ಭಾಗ್ಯಜ್ಯೋತಿ, ಕುಟೀರ ಜ್ಯೋತಿಗೆ ಹಿಂದೆ 18 ಯೂನಿಟ್‍ಗಳ ಮಿತಿಯಿತ್ತು. ಅದನ್ನು 40 ಯೂನಿಟ್‍ಗಳಿಗೆ ನಮ್ಮ ಸರ್ಕಾರ ಹೆಚ್ಚಳ ಮಾಡಿತ್ತು. ಈಗ ಗೃಹಜ್ಯೋತಿ ಯೋಜನೆ ಜಾರಿಯ ನಂತರ ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತಜ್ಯೋತಿಗಳನ್ನು ಈ ಯೋಜನೆಯಡಿ ಸೇರಿಸಿ, 58 ಯೂನಿಟ್‍ವರಗೆ ಉಚಿತವಾಗಿ ವಿದ್ಯುತ್ ನೀಡಲಾಗುತ್ತಿದೆ. ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತಜ್ಯೋತಿ ಯೋಜನೆಗಳಡಿ ರೂ.389 ಕೋಟಿ ಬಾಕಿ ಬಿಲ್ ಇದ್ದು, ಬಿಲ್ ಬಾಕಿ ಇರುವುದರಿಂದ ಈ ಕುಟುಂಬಗಳಿಗೆ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಪೂರೈಸಲು ತೊಂದರೆ ಆಗುತ್ತಿತ್ತು. ಸರ್ಕಾರವು ಬಾಕಿ ಮೊತ್ತವನ್ನು ಮನ್ನಾ ಮಾಡುವ ಮೂಲಕ ಬಡಕುಟುಂಬಗಳ ಮೇಲಿದ್ದ ಆರ್ಥಿಕ ಹೊರೆಯನ್ನು ಇಳಿಸಿದೆ.