ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಮೂರು ಏಕದಿನ ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ವರ್ಷದ ಆರಂಭದಲ್ಲಿ ತವರಿನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಟಿ-ಟ್ವೆಂಟಿ ಸರಣಿಯನ್ನು ಗೆದ್ದು, ಮೂರು ಏಕದಿನ ಪಂದ್ಯಗಳ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದ್ದ ಭಾರತ ತಂಡ ಬೌಲಿಂಗ್ ಹಾಗೂ ಬ್ಯಾಟಿಂಗ್ ವಿಭಾಗ ಉತ್ತಮ ಪ್ರದರ್ಶನ ನೀಡುತ್ತಿದ್ದು ಸರಣಿಯಲ್ಲಿ ಶುಭಾರಂಭ ಮಾಡುವ ನಿರೀಕ್ಷೆ ಇದೆ.
ಹಿರಿಯ ಆಟಗಾರ ಕೆ. ಎಲ್. ರಾಹುಲ್ ಹಾಗೂ ಆಲ್ ರೌಂಡರ್ ಅಕ್ಷರ್ ಪಟೇಲ್ ವೈಯಕ್ತಿಕ ಕಾರಣಗಳಿಂದ ಈ ಸರಣಿಗೆ ಲಭ್ಯರಾಗಿಲ್ಲ, ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ಬೆನ್ನು ನೋವಿನಿಂದ ಬಳಲುತ್ತಿದ್ದು ಸರಣಿಯಿಂದ ಹಿಂದೆ ಸರಿದಿದ್ದು ವಿಕೆಟ್ ಕೀಪರ್ ಇಶಾನ್ ಕಿಶನ್ ಹಾಗೂ ಸೂರ್ಯಕುಮಾರ್ ಯಾದವ್ ಅಂತಿಮ ಹನ್ನೊಂದರಲ್ಲಿ ಅವಕಾಶ ಪಡೆದಿದ್ದಾರೆ.
ಇತ್ತೀಚೆಗಷ್ಟೇ ಪಾಕಿಸ್ತಾನ ವಿರುದ್ಧದ ಏಕದಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಸರಣಿ ಜಯಿಸಿರುವ ಪ್ರವಾಸಿ ನ್ಯೂಜಿಲೆಂಡ್ ತಂಡ ಮತ್ತೊಮ್ಮೆ ಮಿಂಚುವ ವಿಶ್ವಾಸದಲ್ಲಿದೆ, ಸ್ಟಾರ್ ಆಟಗಾರರಾದ ಕೇನ್ ವಿಲಿಯಮ್ ಸನ್ ಹಾಗೂ ಅನುಭವಿ ಬೌಲರ್ ಟೀಮ್ ಸೌಥಿ ಅಲಭ್ಯರಾಗಿದ್ದು ಪ್ರವಾಸಿ ತಂಡ ಹೊಸ ಸಂಯೋಜನೆಯೊಂದಿಗೆ ಕಣಕ್ಕೆ ಇಳಿಯಲಿದೆ.
ನ್ಯೂಜಿಲೆಂಡ್ (ಅಂತಿಮXI): ಫಿನ್ ಅಲೆನ್, ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (w/c), ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್‌ವೆಲ್, ಹೆನ್ರಿ ಶಿಪ್ಲಿ, ಮಿಚೆಲ್ ಸ್ಯಾಂಟ್ನರ್, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್
ಭಾರತ (ಅಂತಿಮ XI): ರೋಹಿತ್ ಶರ್ಮಾ(c), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಇಶಾನ್ ಕಿಶನ್(w), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…