ಬ್ಯಾಟರಿ ಸ್ಪಾರ್ಕ್: ಧಗಧಗ ಹೊತ್ತಿ ಉರಿದ ಟಾಟಾ ಸುಮೋ – ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ದೊಡ್ಡಬಳ್ಳಾಪುರ: ಬ್ಯಾಟರಿಯಲ್ಲಿ ಸ್ಪಾರ್ಕ್ ಕಾಣಿಸಿಕೊಂಡ ಪರಿಣಾಮ ಟಾಟಾ ಸುಮೋ ವಾಹನಕ್ಕೆ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟುಹೋದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಗೊಲ್ಲಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.

ಮಧುಗಿರಿಯಿಂದ ಬೆಂಗಳೂರಿನ ಸಹಕಾರನಗರದ ಕಡೆಗೆ ಟಾಟಾ ಸುಮೋದಲ್ಲಿ ಪ್ರಯಾಣಿಕರು ತೆರಳುತ್ತಿದ್ದ ವೇಳೆ, ವಾಹನದ ಬ್ಯಾಟರಿಯಲ್ಲಿ ಏಕಾಏಕಿ ಸ್ಪಾರ್ಕ್ ಕಾಣಿಸಿಕೊಂಡಿದೆ. ಪರಿಸ್ಥಿತಿಯನ್ನು ಗಮನಿಸಿದ ಚಾಲಕ ತಕ್ಷಣವೇ ವಾಹನವನ್ನು ರಸ್ತೆ ಬದಿಗೆ ನಿಲ್ಲಿಸಿ, ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾನೆ.

ಸ್ವಲ್ಪವೇ ಸಮಯದಲ್ಲಿ ಬೆಂಕಿ ವಾಹನವನ್ನು ಆವರಿಸಿಕೊಂಡು ಧಗಧಗನೆ ಉರಿಯತೊಡಗಿದೆ. ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದರು. ಆದರೆ ಅಷ್ಟರಲ್ಲಾಗಲೇ ವಾಹನ ಬಹುತೇಕ ಸುಟ್ಟುಹೋಗಿತ್ತು.

ಚಾಲಕನ ಸಮಯಪ್ರಜ್ಞೆಯಿಂದ ಎಲ್ಲ ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದ ಕೆಲಕಾಲ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೂ ಅಡಚಣೆ ಉಂಟಾಯಿತು.

ಈ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರಂಭಿಕ ಮಾಹಿತಿಯ ಪ್ರಕಾರ, ಬ್ಯಾಟರಿಯಲ್ಲಿ ಉಂಟಾದ ಸ್ಪಾರ್ಕ್‌ನಿಂದಲೇ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ..

Ramesh Babu

Journalist

Recent Posts

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

2 hours ago

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

14 hours ago

ರಾಜಾನುಕುಂಟೆ ಬಳಿ ರೈಲು ಬೋಗಿಗಳಿಗೆ ಬೆಂಕಿ: ಎರಡು ಬೋಗಿಗಳು ಸುಟ್ಟು ಭಸ್ಮ

ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…

20 hours ago

ಮಧುರೆ ಕೆರೆಯಲ್ಲಿ ಮಣ್ಣು ದಂಧೆ ಆರೋಪ: ಸುಮಾರು 35 ಟ್ರ್ಯಾಕ್ಟರ್, 5 ಜೆಸಿಬಿಗಳ ಅಬ್ಬರ; ಮಣ್ಣು ತೆಗೆಯುವುದಕ್ಕೆ ಗ್ರಾಮಸ್ಥರ ಬ್ರೇಕ್!

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್‌ಗಳು…

21 hours ago

ನಮ್ಮ ತೆರಿಗೆ ನಮ್ಮ ಹಕ್ಕು…

ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…

1 day ago

ದೇವನಹಳ್ಳಿ ಬಳಿ ಭೀಕರ ಅಪಘಾತ: ಓರ್ವ ಸಾವು: ಹಲವರಿಗೆ ಗಾಯ

ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…

1 day ago