ದೊಡ್ಡಬಳ್ಳಾಪುರ ನಗರದಲ್ಲಿರುವ ಹೆಸರಾಂತ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ 8 ಫೆಡ್ ಲೈಟ್ ಐ ಮಾಸ್ಟ್, ಕ್ರೀಡಾಂಗಣ ಸುತ್ತಲೂ ಸುಮಾರು 100 ಲೈಟ್ ಗಳ ಅಳವಡಿಕೆಗೆ ಶಾಸಕ ಧೀರಜ್ ಮುನಿರಾಜ್ ಅವರು ಚಾಲನೆ ನೀಡಿದರು.
ಕ್ರೀಡಾಂಗಣ ರಾತ್ರಿ ವೇಳೆ ಸೂಕ್ತ ಬೆಳಕಿನ ವ್ಯವಸ್ಥೆ ಇಲ್ಲದೆ ಕತ್ತಲಲ್ಲಿ ಸೊರಗುತ್ತಿತ್ತು. ಈ ಹಿನ್ನೆಲೆ ಸಂಜೆ ಹೊತ್ತು ಜನ ವಾಕಿಂಗ್ ಮಾಡಲು, ಆಟವಾಡಲು ಆಗುತ್ತಿರಲಿಲ್ಲ. ಹಾಗೂ ರಾತ್ರಿ ವೇಳೆ ಮೈದಾನವೇ ಕಾಣುತ್ತಿರಲಿಲ್ಲ. ಆದ್ದರಿಂದ ಇದನ್ನ ಮನಗೊಂಡ ಶಾಸಕ ಧೀರಜ್ ಮುನಿರಾಜ್ ಅವರು ತಮ್ಮ ಮುಂದುವರಿದ ಯೋಜನೆಯ ಅನುದಾನದಲ್ಲಿ 8 ಫೆಡ್ ಲೈಟ್ ಐ ಮಾಸ್ಟ್, ಕ್ರೀಡಾಂಗಣ ಸುತ್ತಲೂ ಸುಮಾರು 100 ಲೈಟ್ ಗಳ ಅಳವಡಿಕೆಗೆ ಚಾಲನೆ ನೀಡಿದ್ದಾರೆ. ಈ ಮೂಲಕ ಜನರ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್, ಸ್ಥಾಯಿ ಸಮಿತಿ ಅಧ್ಯಕ್ಷ ರವಿಕುಮಾರ್, ನಗರಸಭಾ ಸದಸ್ಯರಾದ ಬಂತಿ ವೆಂಕಟೇಶ್, ಶಿವು, ಪದ್ಮನಾಭ, ರೂಪಿಣಿ ಮಂಜುನಾಥ್, ಇತರೆ ನಗರಸಭಾ ಸದಸ್ಯರುಗಳು, ಬಿಜೆಪಿ ಅಧ್ಯಕ್ಷ ನಾಗೇಶ್, ಮುದ್ದಪ್ಪ, ಪುಷ್ಪ ಶಿವಶಂಕರ್ ಸೇರಿದಂತೆ ಅನೇಕ ಮುಖಂಡರುಗಳು ಉಪಸ್ಥಿತಿ ಇದ್ದರು.
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…
ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…
ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಛಲವಾದಿ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…