ಹಿರಿಯ ನಟಿ, ಡಾ. ಲೀಲಾವತಿ ಅವರ ಅಂತ್ಯಕ್ರಿಯೆ ಇಂದು(ಶನಿವಾರ) ಸಂಜೆ ನೆಲಮಂಗಲದ ಸೋಲದೇವನಹಳ್ಳಿಯಲ್ಲಿರುವ ಅವರ ತೋಟದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನಡೆಯಿತು.
ಕುಟುಂಬಸ್ಥರು, ಚಿತ್ರರಂಗದ ಗಣ್ಯರು ಅಗಲಿದ ಹಿರಿಯ ನಟಿಗೆ ಅಂತಿಮ ನಮನ ಸಲ್ಲಿಸಿದರು. ಲೀಲಾವತಿ ಅವರ ಪುತ್ರ ವಿನೋದ್ ರಾಜ್ ಅವರು ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು.
ಕರ್ನಾಟಕ ಸರ್ಕಾರದ ಪರವಾಗಿ ಮೂರು ಸುತ್ತು ಕುಶಾಲು ತೋಪು ಸಿಡಿಸಿ ಸಕಲ ಸರ್ಕಾರಿ ಗೌರವ ಸಲ್ಲಿಕೆ ಮಾಡಲಾಯಿತು.
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಅನುರಾಧ.ಕೆ.ಎನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪುರುಷೋತ್ತಮ್, ಉಪ ವಿಭಾಗಾಧಿಕಾರಿ ಶ್ರೀನಿವಾಸ್, ತಹಸೀಲ್ದಾರ್ ಅರುಂಧತಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…