ಎರಡು ದಿನಗಳ ಭಾರತ ಭೇಟಿಗಾಗಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ವಿಶೇಷ ವಿಮಾನದಲ್ಲಿ ಗುರುವಾರ ಸಂಜೆ ದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಖುದ್ದು ಪಾಲಂ ವಿಮಾನ ನಿಲ್ದಾಣಕ್ಕೆ ತೆರಳಿ ಭಾರತ–ರಷ್ಯಾ 23ನೇ ವಾರ್ಷಿಕ ಶೃಂಗಸಭೆಗಾಗಿ ದೆಹಲಿಗೆ ಆಗಮಿಸಿದ ಪುಟಿನ್ ಅವರನ್ನು ಸ್ವಾಗತಿಸಿದರು.
ನಂತರ ಒಂದೇ ಕಾರಿನಲ್ಲಿ ಇಬ್ಬರು ನಾಯಕರು ಪ್ರಯಾಣಿಸಿದರು..
ಕಳೆದ ವರ್ಷ ಜುಲೈನಲ್ಲಿ ಪ್ರಧಾನಿ ಮೋದಿ ಅವರು ಮಾಸ್ಕೋಗೆ ಭೇಟಿ ನೀಡಿದ್ದಾಗ ರಷ್ಯಾ ಅಧ್ಯಕ್ಷ ಪುಟಿನ್ ಅವರು ನೀಡಿದ ಆತಿಥ್ಯಕ್ಕೆ ಪ್ರತಿಯಾಗಿ ಪ್ರಧಾನಿ ಮೋದಿ ಅವರು ಇಂದು ರಾತ್ರಿ ಅವರಿಗೆ ಖಾಸಗಿ ಭೋಜನ ಕೂಟ ಆಯೋಜಿಸಿದ್ದಾರೆ.
ಭಾರತ–ರಷ್ಯಾ 23ನೇ ವಾರ್ಷಿಕ ಶೃಂಗಸಭೆಯು ಶುಕ್ರವಾರ ನಡೆಯಲಿದ್ದು, ಅದಕ್ಕೂ ಮೊದಲು ರಾಷ್ಟ್ರಪತಿ ಭವನದಲ್ಲಿ ಔಪಚಾರಿಕ ಸ್ವಾಗತ, ನಂತರ ಭಾರತದ ಉನ್ನತ ಮಟ್ಟದ ದ್ವಿಪಕ್ಷೀಯ ಕಾರ್ಯಕ್ರಮಗಳಿಗೆ ಸಾಂಪ್ರದಾಯಿಕ ಸ್ಥಳವಾದ ಹೈದರಾಬಾದ್ ಹೌಸ್‌ನಲ್ಲಿ ಮಾತುಕತೆ ನಡೆಯಲಿದೆ
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…
ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…
ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…
ಡಿಸೆಂಬರ್ 23...... ರೈತರಿಗೂ ಒಂದು ದಿನವಂತೆ..... ಭತ್ತ ಬೆಳೆಯುವ ರೈತ ಆತ್ಮಹತ್ಯೆಯತ್ತ, ಅಕ್ಕಿ ಮಾರುವ ವ್ಯಾಪಾರಿ ಅರಮನೆಯತ್ತಾ...... ಇತರ ಕೆಟ್ಟ…