ವಿಶ್ವ ಹಿಂದೂ ಪರಿಷತ್, ಬಜರಂಗದಳ ವತಿಯಿಂದ ನಗರದ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ಶ್ರೀ ರಾಮೋತ್ಸವ ಹಾಗೂ ಬೃಹತ್ ಶ್ರೀರಾಮ ಶೋಭಾಯಾತ್ರೆ ಏ.11ರಿಂದ ಮೂರು ದಿನಗಳ ಕಾಲ ಅದ್ಧೂರಿಯಾಗಿ ನಡೆಯಿತು.
ನಗರದಾದ್ಯಂತ ಏ.13ರಂದು ಬೃಹತ್ ಶ್ರೀರಾಮ ಶೋಭಾಯಾತ್ರೆ ನಡೆಯಿತು. ಕಾರ್‍ಯಕ್ರಮದ ಅಂಗವಾಗಿ ವಾಹನ ಜಾಥಾ, ಹೋಮ ಹವನಾದಿಗಳು, ಕಲ್ಯಾಣೋತ್ಸವ ನಡೆಯಿತು.
ಭಾನುವಾರ ಸಂಜೆ ಬಹತ್ ಶೋಭಾಯಾತ್ರೆ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿತು. ಭಾರತ ಮಾತೆ, ಶ್ರೀರಾಮ, ಹನುಮ, ಶಿವ, ಭುವನೇಶ್ವರಿ, ಡಾ.ಬಿ.ಆರ್.ಅಂಬೇಡ್ಕರ್, ಶಿವಾಜಿ ಪ್ರತಿಮೆಗಳೊಂದಿಗೆ ವಿವಿಧ ಕಲಾತಂಡಗಳು ಶೋಭಾಯಾತ್ರೆಯ ಮೆರವಣಿಗೆಯಲ್ಲಿ ಭಾಗವಹಿಸಿದ್ದವು.
ಶ್ರೀರಾಮನ ಚಿತ್ರವುಳ್ಳ ಕೇಸರಿ ಧ್ವಜ ಹಿಡಿದು ‘ಜೈ ಶ್ರೀರಾಮ್’ ಘೋಷಣೆಯೊಂದಿಗೆ ಸಾವಿರಾರು ಜನ ಭಾಗವಹಿಸಿದ್ದರು. ಶೋಭಾ ಯಾತ್ರೆ ಸಾಗುವ ರಸ್ತೆಯ ಎರಡೂ ಬದಿಯಲ್ಲೂ ಜನರು ಸಾಲುಗಟ್ಟಿ ನಿಂತು ಬೃಹ್ ಮೆರವಣಿಗೆ ವೀಕ್ಷಣೆ ಮಾಡಿದರು.
ಶೋಭಾ ಯಾತ್ರೆಯಲ್ಲಿ ಸಾವಿರಾರು ಯುವಕರು ಶ್ರೀರಾಮನ ಭಕ್ತಿಗೀತೆಗಳಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರೆ, ಯುವತಿಯರು ತಮಟೆ ನಾದಕ್ಕೆ ಕುಣಿಯುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿದ್ದವು.
ನಂತರ ಸಂಜೆ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ಲೇಸರ್ ಶೋ, ಬೃಹತ್ ರಾವಣ ದಹನ ಮತ್ತು ಆಕರ್ಷಕ ಸಿಡಿಮದ್ದುಗಳ ಪ್ರದರ್ಶನ ಕಾರ್‍ಯಕ್ರಮಗಳು ಅದ್ಧೂರಿಯಾಗಿ ನಡೆದವು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಗ್ರಾಮದ ಪುಷ್ಪಲತಾ ಸೋಮಶೇಖರ್ ರವರನ್ನು ರಾಜ್ಯ ಮಟ್ಟದ ಜಾಗೃತಿ ಸಮಿತಿ ಸದಸ್ಯರನ್ನಾಗಿ…
ಬೆಂಗಳೂರು ಕೊಡಿಗೆಹಳ್ಳಿ, : ಮೆಡಿಕವರ್ ಆಸ್ಪತ್ರೆಯು ಕೊಡಿಗೆಹಳ್ಳಿಯ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು, ಶಾಲಾ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಮಾಡಿದ್ದುಣ್ಣೋ ಮಹಾರಾಯ....... ಬೇವು ಬಿತ್ತಿ ಮಾವಿನ ಫಲವನ್ನು ನಿರೀಕ್ಷಿಸಿದರೆಂತಯ್ಯ....... ನಾನು ಕೆಲವರು ವಿರುದ್ಧ ದೂರು ಕೊಡಬೇಕಿದೆ. ಯಾರಿಗೆ ಕೊಡಲಿ, ಎಲ್ಲಿ…
ಲಾರಿಯನ್ನು ಅಡ್ಡಾದಿಡ್ಡಿಯಾಗಿ ಚಾಲಾಯಿಸಿಕೊಂಡು ಬಂದ ಚಾಲಕನು, ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನಗಳಿಗೆ ಡಿಕ್ಕಿ ಹೊಡೆದು ಕಿರಿಕಿರಿ ಉಂಟು ಮಾಡಿರುವ ಘಟನೆ…
ಕಾರವಾರ:- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತೆ ಯೋಜನೆಗಳನ್ನು ಒದಗಿಸಲು ರಾಜ್ಯದಲ್ಲಿನ ಡೀಸೆಲ್ ಪೆಟ್ರೋಲ್ ಮೇಲೆ ವಿಧಿಸುತ್ತಿರುವ…