ಭೂತಾಯಿ ಮಡಿಲಲ್ಲಿ ಚಿರನಿದ್ರೆಗೆ ಹಿರಿಯ ನಟಿ ಲೀಲಾವತಿ- ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಹಿರಿಯ ನಟಿ, ಡಾ. ಲೀಲಾವತಿ ಅವರ ಅಂತ್ಯಕ್ರಿಯೆ ಇಂದು(ಶನಿವಾರ) ಸಂಜೆ ನೆಲಮಂಗಲದ ಸೋಲದೇವನಹಳ್ಳಿಯಲ್ಲಿರುವ ಅವರ ತೋಟದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನಡೆಯಿತು.

ಕುಟುಂಬಸ್ಥರು, ಚಿತ್ರರಂಗದ ಗಣ್ಯರು ಅಗಲಿದ ಹಿರಿಯ ನಟಿಗೆ ಅಂತಿಮ ನಮನ ಸಲ್ಲಿಸಿದರು. ಲೀಲಾವತಿ ಅವರ ಪುತ್ರ ವಿನೋದ್ ರಾಜ್‌ ಅವರು ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು.

ಮೂರು ಸುತ್ತಿನ ಕುಶಾಲ ತೋಪು ಸಿಡಿಸುವ ಮೂಲಕ ಸಕಲ ಸರ್ಕಾರಿ ಗೌರವ ಸಲ್ಲಿಕೆ

ಕರ್ನಾಟಕ ಸರ್ಕಾರದ ಪರವಾಗಿ ಮೂರು ಸುತ್ತು ಕುಶಾಲು ತೋಪು ಸಿಡಿಸಿ ಸಕಲ ಸರ್ಕಾರಿ ಗೌರವ ಸಲ್ಲಿಕೆ ಮಾಡಲಾಯಿತು.

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಸೇರಿದಂತೆ ಹಲವು ನಾಯಕರು, ಚಿತ್ರರಂಗದ ಗಣ್ಯರು ಅಂತಿಮ ನಮನ ಸಲ್ಲಿಕೆ ಮಾಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಅನುರಾಧ.ಕೆ.ಎನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪುರುಷೋತ್ತಮ್, ಉಪ ವಿಭಾಗಾಧಿಕಾರಿ ಶ್ರೀನಿವಾಸ್, ತಹಸೀಲ್ದಾರ್ ಅರುಂಧತಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳ ಸರಣಿ: ಜನರಲ್ಲಿ ಆತಂಕ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಮುಂದುವರಿದಿದ್ದು, ಎರಡು ದಿನಗಳ ಅಂತರದಲ್ಲಿ ಎರಡು ಮನೆಗಳ ಕಳ್ಳತನ ಹಾಗೂ ಬೈಕ್ ಕಳವು…

8 hours ago

ರೈತರಿಗೆ ನೋವಾಗುವ ಯಾವುದೇ ತೀರ್ಮಾನ ಇಲ್ಲ; ಕಾವೇರಿ ಬಿಕ್ಕಟ್ಟಿಗೆ ಮೇಕೆದಾಟು ಒಂದೇ ಶಾಶ್ವತ ಪರಿಹಾರ- ಸಚಿವ ಚಲುವರಾಯಸ್ವಾಮಿ

ರೈತರಿಗೆ ನೋವಾಗುವ ಯಾವುದೇ ತೀರ್ಮಾನಗಳನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ರೈತರ ಸಹಕಾರವಿದ್ದರೆ, ಅವರಿಗೆ ಅಗತ್ಯವಿರುವ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು…

12 hours ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

13 hours ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

14 hours ago