ಬ್ಯೂಟಿ ಪಾರ್ಲರ್‌ ಉಚಿತ ತರಬೇತಿಗೆ ಆಸಕ್ತರಿಂದ ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಬ್ಯೂಟಿ ಪಾರ್ಲರ್‌ ಕುರಿತ 35 ದಿನಗಳ ಉಚಿತ ತರಬೇತಿಯು ಜುಲೈ 14 ರಿಂದ ಪ್ರಾರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9241482541, 9113880324, 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

5 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

10 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

10 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

15 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago