ಅಂಧರ ಟಿ20 ವಿಶ್ವಕಪ್ ಟೂರ್ನಿಯ ಫೈನಲ್‌ನಲ್ಲಿ ಬಾಂಗ್ಲಾದೇಶದ ವಿರುದ್ಧ ಗೆಲುವು ಸಾಧಿಸುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿರುವ ಭಾರತೀಯ ತಂಡಕ್ಕೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಅಭಿನಂದನೆ ಸಲ್ಲಿಸಿದ್ದಾರೆ.
2012, 2017ರಲ್ಲಿ ನಡೆದ ಆವೃತ್ತಿಯಲ್ಲಿ ಪಾಕಿಸ್ತಾನವನ್ನು ಮಣಿಸಿದ್ದ ಭಾರತ ಅಂಧರ ಕ್ರಿಕೆಟ್ ತಂಡ ಮೂರನೇ ಆವೃತ್ತಿಯಲ್ಲೂ ಗೆದ್ದು ಬೀಗಿದೆ. ಈ ಮೂಲಕ ತಮ್ಮ ಅಂಗವೈಕಲ್ಯವನ್ನು ಮೆಟ್ಟಿನಿಂತು ಅದ್ಭುತ ಸಾಧನೆ ಮಾಡಿರುವ ತಂಡಕ್ಕೆ ಸಚಿವರು ಪ್ರಶಂಸಿದ್ದಾರೆ.
ಇದೇ ವೇಳೆ ಅಂಧರ ಟಿ-20 ವಿಶ್ವಕಪ್ ಪ್ರಾಯೋಜಕತ್ವ ವಹಿಸಿರುವ ಸಮರ್ಥನಂ ಟ್ರಸ್ಟ್‌ಗೆ ಅಭಿನಂದನೆ ಸಲ್ಲಿಸಿದ್ದಾರೆ. ಅಂಧರ ಟಿ-20 ವಿಶ್ವಕಪ್ 2012ರಲ್ಲಿ ಮೊದಲ ಸಲ ಬೆಂಗಳೂರಿನಲ್ಲಿ ಆಯೋಜನೆಗೊಂಡಿದ್ದು, ಅಂದಿನಿಂದಲೂ ಸಮರ್ಥನಂ ಟ್ರಸ್ಟ್ ಪ್ರಾಯೋಜಕತ್ವ ವಹಿಸಿಕೊಳ್ಳುತ್ತಾ ಬಂದಿದೆ. ಸಮರ್ಥನಂ ಟ್ರಸ್ಟ್‌ಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಒಂದು ಕೋಟಿ ರೂಪಾಯಿ ಆರ್ಥಿಕ ನೆರವು ನೀಡಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಸಾಧನೆಗಳನ್ನು ಮಾಡಲಿ ಎಂದು ಸಚಿವ ಡಾ.ನಾರಾಯಣಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…
ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…
ಡಿಪಿಎಲ್ ಸೀಸನ್-1 ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…
ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…