ಭಾರತ ಸಂವಿಧಾನದ ಚುನಾವಣೆ ವ್ಯವಸ್ಥೆ ಜಗತ್ತಿಗೇ ಮಾದರಿ- ಶಾಸಕ ಧೀರಜ್ ಮುನಿರಾಜ್


ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ನಗರಸಭೆ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ದಿನಾಚರಣೆ-2025 ಕಾರ್ಯಕ್ರಮ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಂಗವಾಗಿ ನಗರದ ಸಿದ್ದಲಿಂಗಯ್ಯ ವೃತ್ತದ ಬಳಿಯಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ಹಾಗೂ ಮಾಜಿ ಪ್ರಧಾನಿ ಜಗಜೀವನ ರಾಂ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಸಂವಿಧಾನ ಜಾಗೃತಿ ಜಾಥಾ ನಡೆಯಿತು. ಸಂವಿಧಾನ ಪೀಠಿಕೆಯುಳ್ಳ ಬೆಳ್ಳಿ ರಥದ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳು, ಬೃಹತ್ ರಾಷ್ಟ್ರ ಧ್ವಜ ಹಿಡಿದು ಸಂಚರಿಸಿದರು.

ಸಂವಿಧಾನದ ಮಹತ್ವ ಸಾರುವ ಭಿತ್ತಿಪತ್ರಗಳು ಹಾಗೂ ಘೋಷಣೆಗಳೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಜಾಥಾ ಸಂಚರಿಸಿ, ಭಗತ್ ಸಿಂಗ್ ಕ್ರೀಡಾಂಗಣದ ವೇದಿಕೆ ತಲುಪಿತು.

ವೇದಿಕೆ ಕಾರ್ಯಕ್ರಮದಲ್ಲಿ ಶಾಸಕ ಧೀರಜ್ ಮುನಿರಾಜು ಭಾರತ ಪೀಠಿಕೆಯ ಪ್ರತಿಜ್ಞಾ ವಿಧಿ ಬೋಧಿಸಿದರು. ಸಮಾರಂಭದಲ್ಲಿ ಭಾಗವಹಿಸಿದ್ದ ನೂರಾರು ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳ ಮುಖಂಡರು, ಸಾರ್ವಜನಿಕರು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ಪ್ರತಿಜ್ಞಾವಿಧಿಯಲ್ಲಿ ಭಾರತದ ಜನತೆಯಾದ ನಾವು ಭಾರತವನ್ನು ಸಾರ್ವಭೌಮ, ಸಮಾಜವಾದಿ, ಧರ್ಮನಿರಪೇಕ್ಷ ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ರೂಪಿಸುದಕ್ಕಾಗಿ ಭಾರತದ ಎಲ್ಲ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು ವಿಚಾರ, ಅಭಿವ್ಯಕ್ತಿ, ನಂಬಿಕೆ, ಧರ್ಮ ಮತ್ತು ಉಪಾಸನೆಯ ಸ್ವಾತಂತ್ರ್ಯವನ್ನು ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆಯನ್ನು ದೊರೆಯುವಂತೆ ಮಾಡುವುದಾಗಿ ತಿಳಿಸಲಾಯಿತು.

ಈ ವೇಳೆ ಮಾತನಾಡಿದ ಶಾಸಕ ಧೀರಜ್ ಮುನಿರಾಜ್, ಅಮೇರಿಕಾದಲ್ಲಿ ಟ್ರಂಪ್ ಆಡಳಿತ ಹಸ್ತಾಂತರವಾಗುವಾಗ ಕಾನೂನು ಕೊಡಕು ಎದುರಾಗಿತ್ತು. ಆದರೆ ಭಾರತ ಸಂವಿಧಾನದ ಚುನಾವಣೆ ವ್ಯವಸ್ಥೆ ಜಗತ್ತಿಗೇ ಮಾದರಿಯಾಗಿದ್ದು, ಗ್ರಾಮ ಪಂಚಾಯಿತಿಯಿಂದ ಹಿಡಿದು, ಪ್ರಧಾನ ಮಂತ್ರಿಯವರೆಗೆ ಚುನಾವಣೆ ಆಯ್ಕೆಯಲ್ಲಿ ಯಾವುದೇ ಗೊಂದಲಗಳಿಲ್ಲ. ಅಧಿಕಾರ ಮುಗಿದ ನಂತರ ಕೆಲ ಕ್ಷಣಗಳಲ್ಲಿಯೇ ಹಸ್ತಾಂತರ ಮಡಬೇಕಿದೆ. ದೇಶದ ಪ್ರಜೆಗಳಿಗೆ ಮೂಲಭೂತ ಹಕ್ಕುಗಳನ್ನು ನೀಡುವ ಮೂಲಕ ಸಮಾನತೆ, ಸಮಬಾಳು ಪರಿಕಲ್ಪನೆ ಹೊಂದಿರುವುದು ನಮ್ಮ ಸಂವಿದಾನ. ಇಂತಹ ಸಂವಿಧಾನದ ಆಶಯಗಳಿಗೆ ದಕ್ಕೆ ಬಾರದಂತೆ ಜನಪ್ರತಿನಿಧಿಯಾಗಿ ನನ್ನ ಕರ್ತವ್ಯ ನಿರ್ವಹಿಸುತ್ತೇನೆ ಎಂದರು.

ಸಂವಿಧಾನ ಕುರಿತಾಗಿ ಮಾತನಾಡಿದ ಉಪನ್ಯಾಸಕ ಎನ್.ಮಹೇಶ್, ದೇಶದಲ್ಲಿ ಬ್ರಿಟೀಷರ ಆಳ್ವಿಕೆಯಿದ್ದಾಗ ನಮ್ಮದೇ ಆಡಳಿತ ವ್ಯವಸ್ಥೆ ಬಂದು ನಾವು ಸ್ವತಂತ್ರ್ಯರಾಗಬೇಕೆನ್ನುವ ಕೂಗು ಇತ್ತು. ಅಂತೆಯೇ ದೇಶಕ್ಕೆ ಒಂದು ಸಂವಿಧಾನ ಬೇಕು ಎನ್ನುವ ಒತ್ತಾಯಗಳಿದ್ದವು. ಸಂವಿಧಾನವು 1949ರ ನವೆಂಬರ್ 26 ರಂದು ಸಾಕಾರಕ್ಕೆ ಬಂದು, 1950ರ ಜನವರಿ 26ರಂದು ಅನುಷ್ಠಾನಕ್ಕೆ ತರಲಾಯಿತು. ಸಂವಿಧಾನ ರಚನಾ ಸಮಿತಿ ಅಧ್ಯಕ್ಷರಾಗಿ ಡಾ.ಬಾಬು ರಾಜೇಂದ್ರ ಪ್ರಸಾದ್ ಕಾರ್ಯ ನಿರ್ವಹಿಸಿದ್ದರು. ಕರಡು ಸಮಿತಿ ಅಧ್ಯಕ್ಷರಾಗಿದ್ದ ಸಂವಿಧಾನದ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಫ್ರಾನ್ಸ್, ಸೋವಿಯತ್ ಒಕ್ಕೂಟ, ಐರ್ಲೆಂಡ್ ಜಪಾನ್ ಮೊದಲಾದ ದೇಶಗಳ ಸಂವಿಧಾನವನ್ನು ಅಭ್ಯಸಿಸಿ, ಅಳವಡಿಸಿಕೊಂಡು ಇದು ವಿಶ್ವದ ಯಾವುದೇ ಸ್ವತಂತ್ರ್ಯ ದೇಶಗಳ ಅತಿ ಉದ್ದವಾದ ಸಂವಿಧಾನವಾಗಿದೆ. ಭಾರತದ ಸಂವಿಧಾನದಲ್ಲಿ 448 ವಿಧಿಗಳು, 25 ಭಾಗಗಳು, 12 ಶೆಡ್ಯೂಲ್ 5 ಅನುಬಂಧಗಳು, 98 ತಿದ್ದುಪಡಿಗಳಿವೆ ಎಂದರು.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಸುಮಿತ್ರ.ಕೆ.ಆನಂದ್, ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಎಸ್.ರವಿಕುಮಾರ್, ಪೌರಾಯುಕ್ತ ಕಾರ್ತಿಕೇಶ್ವರ ಗಾಯಕ ಅಶ್ವಿನ್ ಶರ್ಮ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪಿ.ಗೋವಿಂದ ರಾಜು, ತಹಸೀಲ್ದಾರ್ ಡಾ.ಮಲ್ಲಪ್ಪ ಕೆ.ಯರಗೋಳ, ಕ್ಷೇತ್ರ ಶಿಕ್ಷಣಾಧಿಕಾರಿ ಶಂಕರಯ್ಯ.ಟಿ.ಎಸ್, ತಾಲೂಕು ಪಂಚಾಯಿತಿ ಇ.ಓಮಂಜುನಾಥ ಅರ್ತಿ,ಡಿವೈಎಸ್ಪಿ ಪಾಂಡುರಂಗ.ಎಸ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸಿ.ಎನ್.ಶೇಷಾದ್ರಿ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಂಘಟನೆಯ ಮುಖಂಡರು, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Ramesh Babu

Journalist

Recent Posts

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

16 hours ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

16 hours ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

16 hours ago

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

19 hours ago

Arizona’s New Wave of Home‑Buying Assistance: What Buyers Need to Know

The desert sun has always promised a bright future for Arizona residents, but the rising…

1 day ago

ರಾಜಕೀಯ ಮತ್ತು ಸಾಂಸ್ಕೃತಿಕ ಜನಜೀವನದಲ್ಲಿ ಅತಿಮುಖ್ಯ ಪಾತ್ರವಹಿಸಿದ ಕೆಲವೇ ಪ್ರಮುಖರಲ್ಲಿ ಲಂಕೇಶ್ ಒಬ್ಬರು

ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…

1 day ago