ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅವ್ಯವಸ್ಥೆ: ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡ ಲೋಕಾಯುಕ್ತ ನ್ಯಾಯಾಧೀಶರು

ಭೂ ದಾಖಲೆಗಳ ಸಹಾಯಕ ಕಚೇರಿಯಲ್ಲಿನ ಅವ್ಯವಸ್ಥೆ ಕಂಡು ಲೋಕಾಯುಕ್ತ ನ್ಯಾಯಾಧೀಶೆ ಅನಿತಾ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಭೂ ದಾಖಲೆಗಳ ಅಸಮರ್ಪಕ‌ ವಿಲೇವಾರಿಯನ್ನು ಖುದ್ದು ನ್ಯಾಯಾಧೀಶರೇ ಗಮನಿಸಿದರು. ಎಡಿಎಲ್ಆರ್ ಕಚೇರಿ ಶೌಚಾಲಯದ ಖಾಲಿ ಜಾಗದಲ್ಲಿ ಬೇಕಾಬಿಟ್ಟಿ ಜೋಡಿಸಿರುವ ದಾಖಲೆಗಳನ್ನು ಕಂಡು ಆಕ್ರೋಶ ವ್ಯಕ್ತಪಡಿಸಿದರು. ತಕ್ಷಣವೇ ಕಡತಗಳ ಮೂಟೆಗಳನ್ನು ತೆರವು ಮಾಡುವಂತೆ ಸೂಚಿಸಿದರು. ನಂತರ ಮಹಿಳಾ ಸಿಬ್ಬಂದಿಯಿಂದ ಶೌಚಾಲಯ ಸ್ವಚ್ಛತೆ ಕುರಿತು‌ ಮಾಹಿತಿ ಪಡೆದ ನ್ಯಾಯಾಧೀಶರು, ಹೆಚ್ಚುವರಿ ಶೌಚಾಲಯ ವ್ಯವಸ್ಥೆ‌ ಮಾಡಿಕೊಳ್ಳುವಂತೆ ಹೇಳಿದರು.

ಕಚೇರಿಯ ಗುತ್ತಿಗೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ ನೀಡುವ ವೇತನ ಕುರಿತು ಮಾಹಿತಿ ಪಡೆದರು. ಸಾಕಷ್ಟು ಕಡಿತಗಳು ವಿಲೇವಾರಿಗೆ ಬಾಕಿ ಉಳಿದಿದ್ದು, ಅಧಿಕಾರಿಗಳ ವಿವರಣೆ ಕೇಳಿದರು.

Ramesh Babu

Journalist

Recent Posts

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

27 minutes ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

38 minutes ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

1 hour ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

8 hours ago

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…

9 hours ago

ಹಸಿವಿನ ಔಷಧಿ ಮತ್ತು ಮತದಾನ…..

ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…

12 hours ago