ಬ್ಯೂಟಿ ಪಾರ್ಲರ್ ಉಚಿತ ತರಬೇತಿಗೆ ಆಸಕ್ತರಿಂದ ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಬ್ಯೂಟಿ ಪಾರ್ಲರ್ ಕುರಿತ 30 ದಿನಗಳ ಉಚಿತ ತರಬೇತಿಯು ನವೆಂಬರ್ 05 ರಿಂದ ಪ್ರಾರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 18 ಕೊನೆಯ ದಿನವಾಗಿದೆ.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380162042, 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಹೆಣ್ಣಿನ‌ ಹಿತರಕ್ಷಣೆಗಾಗಿ ಮಹಿಳಾ ಪೊಲೀಸ್ ಠಾಣೆ ಸದಾ ಸನ್ನದ್ಧ- ಮಹಿಳಾ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಪಂಕಜಾ

ಹೆಣ್ಣಿನ‌ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…

3 hours ago

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಸಾಧನೆ

ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ ‌14 ) ಅವರ ವ್ಯಕ್ತಿತ್ವ ಮತ್ತು…

13 hours ago

Документ_12

In der heutigen akademischen Welt steht die Qualität der schriftlichen Arbeiten im Mittelpunkt des Interesses.…

17 hours ago

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

1 day ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

1 day ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

1 day ago