ನ್ಯಾಯಮೂರ್ತಿ ಸೂರ್ಯಕಾಂತ್ ಭಾರತದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರು ನವೆಂಬರ್ 23ರಂದು ನಿವೃತ್ತರಾಗಿದ್ದು, ಅವರ ನಂತರ ಸೂರ್ಯಕಾಂತ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ಸೂರ್ಯಕಾಂತ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ದೇವರ ಹೆಸರಿನಲ್ಲಿ ಅವರು ಹಿಂದಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ಮುಂದಿನ ಸುಪ್ರೀಂ ಕೋರ್ಟ್‌ನ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಅಕ್ಟೋಬರ್ 30 ರಂದು ನೇಮಕ ಮಾಡಲಾಯಿತು.
ನ್ಯಾಯಮೂರ್ತಿ ಸೂರ್ಯಕಾಂತ್ ಸುಮಾರು 15 ತಿಂಗಳು ಈ ಹುದ್ದೆಯಲ್ಲಿ ಇರುತ್ತಾರೆ. ಅವರಿಗೆ ಫೆಬ್ರುವರಿ 9, 2027ರಂದು 65 ವರ್ಷ ತುಂಬುವ ಹಿನ್ನೆಲೆಯಲ್ಲಿ ಅಧಿಕಾರದಿಂದ ನಿವೃತ್ತರಾಗುತ್ತಾರೆ.
ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ವಾಪಸ್ ಪಡೆಯುವ 370ನೇ ವಿಧಿಯನ್ನು ರದ್ದುಪಡಿಸುವುದು ಸೇರಿದಂತೆ ಹಲವಾರು ಮಹತ್ವದ ತೀರ್ಪುಗಳಲ್ಲಿ ಭಾಗವಾಗಿದ್ದರು..
ಸಮಾರಂಭದಲ್ಲಿ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್ ಮತ್ತು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಿರಿಯ ನಾಯಕರು ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…
ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…