುದ್ಧ ವಿರಾಮ ಘೋಷಣೆಯಾಗಿದೆ. ಸಾವಿರಾರು ಜನರ ಹತ್ಯೆಗಳ ನಂತರ, ಅಪಾರ ಪ್ರಮಾಣದ ಭೂಪ್ರದೇಶ, ನೈಸರ್ಗಿಕ ಸಂಪನ್ಮೂಲಗಳು, ತೈಲ…

4 hours ago

ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ

ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…

14 hours ago

14 ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ತಪ್ಪದೇ ಎಚ್.ಪಿ.ವಿ ಲಸಿಕೆ ಹಾಕಿಸಿ- ಡಿಸಿ ಅನುರಾಧ

ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…

15 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ 34 ವರ್ಷದ ವ್ಯಕ್ತಿ ಸಾವು

ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು…

15 hours ago

ನಾಳೆ (ಏ.9ಕ್ಕೆ) ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಮಾ.9ರ ಗುರುವಾರ ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ…

19 hours ago