ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಭ್ರಷ್ಟ ಗ್ರಾಮ ಆಡಳಿತಾಧಿಕಾರಿ

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂತೋಷ್ ಮ್ಯಾಗೇರಿ ಎಂಬುವವರೇ ಬಂಧಿತ ಅಧಿಕಾರಿ.

ಸ್ಥಳೀಯ ನಿವಾಸಿ ಗುರ್ಜರ್ ಎಂಬುವವರು ತಮ್ಮ ಜಮೀನಿನ ದಾಖಲೆಗಳಲ್ಲಿ ಬದಲಾವಣೆ ಮಾಡಿಕೊಡುವಂತೆ ಗ್ರಾಮ ಆಡಳಿತಾಧಿಕಾರಿ ಸಂತೋಷ್ ಅವರನ್ನು ಕೋರಿದ್ದರು. ಆದರೆ, ಈ ಕೆಲಸ ಮಾಡಿಕೊಡಲು ಅಧಿಕಾರಿ 18 ಸಾವಿರ ರೂಪಾಯಿ ಲಂಚ ನೀಡುವಂತೆ ಒತ್ತಾಯಿಸಿದ್ದರು ಎನ್ನಲಾಗಿದೆ.

ಅಧಿಕಾರಿಯ ಭ್ರಷ್ಟತನದಿಂದ ಬೇಸತ್ತ ಸಂತ್ರಸ್ತರು ಕೂಡಲೇ ಲೋಕಾಯುಕ್ತ ಕಚೇರಿಗೆ ತೆರಳಿ ದೂರು ದಾಖಲಿಸಿದ್ದರು. ದೂರಿನ ಅನ್ವಯ ಪ್ಲಾನ್ ರೂಪಿಸಿದ ಲೋಕಾಯುಕ್ತ ಪೊಲೀಸರು, ದೂರುದಾರರಿಂದ 13 ಸಾವಿರ ರೂಪಾಯಿ ಲಂಚದ ಹಣವನ್ನು ಪಡೆಯುತ್ತಿದ್ದ ಸಂದರ್ಭದಲ್ಲೇ ದಾಳಿ ನಡೆಸಿದ ಅಧಿಕಾರಿಗಳು, ಆರೋಪಿಯನ್ನು ಹಣದ ಸಮೇತ ವಶಕ್ಕೆ ಪಡೆದಿದ್ದಾರೆ.

ಲೋಕಾಯುಕ್ತ ಸಿಪಿಐ ವಿನಾಯಕ್ ಬಿಲ್ಲವ ಅವರ ಮಾರ್ಗದರ್ಶನದಲ್ಲಿ ಈ ಯಶಸ್ವಿ ದಾಳಿ ನಡೆದಿದ್ದು, ತಂಡದ ಇತರ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಬಂಧಿತ ಅಧಿಕಾರಿಯ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಸದ್ಯ ತನಿಖೆ ಮುಂದುವರಿದಿದೆ. ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಎಸಗುವವರಿಗೆ ಈ ಘಟನೆ ಒಂದು ಎಚ್ಚರಿಕೆಯ ಸಂದೇಶ ನೀಡಿದಂತಾಗಿದ್ದು, ಜಿಲ್ಲೆಯಾದ್ಯಂತ ಈ ಕುರಿತು ವ್ಯಾಪಕ ಚರ್ಚೆ ವ್ಯಕ್ತವಾಗುತ್ತಿದೆ.

Ramesh Babu

Journalist

Recent Posts

ಹಿಂಬದಿಯಿಂದ ಬೈಕ್‌ಗೆ ಕಾರು ಡಿಕ್ಕಿ: ದಂಪತಿ ಸಾವು

ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ದಂಪತಿ ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…

2 hours ago

ಬಿಗ್ ಬಾಸ್ ಮತ್ತು ಏಷ್ಯನ್ ಗೇಮ್ಸ್……

ಜಪಾನಿನ ಐಚಿ - ನಾಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಮತ್ತು ಭಾರತದ ವಿವಿಧ ಭಾಷೆಯ ಟಿವಿ ಚಾನಲ್ ಗಳಲ್ಲಿ ಪ್ರಸಾರವಾಗುತ್ತಿರುವ…

3 hours ago

ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ- ಆರ್.ವಿ. ಮಹೇಶ್

ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…

15 hours ago

ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ 18ರ ಹರೆಯದ ವಿದ್ಯಾರ್ಥಿ

ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…

16 hours ago

ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ತೇಜಸ್ವಿನಿ.ಸಿ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…

16 hours ago

ಬರದ ನಡುವೆ ಜಾನುವಾರುಗಳಿಗೆ ಹಸಿರು ಆಸರೆ: 70 ಎಕರೆಯಲ್ಲಿ ಹಸಿಹುಲ್ಲು ಬೆಳವಣಿಗೆಗೆ ಜಿಪಂ ಕ್ರಮ: ಮತ್ತಷ್ಟು ಸರ್ಕಾರಿ ಜಮೀನು ಹುಲ್ಲುಗಾವಲಾಗಿ ಪರಿವರ್ತನೆ

ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…

1 day ago