ಭಾರತ ಮಾತೆಯ ಮಕ್ಕಳು ನಾವು, ಭಾವೈಕ್ಯತೆಯಿಂದ ಬದುಕಿ ಬಾಳಬೇಕು- ಭಾರತ ಸೇವಾದಳ ದೊಡ್ಡಬಳ್ಳಾಪುರ ತಾಲೂಕು ಘಟಕದ ಅಧ್ಯಕ್ಷ ಆರ್.ವಿ ಮಹೇಶ್ ಕುಮಾರ್

ವಿದ್ಯಾರ್ಥಿಗಳು ಈಗಿನಿಂದಲೇ ತಮ್ಮ ವಿದ್ಯಾರ್ಥಿ ಜೀವನದಲ್ಲಿ ರಾಷ್ಟ್ರ ಪ್ರೇಮ, ರಾಷ್ಟ್ರಭಕ್ತಿ, ರಾಷ್ಟ್ರೀಯ ಭಾವೈಕ್ಯತೆಯನ್ನು ಬೆಳೆಸಿಕೊಳ್ಳಬೇಕು ಎಂದು ತಾಲೂಕು ದಂಡಾಧಿಕಾರಿ ವಿದ್ಯಾ ವಿಭಾ ರಾಥೋಡ್ ಹೇಳಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಭಾರತ ಸೇವದಳದ ತಾಲೂಕು ಸಮಿತಿಯಿಂದ ಭಾರತ ಸೇವಾ  ಸೇವಾದಳದ ಸಪ್ತಾಹದ ಅಂಗವಾಗಿ ರಾಷ್ಟ್ರೀಯ ಭಾವೈಕ್ಯತೆ ಮಕ್ಕಳ ಮೇಳದಲ್ಲಿ ಮಾತನಾಡಿದ ಅವರು, ಪ್ರಸ್ತುತ ಸಂದರ್ಭದಲ್ಲಿ ವಿದ್ಯಾ.ರ್ಥಿಗಳಿಗೆ ಈಗಿನಿಂದಲೇ ರಾಷ್ಟ್ರಪ್ರೇಮ ರಾಷ್ಟ್ರಭಕ್ತಿ ಬೆಳೆಸುವ ಕೆಲಸ ಮುಖ್ಯವಾಗಿ ಆಗಬೇಕು. ರಾಷ್ಟ್ರೀಯ ಭಾವೈಕ್ಯತೆಯನ್ನು ಬೆಳೆಸುವಂತಹ ಕೆಲಸ ಆಗಬೇಕು. ಮಹಾತ್ಮ ಗಾಂಧೀಜಿ ಕಂಡಂತಹ ಕನಸು ನನಸಾಗಬೇಕು ಎಂದರು.

ಭಾರತ ಸೇವಾದಳದ ಜಿಲ್ಲಾ ಸಮಿತಿ ಅಧ್ಯಕ್ಷರಾದ ಲಕ್ಷ್ಮಿಪತಿ ಅವರು ಮಾತನಾಡಿ ತಾಲೂಕಿನಲ್ಲಿರುವ ಎಲ್ಲಾ ಶಾಲೆಗಳ ಶಾಖೆಗಳಿಗೆ ಸುಮಾರು 5000 ಸಮವಸ್ತ್ರಗಳನ್ನು ಉಚಿತವಾಗಿ ನೀಡಲಾಗುವುದು ಎಂದರು. ತಾಲೂಕಿನ ಶಾಖನಾಯಕರಗಳು ವಿದ್ಯಾರ್ಥಿಗಳಲ್ಲಿ ಶಿಸ್ತು ಮೂಡಿಸುವಲ್ಲಿ ಶ್ರಮವಹಿಸುತ್ತಿರುವುದು ತುಂಬಾ ಸಂತೋಷ ಎಂದರು.

ಪ್ರತಿವರ್ಷದಂತೆ ಈ ವರ್ಷವೂ ಕೂಡ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ 5 ಕಾರ್ಯಕ್ರಮಗಳನ್ನು ನಿರ್ವಹಿಸಲಾಗುವುದು, ಅಂತೆಯೇ ಇಂದು ತಾಲ್ಲೂಕು ಮಟ್ಟದಲ್ಲಿ ಭಾರತ ಸೇವಾದಳ ಸಪ್ತಾಹದ ಅಂಗವಾಗಿ ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳ ಕಾರ್ಯಕ್ರಮವನ್ನು ತಾಲ್ಲೂಕು ಅಧ್ಯಕ್ಷರಾದ ಆರ್. ವಿ ಮಹೇಶ್ ಅವರ ನೇತೃತ್ವದಲ್ಲಿ ತಾಲ್ಲೂಕಿನ 13ಕ್ಕೂ ಅಧಿಕ ಶಾಲೆಗಳ ಮಕ್ಕಳು ಭಾಗವಹಿಸಿದ್ದು ನಗರದ ಪ್ರಮುಖ ಬೀದಿಗಳಲ್ಲಿ ಪಥ ಸಂಚಲನ ಮಾಡುವ ಸಾರ್ವಜನಿಕರಲ್ಲಿ  ರಾಷ್ಟ್ರೀಯ ಭಾವೈಕ್ಯತೆ ಬಗ್ಗೆ ಅರಿವು ಮೂಡಿಸುವಲ್ಲಿ ಉತ್ತಮ ಕಾರ್ಯಕ್ರಮ ರೂಪಿಸಿದ್ದು ಇಂದಿನ ಕಾರ್ಯಕ್ರಮ ಯಶಸ್ವಿಯಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಭಾರತ ಸೇವಾದಳ ದೊಡ್ಡಬಳ್ಳಾಪುರ ತಾಲೂಕು ಘಟಕದ ಅಧ್ಯಕ್ಷ ಆರ್.ವಿ ಮಹೇಶ್ ಕುಮಾರ್ ಮಾತನಾಡಿ, ಭಾರತ ಸೇವಾದಳ ಸ್ವಾತಂತ್ರ್ಯಕ್ಕಾಗಿ ಯುವಕರನ್ನು ಸಂಘಟಿಸುವಲ್ಲಿ ಮಹತ್ವದ ಪಾತ್ರವಹಿಸಿದ್ದು, ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಶಿಸ್ತು ಸಾಮರಸ್ಯ ಮೂಡಿಸುವಲ್ಲಿ ಭಾರತ ಸೇವಾದಳ ಮಹತ್ವದ ಕೆಲಸ ಮಾಡುತ್ತಿದೆ ಎಂದರು.

ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಹೇಳಿರುವಂತೆ ಸಮಾಜದಲ್ಲಿ ಮಕ್ಕಳು ಉತ್ತಮ ಶಿಕ್ಷಣ ಪಡೆಯುವ ಮೂಲಕ ಎಲ್ಲಾ ರಂಗಗಳಲ್ಲೂ ಉನ್ನತ ಮಟ್ಟದ ಸ್ಥಾನಗಳನ್ನು ಅಲಂಕರಿಸಿ ಉತ್ತಮ ಸಾಧನೆ ತೋರುವಂಥಗಲಿ ಎಂಬುದೇ ಈ ಕಾರ್ಯಕ್ರಮದ ಮುಖ್ಯ ಉದ್ದೇಶ ಎಂದರು.

ಟಿಎಪಿಎಂಸಿ ನಿರ್ದೇಶಕ ರಂಗಪ್ಪ, ತೂಬಗೆರೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರವಿಸಿದ್ದಪ್ಪ, ಭೂ ಮಂಜೂರಾತಿ ಸಮಿತಿ ಸದಸ್ಯ ಶ್ರೀಧರ್, ಹೊಸಕೋಟೆ ತಾಲೂಕು ಕೃಷಿಕ ಸಮಾಜ ಅಧ್ಯಕ್ಷ ಹರೀಶ್, ದೊಡ್ಡಬಳ್ಳಾಪುರ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಮುರುಳಿಧರ್, ನಗರಸಭೆ ಸದಸ್ಯ ಕಾಂತರಾಜ್, ಕರ್ನಾಟಕ ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಮಾಜಿ ಸದಸ್ಯ ಸಿ. ರಾಮಕೃಷ್ಣ ಕಾರ್ಯಧ್ಯಕ್ಷ ವೆಂಕಟೇಶ್, ಪ್ರಧಾನ ಕಾರ್ಯದರ್ಶಿ, ವಿ.ಸಿ ಜ್ಯೋತಿ ಕುಮಾರ್, ಹಾಗೂ ತಾಲೂಕ ಸಮಿತಿಯ ನಿರ್ದೇಶಕರು ಮುಂತಾದವರು ಭಾಗವಹಿಸಿದ್ದರು.

ವೇದಿಕೆ ಕಾರ್ಯಕ್ರಮಕ್ಕೆ ಮೊದಲು ಸುಮಾರು 300 ವಿದ್ಯಾರ್ಥಿಗಳು ನಗರದ ನೆಲದಾಂಜನೇಯ ಸ್ವಾಮಿ ದೇವಸ್ಥಾನದಿಂದ ಅಂಬೇಡ್ಕರ್ ಭವನದವರೆಗೂ ಪ್ರಭಾತ ಬೇರಿ ಮೂಲಕ ಜಾಥಾ ನಡೆಸಿದರು.

ಈ ಕಾರ್ಯಕ್ರಮಕ್ಕೆ  ಶಾಸಕ ಧೀರಜ್ ಮುನಿರಾಜ್ ಹಸಿರು ಬಾವುಟ ತೋರಿಸಿ ಮೂಲಕ ಚಾಲನೆ ನೀಡಿದರು.

Ramesh Babu

Journalist

Recent Posts

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

14 hours ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

17 hours ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

18 hours ago

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

1 day ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

1 day ago