ಭಗತ್ ಸಿಂಗ್ ಮೈದಾನದಲ್ಲಿ ಸೆ. 27 ರಂದು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ

2023-24ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ಸೆ. 27 ಹಾಗೂ ಸೆ.28ರಂದು ಆಯೋಜಿಸಲಾಗುತ್ತಿದ್ದು, ಈಗಾಗಲೇ ದಿನಾಂಕ 21 ಮತ್ತು 22 ಸೆಪ್ಟೆಂಬರ್ 2023 ರಂದು ನಡೆದ 4 ತಾಲ್ಲೂಕಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಹಾಗೂ ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ತಂಡಗಳು/ ಕ್ರೀಡಾಪಟುಗಳು  ಮಾತ್ರ ಭಾಗವಹಿಸಲು ಅವಕಾಶವಿರುತ್ತದೆ.

ಆದ್ದರಿಂದ ದಿನಾಂಕ 27.09.2023 ರಂದು ಭಗತ್‌ಸಿಂಗ್ ಕ್ರೀಡಾಂಗಣ ದೊಡ್ಡಬಳ್ಳಾಪುರದಲ್ಲಿ ಬೆಳಿಗ್ಗೆ 9.00 ಗಂಟೆಗೆ ಆಧಾರ್ ಕಾರ್ಡ್ ಮತ್ತು ಪಾಸ್ ಪೋರ್ಟ್ ಅಳತೆಯ ಭಾವ ಚಿತ್ರದೊಂದಿಗೆ  ಎಂ ಪ್ರಭು, ಅಥ್ಲೆಟಿಕ್ ತರಬೇತುದಾರರು 9945029942 ರವರಲ್ಲಿ ವರದಿ ಮಾಡಿಕೊಂಡು ನೋಂದಣಿ ಮಾಡಿಕೊಳ್ಳುವುದು.

ಆಯೋಜಿಸಲಾಗುವ ಕ್ರೀಡೆಗಳ ವಿವರ

ಅಥ್ಲೆಟಿಕ್ಸ್ – ಪುರುಷ ಮತ್ತು ಮಹಿಳೆಯರಿಗೆ, ವಾಲಿಬಾಲ್ – ಪುರುಷ ಮತ್ತು ಮಹಿಳೆಯರಿಗೆ, ಪುಟ್ಬಾಲ್ – ಪುರುಷರಿಗೆ,

ಖೋ ಖೋ – ಪುರುಷ ಮತ್ತು ಮಹಿಳೆಯರಿಗೆ, ಕಬಡ್ಡಿ – ಪುರುಷ ಮತ್ತು ಮಹಿಳೆಯರಿಗೆ,

ಥ್ರೋಬಾಲ್ – ಪುರುಷ ಮತ್ತು ಮಹಿಳೆಯರಿಗೆ,

ಬ್ಯಾಸ್ಕೆಟ್‌ಬಾಲ್ – ಪುರುಷ ಮತ್ತು ಮಹಿಳೆಯರಿಗೆ,

ಹಾಕಿ – ಪುರುಷ ಮತ್ತು ಮಹಿಳೆಯರಿಗೆ,

ಹ್ಯಾಂಡ್‌ಬಾಲ್ – ಪುರುಷ ಮತ್ತು ಮಹಿಳೆಯರಿಗೆ,

ಟೇಬಲ್ ಟೆನ್ನಿಸ್ – ಪುರುಷ ಮತ್ತು ಮಹಿಳೆಯರಿಗೆ,

ಬಾಲ್ ಬ್ಯಾಡ್ಮಿಂಟನ್ – ಪುರುಷ ಮತ್ತು ಮಹಿಳೆಯರಿಗೆ,

ಕುಸ್ತಿ – ಪುರುಷ ಮತ್ತು ಮಹಿಳೆಯರಿಗೆ,

ಯೋಗ -‌ಪುರುಷ ಮತ್ತು ಮಹಿಳೆಯರಿಗೆ,

ಬ್ಯಾಡ್ಮಿಂಟನ್ – ಪುರುಷ ಮತ್ತು ಮಹಿಳೆಯರಿಗೆ,

ನೆಟ್‌ಬಾಲ್ – ಪುರುಷ ಮತ್ತು ಮಹಿಳೆಯರಿಗೆ.

ಟೆನ್ನಿಸ್ – ಪುರುಷ ಮತ್ತು ಮಹಿಳೆಯರಿಗೆ,

ಈಜು – ಪುರುಷ ಮತ್ತು ಮಹಿಳೆಯರಿಗೆ,

  ಷರತ್ತು ಮತ್ತು ನಿಬಂಧನೆಗಳು

ಜಿಲ್ಲಾ ಮಟ್ಟದಲ್ಲಿ ನಡೆದ ಕ್ರೀಡೆಗಳಲ್ಲಿ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳು ಹಾಗೂ ಗುಂಪು ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳಿಗೆ ಜಿಲ್ಲಾ ಮಟ್ಟದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.

ಜಿಲ್ಲಾ ಮಟ್ಟದಲ್ಲಿ ನಡೆದ ಕ್ರೀಡೆಗಳಲ್ಲಿ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳು ಹಾಗೂ ಗುಂಪು ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳಿಗೆ ವಿಭಾಗ ಮಟ್ಟದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ‌.

ಕ್ರೀಡಾಕೂಟದಲ್ಲಿ ರಕ್ಷಣಾಪಡೆ, ಅರೆರಕ್ಷಣಾಪಡೆ ಸೇರಿದ ಕ್ರೀಡಾಪಟುಗಳು ಭಾಗವಹಿಸಲು ಅವಕಾಶವಿರುವುದಿಲ್ಲ. ಒಬ್ಬ ಕ್ರೀಡಾಪಟು ಅಥವಾ ತಂಡ ಯಾವುದೇ ಜಿಲ್ಲೆಯಲ್ಲಿ ಒಂದು ಬಾರಿ ತಾಲ್ಲೂಕು ಅಥವಾ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ನಂತರ ಬೇರೆ ಯಾವುದೇ ಜಿಲ್ಲೆಯ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ.  ಅಂತಹ ಪ್ರಕರಣವೇನಾದರೂ ದಾಖಲಾದಲ್ಲಿ ಅಥವಾ ಗಮನಕ್ಕೆ ಬಂದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು.

ಒಬ್ಬ ಕ್ರೀಡಾಪಟು 3 ಸ್ಪರ್ಧೆಯಲ್ಲಿ ಮಾತ್ರ (ರಿಲೇ ಸಹಿತ) ಭಾಗವಹಿಸಲು ಅವಕಾಶವಿರುತ್ತದೆ. (ಒಂದು ಟ್ರಾಕ್ ಅಥವಾ 2 ಫೀಲ್ಡ್ / ಒಂದು ಫೀಲ್ಡ್ ಅಥವಾ 2 ಟ್ರಾಕ್ ಈವೆಂಟ್‌ಗಳಲ್ಲಿ ಭಾಗವಹಿಸಲು ಮಾತ್ರ ಅವಕಾಶವಿರುತ್ತದೆ) ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ. ಅದಕ್ಕೆ ಕ್ರೀಡಾಪಟುಗಳು ಬದ್ಧರಾಗಿರುವುದು. ತೀರ್ಪುಗಾರರ ತೀರ್ಮಾನದ ವಿರುದ್ಧ ಯಾವುದೇ ಕ್ರೀಡಾಪಟುಗಳು ಅಶಿಸ್ತಿನಿಂದ ವರ್ತಿಸಿದಲ್ಲಿ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು.

ಕ್ರೀಡಾಕೂಟದ ಸಮಯದಲ್ಲಿ ಕ್ರೀಡಾಪಟುಗಳು ಶಿಸ್ತಿನಿಂದ ವರ್ತಿಸುವುದು. ಯಾವುದೇ ಕ್ರೀಡಾಪಟು ಅಶಿಸ್ತಿನಿಂದ ಅಥವಾ ಯಾವುದೇ ಅಹಿತಕರ ಘಟನೆಯಲ್ಲಿ ಭಾಗಿಯಾದಲ್ಲಿ ಅಂತಹವರ ವಿರುದ್ಧ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು.

ಭಾಗವಹಿಸುವ ಕ್ರೀಡಾಪಟುಗಳು ಕಡ್ಡಾಯವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯವರೇ ಆಗಿರಬೇಕು, ಜಿಲ್ಲಾ  ಮಟ್ಟದ ದಸರಾ ಕ್ರೀಡಾಕೂಟದ ಸಂದರ್ಭದಲ್ಲಿ ಸ್ಥಳೀಯ ತಾಲ್ಲೂಕಿನ ಆಧಾರ್‌ಕಾರ್ಡ್ ಅನ್ನು ಹಾಜರು ಪಡಿಸಬೇಕು ಹಾಗೂ ವಿದ್ಯಾರ್ಥಿಯಾಗಿದ್ದಲ್ಲಿ ಶಾಲಾ/ ಕಾಲೇಜು ಗುರುತಿನ ಚೀಟಿಯನ್ನು ಹಾಜರು ಪಡಿಸಬೇಕು.

ಹೆಚ್ಚಿನ ಮಾಹಿತಿಗಾಗಿ 080-29787443 / 9980590960 ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

10 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

10 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

13 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

16 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

19 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

23 hours ago