ಭಾರತದಲ್ಲಿ ಸಂವಿಧಾನವೇ ಸರ್ವೋಚ್ಛ- ನಿವೃತ್ತ ಮುಖ್ಯಶಿಕ್ಷಕ ಕೆ.ವಿ.ವೆಂಕಟೇಶರೆಡ್ಡಿ

ಭಾರತದಲ್ಲಿ ಸಂವಿಧಾನವೇ ಸರ್ವೋಚ್ಚವಾದುದು. ಸಂವಿಧಾನ ಜಾರಿಗೆ ಬಂದ ಕಾರಣದಿಂದಲೇ ನಮ್ಮ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯವಾಯಿತು ಎಂದು ನಿವೃತ್ತ ಮುಖ್ಯಶಿಕ್ಷಕ ಕೆ.ವಿ.ವೆಂಕಟೇಶರೆಡ್ಡಿ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ನಮ್ಮ ದೇಶದ ಪ್ರತಿಯೊಬ್ಬರೂ  ಸಂವಿಧಾನವನ್ನು ಗೌರವಿಸಬೇಕು. ಸಂವಿಧಾನದ ಆಶಯಗಳನ್ನು ಸಾಕಾರಗೊಳಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಸಂವಿಧಾನ ಜಾರಿಗೆ ಬಂದ ದಿನವಾದ  ಗಣರಾಜ್ಯೋತ್ಸವ ದಿನಾಚರಣೆ ಪ್ರತಿಯೊಬ್ಬ ಭಾರತೀಯ ಪ್ರಜೆಗೂ ಮಹತ್ವದ ದಿನವಾಗಿದೆ ಎಂದರು.

ನಮ್ಮ ಸಂವಿಧಾನವು ಭಾರತವನ್ನು ಸಾರ್ವಭೌಮ, ಸಮಾಜವಾದಿ, ಜಾತ್ಯತೀತ ಮತ್ತು ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ಮಾಡಿದೆ. ಸಂವಿಧಾನ ಜಾರಿಗೆ ಬಂದ ಕಾರಣದಿಂದಲೇ ನಮ್ಮ ದೇಶದ ಪ್ರತಿಯೊಬ್ಬ ಪ್ರಜೆಗೂ   ಮೂಲಭೂತ ಹಕ್ಕುಗಳು, ಶಿಕ್ಷಣ ಹಕ್ಕುಗಳು, ಧಾರ್ಮಿಕ ಹಕ್ಕುಗಳು ದೊರಕಿವೆ. ಭಾರತದ ಸಂವಿಧಾನ ರಚನೆಯಲ್ಲಿ‌    ಡಾ.ಬಿ.ಆರ್.ಅಂಬೇಡ್ಕರ್ ಮಹತ್ವದ ಪಾತ್ರ ವಹಿಸಿದ್ದಾರೆ.  ಡಾ.ಬಿ‌.ಆರ್.ಅಂಬೇಡ್ಕರ್ ಅವರು ವಿಶ್ವದ ಹಲವು ದೇಶಗಳ ಸಂವಿಧಾನಗಳನ್ನು ಅಧ್ಯಯನ ಮಾಡಿ, ಭಾರತಕ್ಕೆ ಅಗತ್ಯವಾದ ಅಂಶಗಳನ್ನು ಭಾರತದ ಸಂವಿಧಾನದಲ್ಲಿ  ಸೇರ್ಪಡೆಗೊಳಿಸಿದ್ದಾರೆ ಎಂದರಯ.

ಕಾರ್ಯಕ್ರಮದಲ್ಲಿ  ಭಾರತ ಸ್ಕೌಟ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ಕಾರ್ಯನಿತರ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಗಂಗರಾಜ ಶಿರವಾರ,  ಕನ್ನಡ ಜಾಗೃತ ವೇದಿಕೆ ಅಧ್ಯಕ್ಷ. ನಾಗರಾಜು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪಿ.ಗೋವಿಂದರಾಜು, ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್, ಗೌರವ ಕಾರ್ಯದರ್ಶಿ ಎ.ಜಯರಾಮ್, ಕೋಶಾಧ್ಯಕ್ಷ  ಸಾ.ಲ.ಕಮಲನಾಥ್, ಸಂಘಟನಾ ಕಾರ್ಯದರ್ಶಿ ಆರ್.ಗೋವಿಂದರಾಜು, ಕಸಬಾ ಹೋಬಳಿ ಘಟಕ  ಅಧ್ಯಕ್ಷ ದಾದಾಪೀರ್, ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿ ನಾಗರತ್ನಮ್ಮ, ಮುನಿರಾಜು, ಷಪೀರ್, ಕೋದಂಡರಾಮ್, ದರ್ಗಾಜೋಗಿಹಳ್ಳಿ ಮಲ್ಲೇಶ್, ದರ್ಶನ್ ಮೊದಲಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

35 minutes ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

6 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

20 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

1 day ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago