ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ 30 ದಿನಗಳ ಬ್ಯೂಟಿ ಪಾರ್ಲರ್ ಉಚಿತ ತರಬೇತಿಯು 15 ಜುಲೈ 2024 ರಿಂದ ಆಯೋಜಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತ 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಪ್ರದೇಶದ ಆಧಾರ್ ಕಾರ್ಡ್ ಹಾಗೂ ಬಿಪಿಎಲ್ ಕಾರ್ಡ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.
ತರಬೇತಿಯು ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಜುಲೈ 10 ಕೊನೆಯ ದಿನವಾಗಿದೆ.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9241482541, 8884554510, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ನಗರದ ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಏ.4ರಂದು ದೊಡ್ಡಬಳ್ಳಾಪುರ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…
Cheap Emotional Support Animal Letter: Your Guide Understanding Cheap Emotional Support Animal Letters In recent…
Understanding ESA Letters for Mental Health Support The Role of ESA Letters in Mental Health…
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…