ಭಾರತದ 52 ನೇ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಆಗಿ ನ್ಯಾ.ಭೂಷಣ್ ರಾಮಕೃಷ್ಣ ಗವಾಯಿ ಪ್ರಮಾಣ ವಚನ ಸ್ವೀಕಾರ

ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಭೂಷಣ್ ರಾಮಕೃಷ್ಣ ಗವಾಯಿ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪ್ರತಿಜ್ಞಾ ವಿಧಿ ಬೋಧಸಿದರು.

ನಿವೃತ್ತ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಉತ್ತರಾಧಿಕಾರಿಯಾಗಿ ನ್ಯಾಯಮೂರ್ತಿ ಭೂಷಣ್ ಗವಾಯಿ ಅಧಿಕಾರ ವಹಿಸಿಕೊಂಡಿದ್ದಾರೆ.

ಪ್ರಮಾಣ ವಚನ ಸ್ವೀಕರಿಸಿದ ನಂತರ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಉಪ ರಾಷ್ಟ್ರಪತಿ ಜಗದೀಪ್ ಧಂಖರ್, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಇತರ ಗಣ್ಯರನ್ನು ಸಿಜೆಐ ಸ್ವಾಗತಿಸಿದರು.

ಮೇ 24, 2019 ರಂದು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ಬಡ್ತಿ ಪಡೆದ ನ್ಯಾಯಮೂರ್ತಿ ಗವಾಯಿ ಅವರು ಇನ್ನೂ ಆರು ತಿಂಗಳಿಗಿಂತ ಹೆಚ್ಚು ಅವಧಿಯ ಅಧಿಕಾರಾವಧಿ ಹೊಂದಿ ನವೆಂಬರ್ 23 ರಂದು ನಿವೃತ್ತರಾಗಲಿದ್ದಾರೆ.

Ramesh Babu

Journalist

Recent Posts

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

1 hour ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

4 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

17 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

19 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

22 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

1 day ago