ಬ್ಯೂಟಿ ಪಾರ್ಲರ್‌ ತರಬೇತಿಗೆ ಆಸಕ್ತರಿಂದ ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಬ್ಯೂಟಿ ಪಾರ್ಲರ್‌ ನಿರ್ವಹಣೆ ಕುರಿತ 30 ದಿನಗಳ ಉಚಿತ ತರಬೇತಿಯು ನವೆಂಬರ್‌ 23 ರಿಂದ ಪ್ರಾರಂಭವಾಗಲಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ನವೆಂಬರ್‌ 21 ಕೊನೆಯ ದಿನವಾಗಿದೆ.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9740982585, 9113880324, 8884554510, 9241482541 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಬಸವ ಮಂಟಪ ಕೃತಿ ವಿವಾದ: ಜನರ ಆಕ್ರೋಶ, ಅಭಿಪ್ರಾಯಗಳ ಅನಾವರಣ

12ನೇ ಶತಮಾನದ ಸಮಾಜ ಸುಧಾರಕ, ಸಮಾನತೆ ಮತ್ತು ಮಾನವೀಯ ಮೌಲ್ಯಗಳ ಪ್ರತಿಪಾದಕರಾದ ವಿಶ್ವಗುರು ಬಸವಣ್ಣನವರ ಕುರಿತು ‘ಬಸವ ಮಂಟಪ’ ಕೃತಿಯಲ್ಲಿ…

16 minutes ago

ನ.29ರಂದು ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ತಾಲೂಕಿನ 220/66/11 ಕೆ.ವಿ. ಕೆಐಎಡಿಬಿ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 29ರ ಭಾನುವಾರ…

11 hours ago

ಸಂವಿಧಾನವು ಶೋಷಿತರಿಗೆ ಧ್ವನಿ, ಬಡವರಿಗೆ ಭರವಸೆಯ ಆಶಾಕಿರಣ- ನರೇಶ್ ಎಸ್ ಜಿ

ಡಾ. ಬಿ.ಆರ್. ಅಂಬೇಡ್ಕರ್ ಅವರು ದೇಶಕ್ಕೆ ನೀಡಿದ ಸಂವಿಧಾನವು ಕೇವಲ ಆಡಳಿತ ನಡೆಸುವ ಪುಸ್ತಕವಲ್ಲ. ಅದು ಶೋಷಿತರಿಗೆ ಧ್ವನಿ ನೀಡಿದ…

13 hours ago

ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣ

ನಾಯಕ ಸಮುದಾಯದವರು ವಿದ್ಯಾವಂತರಾಗಿ ಸಮಾಜದ ಸಮಸ್ಯೆಗಳಿಗೆ ಪರಿಹಾರ ನೀಡಬೇಕು. ಶಿಕ್ಷಣ, ಸಂಘಟನೆ ಮತ್ತು ಹೋರಾಟದಿಂದ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಬೇಕು ಎಂದು…

14 hours ago

ಮಲ್ಲೋಹಳ್ಳಿ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದ ಬೀಗ ತೆರವು; ಮತ್ತೆ ಪೂಜೆಗೆ ಅವಕಾಶ: ಗ್ರಾಮಸ್ಥರ ಎರಡು ಬಣಗಳ ನಡುವಿನ ಭಿನ್ನಾಭಿಪ್ರಾಯಕ್ಕೆ ತಾತ್ಕಾಲಿಕ ತೆರೆ; ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ ನಡೆಸಿ ಮುಂದಿನ ಕ್ರಮ

ದೊಡ್ಡಬಳ್ಳಾಪುರ: ತಾಲೂಕಿನ ಮಲ್ಲೋಹಳ್ಳಿ ಗ್ರಾಮದ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನಕ್ಕೆ ಹಾಕಲಾಗಿದ್ದ ಬೀಗವನ್ನು ಅಧಿಕಾರಿಗಳು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ತೆರವುಗೊಳಿಸಲಾಗಿದ್ದು,…

17 hours ago

ಅರ್ಚಕರ ಮೇಲಿನ ದ್ವೇಷಕ್ಕೆ ದೇವಸ್ಥಾನಕ್ಕೆ ಬೀಗ? ಅರ್ಚಕರ ಬದಲಾವಣೆಗಾಗಿ ದೇವಸ್ಥಾನ ಬಂದ್ ಮಾಡಿದ ಆರೋಪ

ದೊಡ್ಡಬಳ್ಳಾಪುರ: ತಾಲೂಕಿನ ಮಲ್ಲೋಹಳ್ಳಿ ಗ್ರಾಮದ ಮುಜರಾಯಿ ಇಲಾಖೆಗೆ ಸೇರಿದ ಪ್ರಸಿದ್ಧ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನಕ್ಕೆ ನಿನ್ನೆ ಸಂಜೆ ಬೀಗ…

22 hours ago