ಭಾರತ ಹಾಗೂ ಪಾಕಿಸ್ತಾನ ನಡುವೆ ಯುದ್ಧದ ಕಾರ್ಮೋಡ: 2025ನೇ ಸಾಲಿನ ಐಪಿಎಲ್​ ರದ್ದು

ಭಾರತ ಹಾಗೂ ಪಾಕಿಸ್ತಾನ ನಡುವೆ ಯುದ್ಧದ ಕಾರ್ಮೋಡ ಹಿನ್ನೆಲೆ 2025ನೇ ಸಾಲಿನ ಐಪಿಎಲ್​ ರದ್ದು ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಭಾರತ ಹಾಗೂ ಪಾಕ್ ಮಧ್ಯೆ ಯುದ್ಧ ಭೀತಿ ಶುರವಾಗಿದೆ. ಪಹಲ್ಗಾಮ್​ನಲ್ಲಿ ನಡೆದ ದಾಳಿಗೆ ಭಾರತ ಪ್ರತಿ ದಾಳಿ ನಡೆಸಿ ಉಗ್ರರರ ನೆಲೆಯನ್ನು ನಾಶ ಮಾಡಿತು. ಆ ಬಳಿಕ ಭಾರತದ ಸೇನಾ ನೆಲೆಗಳ ಮೇಲೆ ದಾಳಿ ಮಾಡುವ ಪ್ರಯತ್ನ ಮಾಡಿತ್ತು. ಇದಕ್ಕೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ. ಈ ಎಲ್ಲಾ ಕಾರಣದಿಂದ ಯುದ್ಧ ಭೀತಿ ಶುರುವಾಗಿದ್ದು, ಬಿಸಿಸಿಐ ಐಪಿಎಲ್ ರದ್ದು ಮಾಡುವ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗಿದೆ.

ವಿದೇಶಿ ಆಟಗಾರರು ಕೂಡ ಐಪಿಎಲ್ ನಲ್ಲಿ ಭಾಗಿ ಆಗಿದ್ದಾರೆ. ಅವರ ಭದ್ರತೆಯನ್ನು ಗಮನದಲ್ಲಿ ಇಟ್ಟುಕೊಂಡು ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ ಎನ್ನಲಾಗುತ್ತಿದೆ.

ಪಂಜಾಬ್​ನ ಧರ್ಮಶಾಲಾದಲ್ಲಿ ಈ ವರ್ಷದ 58ನೇ ಪಂದ್ಯ ನಡೆಯುತ್ತಿತ್ತು. 10.1 ಓವರ್​ಗೆ ಫ್ಲಡ್​ಲೈಟ್ ಸಮಸ್ಯೆ ಆಯಿತು. ಆ ಬಳಿಕ ಭದ್ರತಾ ಕಾರಣದಿಂದ ಮ್ಯಾಚ್​ನ ರದ್ದು ಮಾಡಲಾಯಿತು. ಏಕಾಏಕಿ ಎಲ್ಲರನ್ನೂ ಕಳುಹಿಸಲಾಯಿತು. ಇದು ಮುಂದಿನ ಪಂದ್ಯಗಳ ಮೇಲೂ ಪರಿಣಾಮ ಬೀರಲಿದೆ ಎಂದು ಹೇಳಲಾಗಿತ್ತು. ಅಂತೆಯೇ ಬಿಸಿಸಿಐ ಇಂದು (ಮೇ 9) ಮಹತ್ವದ ಸಭೆ ನಡೆಸಿ ಪಂದ್ಯವನ್ನು ರದ್ದು ಮಾಡುವ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *