ಇಂದು ಭಾರತದ 100 ಲೋಕಸಭಾ ಕ್ಷೇತ್ರಗಳಲ್ಲಿ ಮತ ಚೋರಿಯಾಗಿರುವುದನ್ನು ಗುರುತಿಸಲಾಗಿದೆ. ಅಲ್ಲದೇ ನಮ್ಮ ರಾಜ್ಯದ ಮಹದೇವಪುರ ಲೋಕಸಭಾ ಕ್ಷೇತ್ರದಲ್ಲಿ ಮಾತಾಚೋರಿಯಾಗಿರುವುದು ಸಾಭೀತಾಗಿದೆ. ಈ ಮತಚೋರಿ ಕುರಿತು ದೇಶದ ಜನರಿಗೆ ತಿಳಿಸುವ ಅವಶ್ಯಕತೆ ಇದೆ ಈ ನಿಟ್ಟಿನಲ್ಲಿ ಈ ವೋಟ್ ಚೋರಿ ವಿರುದ್ಧ ಸಹಿ ಸಂಗ್ರಹ ಅಭಿಯಾನ ಪ್ರಾರಂಭಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಹಾಗೂ ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ ಹೇಳಿದರು.
ಕೇಂದ್ರ ಬಿಜೆಪಿ ಸತತವಾಗಿ 3 ಬಾರಿ ಮತಗಳ್ಳತನ ಮಾಡುವ ಮೂಲಕ ದೇಶದಲ್ಲಿ ಅಧಿಕಾರ ಚುಕ್ಕಾಣಿ ಹಿಡಿದಿದೆ. ಈ ಹಿನ್ನೆಲೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮುಂದಿನ ಪೀಳಿಗೆಯನ್ನು ಉಳಿಸುವ ನಿಟ್ಟಿನಲ್ಲಿ ಹೋರಾಟ ಮಾಡುತ್ತಿದ್ದಾರೆ. ಅನೇಕ ರಾಜ್ಯಗಳಲ್ಲಿ ಬಿಜೆಪಿ ವೋಟ್ ಚೋರಿ ಮಾಡುವ ಮೂಲಕ ಅಧಿಕಾರಕ್ಕೆ ಬಂದಿದೆ. ಇದು ದೇಶದ ಜನತೆಗೆ ಮಾಡುತ್ತಿರುವ ಮಹಾಮೋಸ ಎಂದು ಆರೋಪಿಸಿದರು.
ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲಿ ನಡೆದ ವೋಟ್ ಚೋರಿ ವಿರುದ್ಧ ಸಹಿ ಸಂಗ್ರಹ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮತಗಳ್ಳತನ ಕುರಿತು ಚುನಾವಣಾ ಅಧಿಕಾರಿಗಳಿಗೆ ಮನಮುಟ್ಟುವಂತೆ ನಮ್ಮ ನಾಯಕರಾದ ರಾಹುಲ್ ಗಾಂಧಿಯವರು ತಿಳಿಸುವ ಪ್ರಯತ್ನ ಮಾಡಿದರು. ಆದರೆ ಯಾವುದೇ ಪ್ರಯೋಜನವಾಗಿಲ್ಲ, ಕಾರಣ ಎಲ್ಲಾ ಇಲಾಖೆಗಳು ಬಿಜೆಪಿ ಪಕ್ಷದ ಅಧೀನದಲ್ಲಿ ಇರುವಂತೆ ಕಾಣುತ್ತದೆ ಹಾಗಾಗಿ ಭಾರತೀಯ ಚುನಾವಣಾ ಆಯೋಗ ಆಧಿಕಾರಿಗಳಿಗೆ ಸತ್ಯಂಶ ತಿಳಿಸುವ ನಿಟ್ಟಿನಲ್ಲಿ ಮತದಾರರಿಂದ ಸಹಿ ಸಂಗ್ರಹ ಅಭಿಯಾನ ಆಯೋಜಿಸಲಾಗಿದೆ ಎಂದರು.
ಕೆಪಿಸಿಸಿ ಉಪಾಧ್ಯಕ್ಷ ವೆಂಕಟೇಶ್ ಮಾತನಾಡಿ, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸಹಿ ಮಾಡುವ ಮೂಲಕ ಮತಗಳ್ಳತನ ನಿಲ್ಲಿಸಲು ಸಹಕರಿಸಬೇಕೆಂದು ಮನವಿ ಮಾಡಿದರು.
ಒಬ್ಬನೆ ಮತದಾರ ದೇಶದ 4-5 ಕಡೆ ಮತದಾನ ಮಾಡುವುದಾಗಿದೆ. ದೇಶದ ಪ್ರಜಾತಂತ್ರ ವ್ಯವಸ್ಥೆಯನ್ನು ಬುಡಮೇಲು ಮಾಡುವ ಕಾರ್ಯಕ್ಕೆ ಬಿಜೆಪಿ ಮುಂದಾಗಿದ್ದು, ದೇಶದ ಜನತೆಗೆ ಮೋಸ ಮಾಡುತ್ತಿದ್ದಾರೆ. ಕೆಲ ಅಧಿಕಾರಿಗಳೇ ಈ ಕೃತ್ಯದಲ್ಲಿ ಪಾಲುದಾರರಾಗಿದ್ದಾರೆ ಎಂಬುದು ವಿಪರ್ಯಾಸ ಎಂದು ವಾಗ್ದಾಳಿ ನಡೆಸಿದರು.
ಈ ವೇಳೆ ಸಿ.ಆರ್ ಗೌಡ, ಜಿಲ್ಲಾ ಕಾಂಗ್ರೆಸ್ ಗ್ಯಾರಂಟಿ ಸಮಿತಿ ಅಧ್ಯಕ್ಷ ರಾಜಣ್ಣ, ಶ್ರೀ ಘಾಟಿ ಸುಬ್ರಮಣ್ಯ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ರಂಗಪ್ಪ, ಆರ್ ವಿ ಮಹೇಶ್, ಕೆಪಿಸಿಸಿ ಸದಸ್ಯ ಎಸ್. ಆರ್. ಮುನಿರಾಜು ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಸಿದ್ದಪ್ಪ, ಮುಖಂಡರಾದ ಶಿವಕುಮಾರ್ ಸೇರಿದಂತೆ ಹಲವರು ಹಾಜರಿದ್ದರು.
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಛಲವಾದಿ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…