
ಕಾರು ವಿಜಯವಾಡಕ್ಕೆ ತೆರಳುತ್ತಿದ್ದಾಗ ಮುಂಜಾನೆ ಈ ಘಟನೆ ನಡೆದಿದೆ. ಕೆಟ್ಟು ನಿಂತಿದ್ದ ಲಾರಿ ಹೆದ್ದಾರಿ ಬದಿ ನಿಂತಿತ್ತು. ಮೂರು ದಿನಗಳ ಹಿಂದೆಯಷ್ಟೇ ಟಿಪ್ಪರ್ ಕಾರಿಗೆ ಡಿಕ್ಕಿ ಹೊಡೆದು ಯುವ ಜೋಡಿಯೊಂದು ಪ್ರಾಣ ಕಳೆದುಕೊಂಡಿದ್ದರು. ಇದೀಗ ಕೋಡದ ಪ್ರದೇಶದಲ್ಲಿ ಇತ್ತೀಚೆಗೆ ನಡೆದ ಘಟನೆಯ ರೀತಿಯಲ್ಲೇ ಈ ದುರ್ಘಟನೆ ನಡೆದಿದೆ.
ಬೇಸಿಗೆ ಹಿನ್ನೆಲೆ ರಾತ್ರಿಯ ಪ್ರಯಾಣವು ಹೆಚ್ಚಾಗುತ್ತಿದೆ, ರಸ್ತೆಯಲ್ಲಿ ನಿಲ್ಲುವ ವಾಹನಗಳು ಗಮನಿಸದೇ ಇರುವುದರಿಂದ ಅಪಘಾತಗಳ ಹೆಚ್ಚಿನ ಅಪಾಯಕ್ಕೆ ಕಾರಣವಾಗುತ್ತಿವೆ.