ತಾಲೂಕಿನ ಕಸಬಾ ಹೋಬಳಿಯ ಪಾಲನಜೋಗಿಹಳ್ಳಿ ಗ್ರಾಮದ ಸರ್ವೆ ನಂ.21ರಲ್ಲಿ 18ಎಕರೆ 22ಗುಂಟೆ ಭೂಮಿ ಗೋಮಾಳ ಎಂದು ಸರ್ಕಾರಿ ದಾಖಲಾತಿಗಳಲ್ಲಿ ಇದೆ. 18ಎಕರೆ 22ಗುಂಟೆ ಜಮೀನಿನಲ್ಲಿ ರಂಗಮ್ಮ ಕೋಂ ವೆಂಕಟೇಶಯ್ಯ ಎಂಬುವವರಿಗೆ ತಹಶೀಲ್ದಾರ್ ಆದೇಶದಂತೆ 2ಎಕರೆಯನ್ನ ದರಖಾಸ್ತು ಮೂಲಕ ಮಂಜೂರು ಮಾಡಲಾಗಿದೆ. ಉಳಿಕೆ 16ಎಕರೆ 22ಗುಂಟೆ ಸರ್ಕಾರಿ ಗೋಮಾಳವು ಭೂಗಳ್ಳರ ಪಾಲಾಗಿದೆ ಎಂದು ದಲಿತ ಸಂಘರ್ಷ ಸಮಿತಿ ಭೀಮ ಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ಯು.ಮುನಿರಾಜು ಆರೋಪಿಸಿದರು.
ಈಗಾಗಲೇ ಮೂರು ಬಾರಿ ಈ ಕುರಿತು ಬೃಹತ್ ಪ್ರತಿಭಟನೆ ಮಾಡುವ ಮೂಲಕ ಈ ಹಿಂದೆ ಇದ್ದ ತಹಶೀಲ್ದರ್ ಅವರ ಗಮನಕ್ಕೆ ತರಲಾಗಿತ್ತು, ನಮ್ಮ ಮನವಿ ಮೇರೆಗೆ ತಹಶೀಲ್ದರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು, ದಾಖಲಾತಿಗಳನ್ನ ಕೂಲಕಂಷವಾಗಿ ಪರೀಕ್ಷೀಸಿ ಇದು ಸರ್ಕಾರಿ ಗೋಮಾಳ ಎಂದು ಮಾಹಿತಿ ನೀಡಿದ್ದರು. ಎಂ.ಆರ್ ವಜಾಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದರು. ಆದರೆ ಇದೂವರೆಗೂ ಭೂಗಳ್ಳರಿಂದ ಗೋಮಾಳವನ್ನ ಮುಟ್ಟುಗೋಲು ಹಾಕಿಕೊಳ್ಳಲಿಲ್ಲ ಎಂದು ದೂರಿದರು.
ಪ್ರತಿಭಟನಾಕಾರರ ಮನವಿ ಸ್ವೀಕರಿ ಸ್ಥಳ ಪರಿಶೀಲನೆ ನಡೆಸಿದ ನಂತರ ವರದಿಯನ್ನ ಸಿದ್ಧಪಡಿಸಿ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ತಹಶೀಲ್ದಾರ್ ಅವರು ತಿಳಿಸಿದರು
ಈ ವೇಳೆ ರಾಜ್ಯಾಧ್ಯಕ್ಷ ಎಂ.ವಿ.ಗುರುಪ್ರಕಾಶ್ ಸೇರಿದಂತೆ ಸಂಘಟನೆಯ ಸದಸ್ಯರು, ಮುಖಂಡರು ಸೇರದಂತೆ ಇತರರು ಉಪಸ್ಥಿತರಿದ್ದರು.
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…
ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…