ಬ್ರಿಟಿಷ್ ಕಾಲದ ಪೊಲೀಸ್ ಟೋಪಿಗಳನ್ನು ಬದಲಿಸುವ ಕೂಗು ಮುನ್ನೆಲೆಗೆ: ವೃತ್ತಾಕಾರದ ದೊಡ್ಡ ಟೋಪಿ ಬದಲು ಸ್ಮಾರ್ಟ್ ಪೀಕ್ ಕ್ಯಾಪ್ ನೀಡಲು ಚಿಂತನೆ

ಕರ್ನಾಟಕ ಪೊಲೀಸ್ ಇಲಾಖೆಯ ಮುಖ್ಯ ಪೇದೆ ಮತ್ತು ಪೇದೆಗಳು ಹಲವು ವರ್ಷಗಳಿಂದ ಬ್ರಿಟಿಷ್ ಕಾಲದ ವೃತ್ತಾಕಾರದ ದೊಡ್ಡ ಟೋಪಿ ಧರಿಸುತ್ತಿದ್ದಾರೆ. ಇದು ಆರೋಗ್ಯ ಮತ್ತು ಇತರೆ ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಈ ಹಿನ್ನೆಲೆ ಹೊಸ ಪೀಕ್ ಟೋಪಿಗಳನ್ನು ನೀಡಲು ಪೊಲೀಸ್ ಇಲಾಖೆ ಚಿಂತಿಸುತ್ತಿದೆ. ಈ ಕುರಿತು ಇದೇ ಏಪ್ರಿಲ್​ 4ರಂದು ಉನ್ನತ‌ ಮಟ್ಟದ ಅಧಿಕಾರಿಗಳ ಸಭೆ ನಡೆಯಲಿದೆ ಎಂದು ತಿಳಿದುಬಂದಿದೆ.

ಬ್ರಿಟಿಷ್ ಕಾಲದ ಟೋಪಿಗಳನ್ನು ಬದಲಿಸುವ ಕೂಗು ಬಹಳ ಹಿಂದಿನಿಂದಲೂ ಕೇಳಿಬರುತ್ತಿತ್ತು. ಇದು ಪೊಲೀಸರ ಬಹುವರ್ಷಗಳ ಬೇಡಿಕೆ ಕೂಡ ಆಗಿತ್ತು. ಇದೀಗ ಅದಕ್ಕೆ ಸಮಯ ಬಂದಿದ್ದು, ದೊಡ್ಡ ಟೋಪಿ ಬದಲಾಗಿ ಸ್ಮಾರ್ಟ್​​ ಪೀಕ್​ ಹ್ಯಾಟ್​ ಹೆಡ್​ ಕಾನ್​​ಸ್ಟೆಬಲ್​​ ಹಾಗೂ ಕಾನ್​​ ಸ್ಟೆಬಲ್​ಗಳ ತಲೆಯನ್ನು ಅಲಂಕರಿಸಲಿದೆ. ಇಂತಹದೊಂದು ಸಾಹಸಕ್ಕೆ ಪೊಲೀಸ್​ ಇಲಾಖೆ ದಿಟ್ಟ ಹೆಜ್ಜೆಯಿಟ್ಟಿದೆ.

ಆಂಧ್ರಪ್ರದೇಶ, ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಅಲ್ಲಿನ ಪೊಲೀಸ್‌ ಹೆಡ್ ಕಾನ್‌ಸ್ಟೆಬಲ್ ಹಾಗೂ ಕಾನ್ ಸ್ಟೆಬಲ್‌ಗಳಿಗೆ ಪೀಕ್‌ ಕ್ಯಾಪ್‌ಗಳನ್ನು ನೀಡಲಾಗಿದೆ.

ಇದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಪೀಕ್ ಟೋಪಿಗಳನ್ನು ಕೊಡುವ ಬಗ್ಗೆ ಪರಿಶೀಲಿಸಿ ವರದಿ ನೀಡುವಂತೆ ಡಿಜಿ-ಐಜಿಪಿ ಡಾ.ಅಲೋಕ್ ಮೋಹನ್ ಆದೇಶಿಸಿದ್ದಾರೆ. ಹೀಗಾಗಿ ಪೀಕ್ ಟೋಪಿ ವಿತರಣೆ ಕುರಿತು ಚರ್ಚಿಸಲು ರಾಜ್ಯ ಸಶಸ್ತ್ರ ಮೀಸಲು ಪಡೆ (ಕೆಎಸ್ಸಾರ್ಪಿ) ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರ ಅಧ್ಯಕ್ಷತೆಯಲ್ಲಿ ಏ.4ಕ್ಕೆ ಕಿಟ್ ನಿರ್ದಿಷ್ಟತಾ ಸಮಿತಿ ಸಭೆಯನ್ನು ಕರೆಯಲಾಗಿದೆ ಎಂದು ತಿಳಿದುಬಂದಿದೆ.

Ramesh Babu

Journalist

Recent Posts

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

18 hours ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

21 hours ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

21 hours ago

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

1 day ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

1 day ago