ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ ಅವರು ಗುರುವಾರ ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ, ತರಬೇತಿ ಕೇಂದ್ರವನ್ನು ಅಂತಾರಾಷ್ಟ್ರೀಯ ಮಟ್ಟದ ಕೇಂದ್ರವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಪುನರ್‌ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ಖಾಸಗಿ ಅನುದಾನದ ಮೂಲಕ ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗುವುದು ಎಂದು ತಿಳಿಸಿದರು.

ಕೇಂದ್ರದಲ್ಲಿ ಚಿಟ್ಟೆ ಪಾರ್ಕ್, ನವಿಲು ಪಾರ್ಕ್ ಹಾಗೂ ಅಡ್ವೆಂಚರ್ ಪಾರ್ಕ್ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ತರಬೇತಿಗೆ ಆಗಮಿಸುವ ವಿದ್ಯಾರ್ಥಿಗಳು ಪ್ರಕೃತಿ ಮತ್ತು ಪರಿಸರದ ಬಗ್ಗೆ ಅರಿವು ಪಡೆದು, ಜೀವನೋಪಯೋಗಿ ಅನುಭವಗಳೊಂದಿಗೆ ಹಿಂತಿರುಗುವಂತ ವಾತಾವರಣ ನಿರ್ಮಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.

ಇದೇ ವೇಳೆ ಆಧುನಿಕ ಗ್ರಂಥಾಲಯದಲ್ಲಿ ಸುಮಾರು 7 ಸಾವಿರ ಪುಸ್ತಕಗಳು ಹಾಗೂ 10 ಕಂಪ್ಯೂಟರ್‌ಗಳನ್ನು ಅಳವಡಿಸಲಾಗುವುದು. ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಬೌದ್ಧಿಕ ಬೆಳವಣಿಗೆಗೆ ಅಗತ್ಯವಾದ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗುವುದು. ಕರಾವಳಿ ಪ್ರದೇಶದ ಸಾಹಸ ಚಟುವಟಿಕೆಗಳ ಮಾದರಿಯ ತರಬೇತಿಯನ್ನೂ ಇಲ್ಲಿ ಪರಿಚಯಿಸುವ ಉದ್ದೇಶವಿದೆ ಎಂದು ತಿಳಿಸಿದರು.

ಸ್ಕೌಟ್ಸ್,‌ ಗೈಡ್ಸ್ ರಾಜ್ಯ ಕಾರ್ಯದರ್ಶಿ ಗಂಗಪ್ಪ ಗೌಡ ಮಾತನಾಡಿ, ಸುಮಾರು 2 ಕೋಟಿ ವೆಚ್ಚದಲ್ಲಿ ಆರಂಭಿಕ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು, ಕಟ್ಟಡಗಳ ದುರಸ್ತಿ ಸೇರಿದಂತೆ 20 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಯೋಜನೆ ರೂಪಿಸಲಾಗಿದೆ. ಈ ಕಾರ್ಯಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು.

ಈ ವೇಳೆ ಪದಾಧಿಕಾರಿಗಳಾದ ಎಂ. ಎಸ್. ಸತೀಶ್, ಬಿ.ಕೆ ಬಸವರಾಜ್, ತಿರುಮಲ ರಾವ್, ಸೇರಿದಂತೆ ರಾಜ್ಯ ಸಂಸ್ಥೆಯ ಪದಾಧಿಕಾರಿಗಳು, ವಿವಿಧ ಜಿಲ್ಲೆಗಳ ಪದಾಧಿಕಾರಿಗಳು, ದಳ ನಾಯಕರು ಹಾಗೂ ಸ್ಕೌಟ್ಸ್ -ಗೈಡ್ಸ್, ಕಬ್ಸ್, ಬುಲ್ – ಬುಲ್ಸ್, ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

8 minutes ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

13 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

14 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

16 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

17 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

19 hours ago