ಭಾರತದಲ್ಲಿ ರಷ್ಯಾ ಅಧ್ಯಕ್ಷ ಪುಟಿನ್: ಖುದ್ದು ಪಾಲಂ ಏರ್​​ಪೋರ್ಟ್​​ಗೆ ತೆರಳಿ ಸ್ವಾಗತಿಸಿದ ಪ್ರಧಾನಿ ನರೇಂದ್ರ ಮೋದಿ

ಎರಡು ದಿನಗಳ ಭಾರತ ಭೇಟಿಗಾಗಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ವಿಶೇಷ ವಿಮಾನದಲ್ಲಿ ಗುರುವಾರ ಸಂಜೆ ದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಖುದ್ದು ಪಾಲಂ ವಿಮಾನ ನಿಲ್ದಾಣಕ್ಕೆ ತೆರಳಿ ಭಾರತ–ರಷ್ಯಾ 23ನೇ ವಾರ್ಷಿಕ ಶೃಂಗಸಭೆಗಾಗಿ ದೆಹಲಿಗೆ ಆಗಮಿಸಿದ ಪುಟಿನ್‌ ಅವರನ್ನು ಸ್ವಾಗತಿಸಿದರು.

ನಂತರ ಒಂದೇ ಕಾರಿನಲ್ಲಿ ಇಬ್ಬರು ನಾಯಕರು ಪ್ರಯಾಣಿಸಿದರು..‌

ಕಳೆದ ವರ್ಷ ಜುಲೈನಲ್ಲಿ ಪ್ರಧಾನಿ ಮೋದಿ ಅವರು ಮಾಸ್ಕೋಗೆ ಭೇಟಿ ನೀಡಿದ್ದಾಗ ರಷ್ಯಾ ಅಧ್ಯಕ್ಷ ಪುಟಿನ್ ಅವರು ನೀಡಿದ ಆತಿಥ್ಯಕ್ಕೆ ಪ್ರತಿಯಾಗಿ ಪ್ರಧಾನಿ ಮೋದಿ ಅವರು ಇಂದು ರಾತ್ರಿ ಅವರಿಗೆ ಖಾಸಗಿ ಭೋಜನ ಕೂಟ ಆಯೋಜಿಸಿದ್ದಾರೆ.

ಭಾರತ–ರಷ್ಯಾ 23ನೇ ವಾರ್ಷಿಕ ಶೃಂಗಸಭೆಯು ಶುಕ್ರವಾರ ನಡೆಯಲಿದ್ದು, ಅದಕ್ಕೂ ಮೊದಲು ರಾಷ್ಟ್ರಪತಿ ಭವನದಲ್ಲಿ ಔಪಚಾರಿಕ ಸ್ವಾಗತ, ನಂತರ ಭಾರತದ ಉನ್ನತ ಮಟ್ಟದ ದ್ವಿಪಕ್ಷೀಯ ಕಾರ್ಯಕ್ರಮಗಳಿಗೆ ಸಾಂಪ್ರದಾಯಿಕ ಸ್ಥಳವಾದ ಹೈದರಾಬಾದ್ ಹೌಸ್‌ನಲ್ಲಿ ಮಾತುಕತೆ ನಡೆಯಲಿದೆ

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

19 minutes ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

10 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

23 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 day ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

1 day ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 day ago