ಭಾರತ ಹಾಗೂ ಪಾಕಿಸ್ತಾನ ನಡುವೆ ಯುದ್ಧದ ಕಾರ್ಮೋಡ ಹಿನ್ನೆಲೆ 2025ನೇ ಸಾಲಿನ ಐಪಿಎಲ್ ರದ್ದು ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಭಾರತ ಹಾಗೂ ಪಾಕ್ ಮಧ್ಯೆ ಯುದ್ಧ ಭೀತಿ ಶುರವಾಗಿದೆ. ಪಹಲ್ಗಾಮ್ನಲ್ಲಿ ನಡೆದ ದಾಳಿಗೆ ಭಾರತ ಪ್ರತಿ ದಾಳಿ ನಡೆಸಿ ಉಗ್ರರರ ನೆಲೆಯನ್ನು ನಾಶ ಮಾಡಿತು. ಆ ಬಳಿಕ ಭಾರತದ ಸೇನಾ ನೆಲೆಗಳ ಮೇಲೆ ದಾಳಿ ಮಾಡುವ ಪ್ರಯತ್ನ ಮಾಡಿತ್ತು. ಇದಕ್ಕೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ. ಈ ಎಲ್ಲಾ ಕಾರಣದಿಂದ ಯುದ್ಧ ಭೀತಿ ಶುರುವಾಗಿದ್ದು, ಬಿಸಿಸಿಐ ಐಪಿಎಲ್ ರದ್ದು ಮಾಡುವ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗಿದೆ.
ವಿದೇಶಿ ಆಟಗಾರರು ಕೂಡ ಐಪಿಎಲ್ ನಲ್ಲಿ ಭಾಗಿ ಆಗಿದ್ದಾರೆ. ಅವರ ಭದ್ರತೆಯನ್ನು ಗಮನದಲ್ಲಿ ಇಟ್ಟುಕೊಂಡು ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ ಎನ್ನಲಾಗುತ್ತಿದೆ.
ಪಂಜಾಬ್ನ ಧರ್ಮಶಾಲಾದಲ್ಲಿ ಈ ವರ್ಷದ 58ನೇ ಪಂದ್ಯ ನಡೆಯುತ್ತಿತ್ತು. 10.1 ಓವರ್ಗೆ ಫ್ಲಡ್ಲೈಟ್ ಸಮಸ್ಯೆ ಆಯಿತು. ಆ ಬಳಿಕ ಭದ್ರತಾ ಕಾರಣದಿಂದ ಮ್ಯಾಚ್ನ ರದ್ದು ಮಾಡಲಾಯಿತು. ಏಕಾಏಕಿ ಎಲ್ಲರನ್ನೂ ಕಳುಹಿಸಲಾಯಿತು. ಇದು ಮುಂದಿನ ಪಂದ್ಯಗಳ ಮೇಲೂ ಪರಿಣಾಮ ಬೀರಲಿದೆ ಎಂದು ಹೇಳಲಾಗಿತ್ತು. ಅಂತೆಯೇ ಬಿಸಿಸಿಐ ಇಂದು (ಮೇ 9) ಮಹತ್ವದ ಸಭೆ ನಡೆಸಿ ಪಂದ್ಯವನ್ನು ರದ್ದು ಮಾಡುವ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗಿದೆ.
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…