“ಭಾರತದ ಅಸ್ಮಿತೆ ಮಹಾತ್ಮಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ”

ಭಾರತದ ಅಸ್ಮಿತೆಯಾಗಿರುವ ಮಹಾತ್ಮಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಬದುಕು ಮತ್ತು ಆದರ್ಶಗಳು ಜಗತ್ತಿನ ಮನ್ನಣೆ ಪಡೆದಿವೆ ಎಂದು ನಿವೃತ್ತ ಮುಖ್ಯಶಿಕ್ಷಕ ಕೆ.ವಿ.ವೆಂಕಟೇಶರೆಡ್ಡಿ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ ನಡೆದ ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು  ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಮಹಾತ್ಮಗಾಂಧಿ ಅವರ  ಶಾಂತಿ ಮತ್ತು ಅಹಿಂಸಾ ಅಸ್ತ್ರಗಳ ಎದುರು ಸುಸಜ್ಜಿತ ಸೇನೆ ಹೊಂದಿದ್ದ ಬ್ರಿಟನ್‌ ಸರ್ಕಾರ ತಲೆಬಾಗಿತ್ತು. ಜಾಗತಿಕ ಮಟ್ಟದಲ್ಲಿ ಮಹಾತ್ಮಗಾಂಧಿ ಅವರ  ಹೋರಾಟದ ಹಾದಿಯನ್ನು ಮಾರ್ಟಿನ್ ಲೂಥರ್ ಕಿಂಗ್, ನೆಲ್ಸನ್ ಮಂಡೇಲಾ ಮೊದಲಾದವರು ಅನುಸರಿಸಿದರು. ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪ್ರಾಮಾಣಿಕತೆ, ಸರಳತೆ, ದೇಶಭಕ್ತಿ, ನಿಸ್ವಾರ್ಥ ಸೇವೆ ಸದಾ ಸ್ಮರಣೀಯವಾಗಿದೆ. ಜೈ ಜವಾನ್, ಜೈ ಕಿಸಾನ್” ಘೋಷವಾಕ್ಯದ ಮೂಲಕ ಭಾರತ  ದೇಶದ ಶ್ರಮಜೀವಿಗಳನ್ನು ಪ್ರೋತ್ಸಾಹಿಸಿದರು ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ  ಕನ್ನಡ ಸಾಹಿತ್ಯ ಪರಿಷತ್ತು ಜ ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ, ಮಹಾತ್ಮಗಾಂಧಿ ಅವರ ತತ್ತ್ವ ಚಿಂತನೆ ಮತ್ತು ಆದರ್ಶಗಳನ್ನು ದಮನ ಮಾಡುವ ಹುನ್ನಾರಗಳು ಖಂಡನೀಯವಾಗಿದೆ. ಇಂದಿನ ಯುವಜನತೆ ಮಹಾತ್ಮಗಾಂಧಿ ಅವರ ವಿಚಾರಧಾರೆಗಳನ್ನು ಸಮಗ್ರವಾಗಿ ಅರ್ಥ ಮಾಡಿಕೊಳ್ಳಬೇಕು. ಮಹಾತ್ಮಗಾಂಧಿ ಅವರ ಆದರ್ಶಗಳು ಯುವಜನತೆಗೆ  ಮಾರ್ಗದರ್ಶಕ ಆಗಬೇಕು. ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜೀವನವು ಸರಳತೆ ಮತ್ತು ನೈತಿಕ ನಡವಳಿಕೆಗೆ ಸಾಕ್ಷಿಯಾಗಿದೆ. ಭಾರತ ದೇಶದ ಏಕತೆ ಮತ್ತು ಸಮಗ್ರತೆಯನ್ನು ಕಾಪಾಡುವಲ್ಲಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಬದ್ಧತೆ  ಎಲ್ಲಾ ಕಾಲಕ್ಕೂ  ಪ್ರೇರಣೆಯಾಗಿದೆ ಎಂದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್ ಮಾತನಾಡಿ,  ದೊಡ್ಡಬಳ್ಳಾಪುರ ತಾಲ್ಲೂಕಿನ ಹಲವಾರು ಸ್ವಾತಂತ್ರ್ಯ ಹೋರಾಟಗಾರರಿಗೆ  ಮಹಾತ್ಮಗಾಂಧಿ ಅವರ ಪ್ರೇರಣಾಶಕ್ತಿಯಾಗಿದ್ದರು. ಜವಳಿ ಕ್ಷೇತ್ರದಲ್ಲಿ ಸುಸ್ಥಿರತೆ, ಪರಿಸರ ಸ್ನೇಹಪರತೆಯನ್ನು ಭಾರತೀಯ ಪ್ರಜೆಗಳಿಗೆ ಮಹಾತ್ಮಗಾಂಧಿ ಅರಿವು ಮೂಡಿಸಿದ್ದರು. ಭಾರತ ಕಂಡ ಅತ್ಯಂತ ಪ್ರಾಮಾಣಿಕ, ದಕ್ಷ ಪ್ರಧಾನಿ ಎಂದರೆ ಲಾಲ್ ಬಹಾದ್ದೂರ್ ಶಾಸ್ತ್ರಿ ಆಗಿದ್ದಾರೆ. ಅವರ ಸ್ವಾಭಿಮಾನ ಮತ್ತು ದೇಶಾಭಿಮಾನ ಭಾರತೀಯ ನಾಗರೀಕರಿಗೆ ಎಂದಿಗೂ ಮಾದರಿ ಎಂದರು.

ಕಾರ್ಯಕ್ರಮದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ದೊಡ್ಡಬಳ್ಳಾಪುರ ತಾಲ್ಲೂಕು ಕಸಾಪ ಅಧ್ಯಕ್ಷ ಪಿ.ಗೋವಿಂದರಾಜು, ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾಮಹಾದೇವ್, ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಕಸಬಾ ಹೋಬಳಿ ಘಟಕದ ಅಧ್ಯಕ್ಷ ಪಿ.ಡಿ.ದಾದಾಪೀರ್, ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿಗಳಾದ  ನಾಗರತ್ನಮ್ಮ, ಸಫೀರ್, , ಇಸ್ತೂರು ಕೋದಂಡರಾಮ ಭಜನಾ ಮಂಡಲಿ ಕಾರ್ಯದರ್ಶಿ ರಂಗಸ್ವಾಮಯ್ಯ, ರಂಗಭೂಮಿ ಕಲಾವಿದ ಸಂಘದ ಜಿಲ್ಲಾ ಕಾರ್ಯದರ್ಶಿ  ಪುಟ್ಟಸಿದ್ದಯ್ಯ, ಗೆಜ್ಜಗದಹಳ್ಳಿ ಮುನಿರಾಜು,   ಲಾವಣ್ಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಎಂ.ಸಿ.ಮಂಜುನಾಥ್, ಕಲಾವಿದ ದರ್ಗಾಜೋಗಿಹಳ್ಳಿ ಮಲ್ಲೇಶ್, ಕವಿಗಳಾದ ಮಹಾದೇವಪ್ಪ, ಅಂಜನಗೌಡ, ಶ್ರೀನಿವಾಸ್,   ನಾಗದಳ ನಟರಾಜ್, ಕನ್ನಡ ಜಾಗೃತ ವೇದಿಕೆಯ ಜಿಲ್ಲಾಧ್ಯಕ್ಷ ನಾಗರಾಜ್, ತಾಲ್ಲೂಕು ಅಧ್ಯಕ್ಷ ಶಶಿಧರ್, ಮಂಜುನಾಥ್  ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

4 hours ago

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

7 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

8 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

24 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

1 day ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

1 day ago