ನಗರದಲ್ಲಿ ಭಾರತ್ ರೈಸ್ ಬ್ರ್ಯಾಂಡ್ ಹೆಸರಿನ ನಕಲಿ ಅಕ್ಕಿ ಮಾರಾಟ ಮಾಡುತ್ತಿದ್ದ ಜಾಲವನ್ನು ಪತ್ತೆ ಮಾಡಲಾಗಿದೆ.
ಕೋಲಾರದಿಂದ ಟೆಂಪೊದಲ್ಲಿ ಬಂದು ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಮಾರುಕಟ್ಟೆ ಹೊರವಲಯದಲ್ಲಿ ಭಾರತ್ ರೈಸ್ ಎಂದು ಬೋರ್ಡ್ ಹಾಕಿಕೊಂಡು ಮೈಕ್ ನಲ್ಲಿ ಅನೌನ್ಸ್ ಮಾಡಿ ಮಾರಾಟ ಮಾಡಲಾಗುತ್ತಿತ್ತು ಎಂದು ಗ್ರಾಹಕ ಶ್ರೀನಿವಾಸ್ ಗೂರೂಜಿ ಆರೋಪಿಸಿದ್ದಾರೆ.
ಚೀಲಗಳ ಮೇಲೂ ಭಾರತ್ ರೈಸ್ ಎಂದು ನಕಲಿ ಸ್ಟಿಕ್ಕರ್ ಲೇಪಿಸಿ ಮಾರಾಟ ಮಾಡಲಾಗುತ್ತಿತ್ತು. ಈ ವೇಳೆ ನನಗೆ ಭಾರತ್ ರೈಸ್ ಬಗ್ಗೆ ಅನುಮಾನ ಬಂದು ಗೂಗಲ್ ನಲ್ಲಿ ಚೆಕ್ ಮಾಡಿದೆ. ಆಗ ನಕಲಿ ಅಕ್ಕಿ ಎಂದು ಖಚಿತಪಡಿಸಿಕೊಂಡು, ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಸದ್ಯ ಅಕ್ಕಿ ಮಾರಾಟ ಮಾಡುತ್ತಿದ್ದ ವ್ಯಕ್ತಿ ಹಾಗೂ ಟೆಂಪೋವನ್ನು ದೊಡ್ಡಬಳ್ಳಾಪುರ ನಗರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ.
ಜನಸಾಮಾನ್ಯರಿಗೆ ಕಡಿಮೆ ಬೆಲೆಯಲ್ಲಿ ಗುಣಮಟ್ಟದ ದಿನಸಿ ವಿತರಣೆ ಉದ್ದೇಶದಿಂದ ಕೇಂದ್ರ ಸರ್ಕಾರ ಫೆಬ್ರವರಿಯಲ್ಲಿ ಭಾರತ್ ರೈಸ್ ಅನ್ನು ಬಿಡುಗಡೆ ಮಾಡಿತ್ತು.
ಸದ್ಯ, ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ಭಾರತ್ ರೈಸ್ ಮಾರಾಟ ಮಾಡುವುದನ್ನು ಸ್ಥಗಿತಗೊಳಿಸಲಾಗಿದೆ.
ದೂರದ ಪ್ರದೇಶಗಳಿಗೆ ದಿನಸಿಗಳನ್ನು ತಲುಪಿಸುವ ಉದ್ದೇಶದಿಂದ ಆನ್‌ಲೈನ್ ಆರ್ಡರ್ ವ್ಯವಸ್ಥೆ ಕೂಡ ಮಾಡಿತ್ತು. ಆದರೀಗ 5 ಕೆಜಿ ಮತ್ತು 10 ಕೆಜಿ ಪ್ಯಾಕ್‌ಗಳಲ್ಲಿ ದೊರೆಯುತ್ತಿದ್ದ ಸಬ್ಸಿಡಿ ಅಕ್ಕಿ ಆನ್‌ಲೈನ್‌ನಲ್ಲಿಯೂ ಲಭ್ಯವಿಲ್ಲ. ಚರ್ಚ್
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…