ಭಾರತ ದೇಶ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸದೃಢವಾಗಿದೆ-ಜಿ.ದಯಾನಂದ್

ಭಾರತ ದೇಶ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸದೃಢದೊಂದಿದೆ ಸ್ಚಾವಲಂಬನೆಯಾಗಿದೆ ಎಂಬುದಕ್ಕೆ ಚಂದ್ರಯಾನ-3 ಯಶಸ್ಸು ಸಾಕ್ಷಿಯಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಜಿ.ದಯಾನಂದ್ ತಿಳಿಸಿದರು.

ನಗರದ  ಶ್ರೀ ದೇವರಾಜ ಅರಸು ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು  ಬೆಂಗಳೂರು ಗ್ರಾಮಾಂತರ ಜಿಲ್ಲಾ ಮತ್ತು ದೊಡ್ಡಬಳ್ಳಾಪುರ ತಾಲ್ಲೂಕು ಘಟಕಗಳು, ಲಯನ್ಸ್ ಕ್ಲಬ್ ಆರ್.ಎಲ್.ಜಾಲಪ್ಪ ಇನ್ಸ್ ಟಿಟ್ಯುಷನ್ಸ್ ಇವರ ಸಹಯೋಗದಲ್ಲಿ ಚಂದ್ರಯಾನ 3 ವಿಜ್ಞಾನಿಗಳ ತಂಡದ ಎನ್.ನರಸಿಂಹಮೂರ್ತಿ ಅವರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಭಾರತ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸ್ವಾವಲಂಬನೆಯಾಗಲು ಭಾರತೀಯ ವಿಜ್ಞಾನಿಗಳ‌ ಪರಿಶ್ರಮ ಅಪಾರವಾಗಿದೆ. ಜಾಗತಿಕ ಮಟ್ಟದ ಪ್ರತಿಭೆಯನ್ನು ಹೊಂದಿರುವ  ಭಾರತೀಯ ವಿಜ್ಞಾನಿಗಳಿಂದ ಇಂದು ಜಗತ್ತಿನ ರಾಷ್ಟ್ರಗಳು ಭಾರತವನ್ನು ನೋಡುವ ದೃಷ್ಟಿಕೋನವನ್ನು ಬದಲಾಯಿಸಿತು ಎಂದರು.

ನಮ್ಮ ದೇಶದಲ್ಲಿ ಸಾಧನೆ ಮಾಡಲು ಬಯಸುವ ವಿದ್ಯಾರ್ಥಿಗಳಿಗೆ ಹಲವು ಕ್ಷೇತ್ರಗಳಲ್ಲಿ ವಿಪುಲ ಅವಕಾಶಗಳಿವೆ. ಗ್ರಾಮೀಣ ಪ್ರದೇಶಗಳಲ್ಲಿರುವ ವಿದ್ಯಾರ್ಥಿಗಳಲ್ಲಿ ಸಾಮಾನ್ಯ ಜ್ಞಾನ ಮತ್ತು ಸಮಯಪ್ರಜ್ಞೆ ಇರುತ್ತದೆ.   ವಿದ್ಯಾರ್ಥಿಗಳಿಗೆ ದೊರೆಯುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಪರಿಶ್ರಮ ಮತ್ತು ನಿರಂತರ ಅಧ್ಯಯನದಿಂದ  ವಿದ್ಯಾರ್ಥಿಗಳ ಯಶಸ್ಸು ಪಡೆಯಲು ಸಾಧ್ಯವಾಗುತ್ತದೆ ಎಂದರು.

ನಂತರ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಚಂದ್ರಯಾನ 3 ವಿಜ್ಞಾನಿಗಳ ತಂಡದ ಎನ್.ನರಸಿಂಹಮೂರ್ತಿ,  ಚಂದ್ರಯಾನ 3ರ ಯಶಸ್ಸಿನಿಂದ ಇಸ್ರೋ ಹೊಗಳಿಕೆಗೆ ಪಾತ್ರವಾಗಿರುವುದು ಸಂತೋಷದ ಸಂಗತಿಯಾಗಿದೆ.  ಚಂದ್ರಯಾನ ಯಶಸ್ಸಿನಿಂದ ಹಲವಾರು ಉಪಯೋಗ  ಮತ್ತು ಅವಕಾಶಗಳು ನಮ್ಮ ದೇಶಕ್ಕೆ ದೊರೆಯುತ್ತದೆ. ಇಸ್ರೋ ಹಲವಾರು ಸಾಧನೆಗಳನ್ನು ಹಿಂದಿನಿಂದಲೂ ಮಾಡುತ್ತಾ ಮುನ್ನಡೆಯುತ್ತಿದೆ. ಇಸ್ರೋ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಲು ವಿದ್ಯಾರ್ಥಿಗಳಿಗೆ ಅವಕಾಶಗಳಿವೆ. ವಿದ್ಯಾಭ್ಯಾಸ ಪೂರ್ಣಗೊಳಿಸಿದ ನಂತರ ನಾವು ಸೇರಬಯಸುವ ಹುದ್ದೆಗಳಿಗೆ ಸಾಕಷ್ಟು ಸಿದ್ಧತೆ ಮಾಡಿಕೊಳ್ಳಬೇಕಾಗಿದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಪ್ರತಿಭೆ ಮನ್ನಣೆ ದೊರೆಯುತ್ತದೆ. ಬಡತನದಲ್ಲೆ ಸಾಧನೆ ಮಾಡುವವರು ಉತ್ತಮ ಸಾಧಕರಾಗಿ ಹೊರಹೊಮ್ಮುತ್ತಾರೆ. ವಿದ್ಯಾರ್ಥಿಗಳು ಮೊಬೈಲ್ ಬಳಕೆಯನ್ನು ಜ್ಞಾನ ವಿಸ್ತರಣೆಗೆ ಮಾತ್ರ  ಬಳಸಬೇಕು ಎಂದರು.

ಶ್ರೀ ದೇವರಾಜು ಅರಸು ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ ಮಾತನಾಡಿ, ಚಂದ್ರಯಾನದ ಯಶಸ್ಸು  ಜಗತ್ತು ಇಂದು ಭಾರತದ ಕಡೆಗೆ ನೋಡುವಂತೆ ಮಾಡಿದೆ. ನಮ್ಮ ದೇಶದ ಇಂತಹ ಸಾಧನೆಗಳು ಭಾರತೀಯರಲ್ಲಿ ವಿಶ್ವಾಸ ಮತ್ತು ಆತ್ಮಗೌರವವನ್ನು ಹೆಚ್ಚಿಸಿದೆ. ವಿಜ್ಞಾನ ಕ್ಷೇತ್ರದ ಸಂಶೋಧನೆಗಳು ನಿರಂತರವಾಗಿ ನಡೆಯಬೇಕಾಗಿದೆ. ದೆಹಲಿಯಲ್ಲಿ ನಡೆದ ಜಿ.20 ಸಭೆಯಲ್ಲಿ ಇಸ್ರೋ ಸಾಧನೆಗೆ ಮೆಚ್ಚುಗೆ ವ್ಯಕ್ತವಾಗಿದೆ ಎಂದರು.

ಕನ್ನಡ ರಕ್ಷಣಾ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟ ರವಿ ಮಾತನಾಡಿ, ದೊಡ್ಡಬಳ್ಳಾಪುರ ತಾಲ್ಲೂಕಿನ ಹಲವಾರು ಸಾಧಕರು ರಾಜ್ಯ ಮತ್ತು ರಾಷ್ಟಮಟ್ಟದಲ್ಲಿ  ಸಾಧನೆ ಮಾಡಿದ್ದಾರೆ. ಕಲೆ, ಸಾಹಿತ್ಯ, ಸ್ವಾತಂತ್ರ್ಯ ಹೋರಾಟ, ಕನ್ನಡ ಚಳುವಳಿಗೆ ತಮ್ಮ ಕೊಡುಗೆ ನೀಡಿದ್ದಾರೆ. ಚಂದ್ರಯಾನ 3 ಯಶಸ್ಸಿನ ವಿಜ್ಞಾನಿಗಳ ತಂಡದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಕೋಳೂರು ಗ್ರಾಮದ ಎನ್.ನರಸಿಂಹಮೂರ್ತಿ ಅವರು  ಕಾರ್ಯ ನಿರ್ವಹಿಸಿರುವುದು  ಹೆಮ್ಮೆಯ ವಿಷಯವಾಗಿದೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪ್ರೊ.ಕೃಷ್ಣಪ್ಪ ಮಾತನಾಡಿ, ಕನ್ನಡ ಮಾಧ್ಯಮ ಮತ್ತು ಗ್ರಾಮೀಣ ಪ್ರದೇಶದಲ್ಲಿ  ವಿದ್ಯಾಭ್ಯಾಸ ಮಾಡಿದರೂ ಸಹ ಇಸ್ರೋ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.  ವಿದ್ಯಾರ್ಥಿಗಳು ಶೈಕ್ಷಣಿಕ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಕನ್ನಡ ಸಾಹಿತ್ಯ ಪರಿಷತ್ತು ಇಂದು ಜನಸಾಮಾನ್ಯರ ಪರಿಷತ್ತಾಗಿ ಕೆಲಸ ಮಾಡುತ್ತಿದೆ.  ಪದವಿ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು  ಕನ್ನಡ ಸಾಹಿತ್ಯ ಪರಿಷತ್ತು ಸದಸ್ಯರಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಶ್ರೀದೇವರಾಜ ಅರಸು ವ್ಯವಹಾರ ನಿರ್ವಹಣೆ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಆರ್.ನಾಗರಾಜು,  ಆಡಳಿತಾಧಿಕಾರಿ ರಮೇಶ್ ಕುಮಾರ್ , ಲಯನ್ಸ್ ಕ್ಲಬ್ ಆಫ್ ಆರ್.ಎಲ್.ಜಾಲಪ್ಪ ಇನ್ಸ್ಟಿಟ್ಯೂಟ್ ಅಧ್ಯಕ್ಷ ಡಾ.ಎಂ.ಶ್ರೀನಿವಾಸರೆಡ್ಡಿ,   ಕನ್ನಡ ಸಾಹಿತ್ಯ ಪರಿಷತ್ತು ದೊಡ್ಡಬಳ್ಳಾಪುರ ತಾಲ್ಲೂಕು ಅಧ್ಯಕ್ಷ ಪಿ.ಗೋವಿಂದರಾಜು, ಜಿಲ್ಲಾ ಗೌರವ ಕಾರ್ಯದರ್ಶಿ ಪ್ರೊ.ರವಿಕಿರಣ್,  ಪದಾಧಿಕಾರಿಗಳಾದ ಎ.ಜಯರಾಮ, ಸಾ.ಲ.ಕಮಲನಾನಾಥ್, ಗಿರೀಶ್ ಎನ್.ಬರಗೂರು, ಉದಯರಾಧ್ಯ, ಷಫೀರ್, ಪ್ರಾಧ್ಯಾಪಕರುಗಳು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

11 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

12 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

13 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

13 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

17 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

19 hours ago