ನವದೆಹಲಿ: ಭಾರತ ದೇಶದ 15ನೇ ಉಪರಾಷ್ಟ್ರಪತಿಯಾಗಿ ಚಂದ್ರಾಪುರಂ ಪೊನ್ನುಸ್ವಾಮಿ ರಾಧಾಕೃಷ್ಣನ್ ಅವರು ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಧಾಕೃಷ್ಣನ್‌ಗೆ ಪ್ರಮಾಣವಚನ ಬೋಧಿಸಿದರು.
ಜಗದೀಪ್ ಧನಕರ್ ಅವರ ದಿಢೀರ್ ರಾಜೀನಾಮೆಯಿಂದ ತೆರವಾಗಿದ್ದ ಹುದ್ದೆಗೆ ಸೆ.9 (ಮಂಗಳವಾರ) ನಡೆದ ಚುನಾವಣೆಯಲ್ಲಿ ಆಡಳಿತಾರೂಢ ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ರಾಧಾಕೃಷ್ಣನ್, ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿ ಬಿ.ಸುದರ್ಶನ ರೆಡ್ಡಿ ಅವರನ್ನು ಮಣಿಸಿದ್ದರು.
ರಾಧಾಕೃಷ್ಣನ್ ಪರ ಒಟ್ಟು 452 ಮತಗಳು ಚಲಾವಣೆಯಾಗಿದ್ದವು. ಬಿ.ಸುದರ್ಶನ್ ರೆಡ್ಡಿ 300 ಮತಗಳನ್ನು ಗಳಿಸಿದ್ದರು.
ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಜಗದೀಪ್ ಧಂಖರ್ ಮತ್ತು ಅಮಿತ್ ಶಾ, ರಾಜನಾಥ್ ಸಿಂಗ್, ಜೆ.ಪಿ. ನಡ್ಡಾ, ಪಿಯೂಷ್ ಗೋಯಲ್ ಮತ್ತು ನಿತಿನ್ ಗಡ್ಕರಿ ಸೇರಿದಂತೆ ಕೇಂದ್ರ ಸಚಿವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…
ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ. ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ ಎಂದು ಶಾಸಕ ಧೀರಜ್…
ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮದಿಂದ ಹೊಲಿಗೆ ಯಂತ್ರ ಪಡೆಯಲು ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ…