ಭಜರಂಗದಳ ಸಂಘಟನೆ ಯಾವುದೇ ದೇಶ ವಿರೋಧಿ, ಭಯೋತ್ಪಾದಕ ಚಟುವಟಿಕೆ ಮಾಡಿಲ್ಲ, ಸಮಾಜ ಘಾತುಕ ಕಾರ್ಯದಲ್ಲಿ ತೊಡಗಿಕೊಂಡಿಲ್ಲ, ಕೇವಲ ಹಿಂದೂ ಪರವಾದ ಹೋರಾಟ, ಸಾಮಾಜಿಕ ಸಾಮರಸ್ಯ, ದೇಶ ಭಕ್ತಿ ಕಾಪಾಡುವ ಸಲುವಾಗಿ ಕೆಲಸ ಮಾಡಿಕೊಂಡು ಬಂದಿದೆ. ಇಂತಹ ಸಂಘಟನೆಯನ್ನು ನಿಷೇಧ ಮಾಡುವ ಭರವಸೆ ನೀಡಿರುವುದು ಖಂಡನೀಯ ಎಂದು ಭಜರಂಗದಳದ ಕೋಲಾರ ವಿಭಾಗದ ಸಂಯೋಜಕ ನರೇಶ್ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು.
2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತಾವು ಅಧಿಕಾರಕ್ಕೆ ಬಂದರೆ ಭಜರಂಗದಳವನ್ನು ನಿಷೇಧಿಸಲಾಗುವುದು ಎಂಬ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿನ ಭರವಸೆಯನ್ನು ಖಂಡಿಸಿದ ಭಜರಂಗ ದಳದ ಮುಖಂಡರು ನಗರದ ತಾಲೂಕು ಕಚೇರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಕಾಂಗ್ರೆಸ್ ಪ್ರಣಾಳಿಕೆಯ ಪ್ರತಿಯನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದ ನಂತರ ಅವರು ಮಾತನಾಡಿದರು.
ಭಜರಂಗದಳವು ಯಾವುದೇ ಮತೀಯ ದ್ವೇಷ ಬಿತ್ತುತ್ತಿಲ್ಲ, ಪಿಎಫ್ಐ ಹಾಗೂ ಭಜರಂಗದಳ ಸಂಘಟನೆಯನ್ನು ಒಂದೇ ತಕ್ಕಡಿಯಲ್ಲಿ ಹಾಕಿ ನಿಷೇಧದ ಭರವಸೆಯನ್ನ ನೀಡಿದ್ದಾರೆ ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದರು.
ಕಾಂಗ್ರೆಸ್ ಪಕ್ಷ ಚುನಾವಣೆ ಹಿನ್ನೆಲೆಯಲ್ಲಿ ಒಂದು ಸಮುದಾಯ ಓಲೈಕೆ ಮಾಡಲು ಈ ರೀತಿಯ ಘೋಷಣೆ ಮಾಡಿದೆ. ಹಿಂದೂಗಳನ್ನು ಕೆಣಕಿದರೆ ಏನಾಗಲಿದೆ ಎಂಬುದು ಗೋದ್ರಾ ಹತ್ಯಾಕಾಂಡ, ಬಾಬರಿ ಮಸೀದಿ ಧ್ವಂಸ ಪ್ರಕರಣ ನೋಡಿ ತಿಳಿಯಲಿ ಎಂದು ವಾಗ್ದಾಳಿ ನಡೆಸಿದರು.
ಪ್ರತಿಭಟನೆಯಲ್ಲಿ ಭಜರಂಗದಳ ಜಿಲ್ಲಾ ಉಪಾಧ್ಯಕ್ಷ ಮಹಾಲಿಂಗ, ವಿಶ್ವ ಹಿಂದೂ ಪರಿಷತ್ ತಾಲ್ಲೂಕು ಅಧ್ಯಕ್ಷ ಮಧುಸೂದನ್ ಗೌಡ, ಕಾರ್ಯದರ್ಶಿ ರವಿಕುಮಾರ್, ಬಜರಂಗದಳ ತಾಲೂಕು ಸಂಯೋಜಕ ಗಂಗಾಧರ್ ಸೇರಿದಂತೆ ಜಿಲ್ಲಾ ಘಟಕ, ತಾಲೂಕು ಘಟಕದ ಪದಾಧಿಕಾರಿಗಳು ಹಾಜರಿದ್ದರು.
ಲಾರಿಯನ್ನು ಅಡ್ಡಾದಿಡ್ಡಿಯಾಗಿ ಚಾಲಾಯಿಸಿಕೊಂಡು ಬಂದ ಚಾಲಕನು, ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನಗಳಿಗೆ ಡಿಕ್ಕಿ ಹೊಡೆದು ಕಿರಿಕಿರಿ ಉಂಟು ಮಾಡಿರುವ ಘಟನೆ…
ಕಾರವಾರ:- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತೆ ಯೋಜನೆಗಳನ್ನು ಒದಗಿಸಲು ರಾಜ್ಯದಲ್ಲಿನ ಡೀಸೆಲ್ ಪೆಟ್ರೋಲ್ ಮೇಲೆ ವಿಧಿಸುತ್ತಿರುವ…
ಬದುಕಿನ ಬೆಳದಿಂಗಳಲ್ಲಿ ನಮ್ಮ ಹುರುಪು, ಹುಕುಂಗಳು ಹಾಗೂ ಹಲವು ವಿಭಿನ್ನತೆಗಳ ವಿಚಾರಾರ್ಥಗಳು ನೆನೆಗುದಿಗೆ ಬಿದ್ದಿದ್ದುಂಟು. ಹಾಗೆಯೇ ಸದ್ಗುಣ-ದುರ್ಗುಣಗಳ ವ್ಯತ್ಯಾಸವನು ಅರಿತು…
ಕೃಷಿ ಹೊಂಡಕ್ಕೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3 ಗಂಟೆಯಲಿ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ…
2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ…
ತೋಟಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ತೋಟಗಾರಿಕೆ…