ಭಾರೀ ಮಳೆ, ಬಿರುಗಾಳಿಗೆ ಹಾರಿಹೊದ ಮನೆಯ ಮೇಲ್ಛಾವಣಿ: ಮನೆಯಲಿದ್ದವರು ಪ್ರಾಣಾಪಾಯದಿಂದ ಪಾರು: ತಾಲೂಕಿನ ಜಿಂಕೆಬಚ್ಚಹಳ್ಳಿಯಲ್ಲಿ ಘಟನೆ

ಇಂದು ಹಠಾತ್‌ ನೆ ಬಂದ ಬಿರುಗಾಳಿ‌ ಸಮೇತ ಮಳೆಗೆ ತತ್ತರಿಸಿದ ತಾಲೂಕಿನ ಜನತೆ. ತಾಲೂಕಿನ ಜಿಂಕೆಬಚ್ಚಹಳ್ಳಿ ಗ್ರಾಮದಲ್ಲಿನ ಮನೆಗಳ ಮೇಲ್ಚಾವಣಿಯ ಸೀಟುಗಳು ಹಾರಿ‌ ಹೋಗಿದೆ. ಇದರಿಂದ ಮಳೆಯ ನೀರೆಲ್ಲ ಮನೆಯೊಳಗೆ ನುಗ್ಗಿ ವಸ್ತುಗಳಿಗೆ ಹಾನಿಯಾಗಿದೆ. ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಜಿಂಕೆ ಬಚ್ಚಹಳ್ಳಿ ಗ್ರಾಮದ ಕಾಂತರಾಜು, ಪ್ರಭಾಕರ್, ಮುನಿರಾಜು ಸೇರಿದಂತೆ ಹಲವು ಮನೆಗಳ ಶೀಟುಗಳು ಹಾರಿ ಹೋಗಿವೆ. ಮನೆಯಲ್ಲಿನ ಪಾತ್ರೆ ಸಾಮಾನುಗಳು ನಜ್ಜುಗುಜ್ಜಾಗಿರುವುದು ಕಂಡುಬಂದಿದೆ.

ಹಾಲಿನ ಡೇರಿ ಬಳಿ ಬೃಹತ್ ಮರ ನೆಲಕ್ಕುರಳಿ ವಿದ್ಯುತ್ ಲೈನ್ ಮೇಲೆ ಬಿದ್ದಿದೆ. ಇದರಿಂದ ಕೆಲ ಕಾಲ ಆತಂಕ ಸೃಷ್ಟಿಯಾಗಿತ್ತು.

ಇದಲ್ಲದೆ ಹೂ, ಹಣ್ಣುಗಳು ಸಹ ಧರೆಗುರುಳಿದ್ದು , ರೈತ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾನೆ. ಮಾವಿನ ಕಾಯಿ, ಅಂಜುರದಣ್ಣು ಸೇರಿದಂತೆ ಹಲವು ತರಕಾರಿ ಸಹ ಮಣ್ಣುಪಾಲಾಗಿದೆ.

Ramesh Babu

Journalist

Recent Posts

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

2 hours ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

2 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

3 hours ago

ಕರ್ನಾಟಕದ ಶೈಕ್ಷಣಿಕ ಭಾಷಾ ನೀತಿ…..

ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…

6 hours ago

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

18 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

19 hours ago