“77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ದುರ್ಗಶ್ರೀ ಅವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಹಾಗೂ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ “ರಾಷ್ಟ್ರ ಧ್ವಜಾರೋಹಣ” ನೆರವೇರಿಸಿ, ತ್ರಿವರ್ಣ ಧ್ವಜಕ್ಕೆ ಗೌರವ ವಂದನೆ ಸಲ್ಲಿಸಿದರು.
ಇದಕ್ಕೂ ಮುನ್ನ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು.
ನಂತರ ಪತ್ರಕರ್ತ ಗುರುಪ್ರಸಾದ್, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಇನ್ ಸ್ಪೆಕ್ಟರ್ ಸಾದಿಕ್ ಪಾಷಾ, ಪೌರಕಾರ್ಮಿಕ ಮುತ್ಯಾಲಕ್ಕ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು…
ಕಾರ್ಯಕ್ರಮದಲ್ಲಿ ಶಾಸಕ ಧೀರಜ್ ಮುನಿರಾಜ್, ತಹಶೀಲ್ದಾರ್ ಮಲ್ಲಪ್ಪ, ಬಿಇಒ ಶಂಕ್ರಪ್ಪ, ತಾ.ಪಂ ಇಒ ಮಂಜುನಾಥ್ ಹರ್ತಿ, ನಗರಸಭಾ ಪೌರಾಯುಕ್ತ ಕಾರ್ತಿಕೇಶ್ವರ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…
ಬೆಳಗಾವಿಯ ದಟ್ಟ ಅರಣ್ಯ ಪ್ರದೇಶದ ನಡುವೆ ಸಾಗುವ ಚೋರ್ಲಾ ಘಾಟ್ನ ರಸ್ತೆಗಳು ಸಾಮಾನ್ಯವಾಗಿ ಮೌನದಿಂದ ಕೂಡಿರುತ್ತವೆ. ಆದರೆ, ಆ ಮೌನದಲ್ಲೇ…
2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟವಾಗಿದೆ. ಒಟ್ಟು 131 ಮಂದಿ ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕದ 8 ಮಂದಿಯು ಈ…
ದೊಡ್ಡಬಳ್ಳಾಪುರ ತಾಲ್ಲೂಕಿನ ಹುಲುಕುಡಿ ವೀರಭದ್ರಸ್ವಾಮಿ ಕ್ಷೇತ್ರದಲ್ಲಿ ಕ್ಷೇತ್ರಾಭಿವೃದ್ಧಿ ಟ್ರಸ್ಟ್ ವತಿಯಿಂದ ರಥಸಪ್ತಮಿ ಅಂಗವಾಗಿ ಇಂದು (ಜ.25) ವೀರಭದ್ರಸ್ವಾಮಿ ಮತ್ತು ಪ್ರಸನ್ನ…
ಪಿಕಪ್ ವಾಹನ, ಆಟೋ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ…
ಸಂವಿಧಾನ ಜಾರಿಯಾಗಿ ಸುಮಾರು 76 ವರ್ಷಗಳ ನಂತರ ವಿಶ್ವ ಭೂಪಟದಲ್ಲಿ ಭಾರತವೆಂಬ ದೇಶದ ಒಟ್ಟು ಸಾಧನೆ, ವೈಫಲ್ಯ ಮತ್ತು ಭವಿಷ್ಯವನ್ನು…