ಭಾರತದ ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ‘ಇಂಡಿಯನ್ ಪೀನಲ್ ಕೋಡ್'(ಐಪಿಸಿ), ‘ಕೋಡ್ ಆಫ್ ಕ್ರಿಮಿನಲ್ ಪ್ರೊಸಿಜರ್'(ಸಿಆರ್‌ಪಿಸಿ) ಮತ್ತು ‘ಎವಿಡೆನ್ಸ್ ಆಕ್ಟ್’ಗಳ ಬದಲಿಗೆ ಇಂದಿನಿಂದ (ಜುಲೈ.1) ಹೊಸ ಮೂರು ಕ್ರಿಮಿನಲ್ ಕಾನೂನುಗಳಾದ ‘ಭಾರತೀಯ ನ್ಯಾಯ ಸಂಹಿತಾ'(ಬಿಎನ್‌ಎಸ್), ‘ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ'(ಬಿಎನ್‌ಎಸ್‌ಎಸ್) ಮತ್ತು ‘ಭಾರತೀಯ ಸಾಕ್ಷ್ಯ ಅಧಿನಿಯಮ'(ಬಿಎಸ್‌ಎ) ದೇಶಾದ್ಯಂತ ಜಾರಿಯಾಗಿವೆ.
1.ಭಾರತೀಯ ದಂಡ ಸಂಹಿತೆ (ಐಪಿಸಿ) ಬದಲಿಗೆ ಭಾರತೀಯ ನ್ಯಾಯ ಸಂಹಿತೆ(ಬಿಎನ್‌ಎಸ್)
2.ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಬದಲಿಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್)
3.ಭಾರತೀಯ ಸಾಕ್ಷ್ಯ ಕಾಯಿದೆ ಬದಲಿಗೆ ಭಾರತೀಯ ಸಾಕ್ಷಿ ಅಧಿನಿಯಮ(ಬಿಎಸ್‌ಎ) ಜಾರಿ
ಹಳೆಯ ಕಾನೂನುಗಳು ಬ್ರಿಟಿಷ್ ಸಾಮ್ರಾಜ್ಯದ ಹಿತಾಸಕ್ತಿಗೆ ಆದ್ಯತೆ ನೀಡುತ್ತಿದ್ದವು. ಆದರೆ, ಈ ಮೂರು ಹೊಸ ಕಾನೂನುಗಳ ಉದ್ದೇಶ ಶಿಕ್ಷೆ ನೀಡುವ ಬದಲಿಗೆ ನ್ಯಾಯ ಒದಗಿಸುವುದಾಗಿದೆ.
ಭಾರತೀಯ ದಂಡ ಸಂಹಿತೆ ಬದಲಿಗೆ ಬರಲಿರುವ ಭಾರತೀಯ ನ್ಯಾಯ ಸಂಹಿತಾ ಕಾಯಿದೆಯು ಹಿಂದಿನ 511 ಸೆಕ್ಷನ್‌ಗಳ ಬದಲಿಗೆ 358 ಸೆಕ್ಷನ್‌ಗಳನ್ನು ಹೊಂದಿದೆ. ಇಲ್ಲೂ175 ಸೆಕ್ಷನ್‌ಗಳನ್ನು ಬದಲಿಸಿ, 8 ಹೊಸ ಸೆಕ್ಷನ್‌ಗಳನ್ನು ಸೇರಿಸಿ, 22 ಸೆಕ್ಷನ್‌ಗಳನ್ನು ರದ್ದುಗೊಳಿಸಲಾಗಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಈಗ 513 ಸೆಕ್ಷನ್‌ಗಳನ್ನು ಹೊಂದಿದ್ದು, ಹಳೆಯ ಕಾನೂನಿನ 160 ಸೆಕ್ಷನ್‌ಗಳನ್ನು ಬದಲಾಯಿಸಲಾಗಿದೆ. ಅದರಲ್ಲಿ 9 ಹೊಸ ಸೆಕ್ಷನ್ ಸೇರ್ಪಡೆ, 9 ಸೆಕ್ಷನ್‌ಗಳನ್ನು ರದ್ದುಗೊಳಿಸಲಾಗಿದೆ. ಭಾರತೀಯ ಸಾಕ್ಷಿ ಸಂಹಿತೆ ಹಿಂದಿನ 167ರ ಬದಲಿಗೆ 170 ವಿಭಾಗಗಳನ್ನು ಹೊಂದಿರುತ್ತದೆ. 23 ವಿಭಾಗಗಳನ್ನು ಬದಲಾಯಿಸಲಾಗಿದೆ. ಒಂದು ಹೊಸ ವಿಭಾಗ ಸೇರಿಸಲಾಗಿದೆ ಮತ್ತು 5 ವಿಭಾಗಗಳನ್ನು ರದ್ದುಗೊಳಿಸಲಾಗಿದೆ.
ಹೊಸ ಕಾನೂನುಗಳ ಅನುಷ್ಠಾನದ ನಂತರ, ಎಫ್‌ಐಆರ್‌ನಿಂದ ನ್ಯಾಯಾಲಯದ ತೀರ್ಪಿನವರೆಗೆ, ಸಂಪೂರ್ಣ ಪ್ರಕ್ರಿಯೆಯು ಆನ್‌ಲೈನ್ ಆಗಿರುತ್ತದೆ ಮತ್ತು ಭಾರತವು ಕ್ರಿಮಿನಲ್ ನ್ಯಾಯ ವ್ಯವಸ್ಥೆಯಲ್ಲಿಆಧುನಿಕ ತಂತ್ರಜ್ಞಾನವನ್ನು ಅತಿ ಹೆಚ್ಚು ಬಳಸುವ ದೇಶವಾಗಲಿದೆ. ಈ ಕಾನೂನುಗಳು ತಾರೀಖ್-ಪೆ-ತಾರೀಖ್ (ಪದೇಪದೆ ವಿಚಾರಣೆ ಮುಂದೂಡುವುದು) ಪ್ರವೃತ್ತಿಗೆ ಅಂತ್ಯ ಹಾಡುವ ಜತೆಗೆ ಮೂರು ವರ್ಷಗಳಲ್ಲಿ ನ್ಯಾಯವನ್ನು ನೀಡುವ ನ್ಯಾಯಾಂಗ ವ್ಯವಸ್ಥೆ ಖಾತ್ರಿಪಡಿಸುತ್ತದೆ ಎನ್ನಲಾಗುತ್ತಿದೆ.
ನಮ್ಮ ರಾಜ್ಯದ ಎಲ್ಲಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ, ಎಲ್ಲಾ 7 ವಲಯಗಳು, 6 ಕಮಿಷನರೇಟ್ ಘಟಕಗಳು ಮತ್ತು 1063 ಪೊಲೀಸ್ ಠಾಣೆಗಳಿಗೆ ತರಬೇತಿ ನೀಡಲಾಗಿದ್ದು, ಈ ವಿಷಯದ ಬಗ್ಗೆ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸ್ ಮಹಾನಿರ್ದೇಶಕ ಡಾ.ಅಲೋಕ್ ಮೋಹನ್ ತಿಳಿಸಿದ್ದಾರೆ.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…