ದೊಡ್ಡಬಳ್ಳಾಪುರ ತಾಲೂಕಿನ ಮೇಡಿಹಳ್ಳಿ ಗ್ರಾಮದಲ್ಲಿಂದು ಸಂಜೆ ಸುಮಾರು 4 ಗಂಟೆಯಲ್ಲಿ ಬಿರುಸಾಗಿ ಬೀಸಿದ ಬಿರುಗಾಳಿಗೆ ಸುಮಾರು 500-600 ವರ್ಷದ ಅರಳಿಮರ ಕೊಂಬೆ ಅಂಗಡಿ ಬಳಿ ಕುಳಿತಿದ್ದ ವ್ಯಕ್ತಿ ಮೇಲೆ ಬಿದ್ದಿದ್ದು, ಗಾಯಾಳು ವ್ಯಕ್ತಿಯನ್ನು ಆಸ್ಪತ್ರೆಗೆ ರವಾನಿಸುವಾಗ ಅಸುನೀಗಿದ್ದಾನೆ ಎಂದು ತಿಳಿದುಬಂದಿದೆ….
ಮೇಡಿಹಳ್ಳಿ ನಿವಾಸಿ ವೆಂಕಟರಮಣಪ್ಪ (56)ಮೃತ ದುರ್ದೈವಿ.
ಅರಳಿಮರ ಕೆಳಗೆ ಪೆಟ್ಟಿಅಂಗಡಿ ಇಡಲಾಗಿದೆ. ಎಂದಿನಂತೆ ಈದಿನವೂ ಸಹ ಅಂಗಡಿ ಬಳಿ ಬಂದು ವೆಂಕಟರಮಣಪ್ಪ ಕುಳಿತಿಕೊಳ್ಳುತ್ತಿದ್ದ. ದುರದೃಷ್ಟವಶಾತ್ ಇಂದು ಬೀಸಿದ ಬಿರುಗಾಳಿಗೆ ಒಣಗಿದ್ದ ಅರಳಿಮರದ ಕೊಂಬೆ ವ್ಯಕ್ತಿ ಮೇಲೆ ಬಿದ್ದಿದೆ. ಪೆಟ್ಟಿಅಂಗಡಿ ಒಳಗೆ ವ್ಯಾಪಾರ ಮಾಡುತ್ತಿದ್ದ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ಗ್ರಾಮದಲ್ಲಿರುವ ಒಣಗಿರುವ ಮರಗಳನ್ನು ತೆರವು ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಕಂಟನಕುಂಟೆ ಗ್ರಾಮಪಂಚಾಯಿತಿಗೆ ತಿಳಿಸಿಲಾಗಿತ್ತು. ಆದರೆ ನಮ್ಮ ಮನವಿಗೆ ಅಧಿಕಾರಿಗಳು ಕ್ಯಾರೆ ಎಂದಿಲ್ಲ. ಇದೀಗ ಒಂದು ಸಾವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ….
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…