ಭ್ರಷ್ಟಾಚಾರಕ್ಕೆ ಅವಕಾಶವಿಲ್ಲ; ಲಂಚ ಕೇಳಿದರೆ ನೇರವಾಗಿ ನನಗೆ ದೂರು ನೀಡಿ- ಶಾಸಕ ಧೀರಜ್ ಮುನಿರಾಜು

ದೊಡ್ಡಬಳ್ಳಾಪುರ: ತಾಲ್ಲೂಕಿನಲ್ಲಿ ಯಾವುದೇ ಕಾರಣಕ್ಕೂ ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ. ಸರ್ಕಾರಿ ಕಚೇರಿಗಳಲ್ಲಿ ಯಾವುದೇ ಅಧಿಕಾರಿ ಸಾರ್ವಜನಿಕರಿಂದ ಹಣ ಅಥವಾ ಲಂಚಕ್ಕೆ ಬೇಡಿಕೆ ಇಟ್ಟರೆ ಅದನ್ನು ಪ್ರಶ್ನಿಸಬೇಕು. ಕೂಡಲೇ ಶಾಸಕರ ಕಚೇರಿಗೆ ದೂರು ನೀಡಬೇಕು ಅಥವಾ ನೇರವಾಗಿ ದೂರವಾಣಿ ಮೂಲಕ ನನ್ನನ್ನು ಸಂಪರ್ಕಿಸಬೇಕು ಎಂದು ಶಾಸಕ ಧೀರಜ್ ಮುನಿರಾಜು ತಿಳಿಸಿದ್ದಾರೆ.

ನಗರದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿರುವ ಶಾಸಕರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಪ್ರಚಾರದ ವೇಳೆ ನೀಡಿದ್ದ ಭ್ರಷ್ಟಾಚಾರ ಮುಕ್ತ ಆಡಳಿತದ ಭರವಸೆಗೆ ನಾನು ಬದ್ಧರಾಗಿದ್ದೇನೆ. ತಾಲ್ಲೂಕಿನ ಜನತೆ ನೀಡಿರುವ ಅಧಿಕಾರವನ್ನು ಎಂದಿಗೂ ದುರುಪಯೋಗಪಡಿಸಿಕೊಂಡಿಲ್ಲ. ಮುಂದೆಯೂ ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಜನಸೇವೆ ಮುಂದುವರಿಸುತ್ತೇನೆ ಎಂದು ಹೇಳಿದರು.

ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ನೀಡಿರುವ ಹೇಳಿಕೆಯನ್ನು ಸ್ವಾಗತಿಸುತ್ತೇನೆ. ತಾಲ್ಲೂಕಿನಲ್ಲಿ ಅಧಿಕಾರಿಗಳ ವರ್ಗಾವಣೆ ಸೇರಿದಂತೆ ಯಾವುದೇ ವಿಷಯಕ್ಕೆ ಸಂಬಂಧಿಸಿದಂತೆ ಇದುವರೆಗೆ ಯಾರಿಂದಲೂ ಹಣ ಪಡೆದಿಲ್ಲ, ಮುಂದೆಯೂ ಪಡೆಯುವುದಿಲ್ಲ. ಹಾಗಿರುವಾಗ ಅಧಿಕಾರಿಗಳು ಸಾರ್ವಜನಿಕರಿಂದ ಲಂಚ ಪಡೆಯಲು ಯಾವುದೇ ಕಾರಣವಿಲ್ಲ ಎಂದು ಅವರು ಹೇಳಿದರು.

ತಾಲ್ಲೂಕಿನ ಯಾವುದೇ ಸರ್ಕಾರಿ ಅಧಿಕಾರಿ ಹಣಕ್ಕೆ ಬೇಡಿಕೆ ಇಟ್ಟರೆ ಸಾರ್ವಜನಿಕರು ಮೌನವಾಗಿರದೆ ಕೂಡಲೇ ಶಾಸಕರ ಕಚೇರಿ ಸಿಬ್ಬಂದಿಗೆ ಮಾಹಿತಿ ನೀಡಬೇಕು ಅಥವಾ ನೇರವಾಗಿ ನನ್ನನ್ನು ಸಂಪರ್ಕಿಸಬೇಕು. ಜನರು ನೀಡಿರುವ ಅಧಿಕಾರವನ್ನು ಬಳಸಿಕೊಂಡು ಅಂತಹ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಧೀರಜ್ ಮುನಿರಾಜು ಎಚ್ಚರಿಕೆ ನೀಡಿದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

38 minutes ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

4 hours ago

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

16 hours ago

ರಾಜಾನುಕುಂಟೆ ಬಳಿ ರೈಲು ಬೋಗಿಗಳಿಗೆ ಬೆಂಕಿ: ಎರಡು ಬೋಗಿಗಳು ಸುಟ್ಟು ಭಸ್ಮ

ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…

22 hours ago

ಮಧುರೆ ಕೆರೆಯಲ್ಲಿ ಮಣ್ಣು ದಂಧೆ ಆರೋಪ: ಸುಮಾರು 35 ಟ್ರ್ಯಾಕ್ಟರ್, 5 ಜೆಸಿಬಿಗಳ ಅಬ್ಬರ; ಮಣ್ಣು ತೆಗೆಯುವುದಕ್ಕೆ ಗ್ರಾಮಸ್ಥರ ಬ್ರೇಕ್!

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್‌ಗಳು…

23 hours ago

ನಮ್ಮ ತೆರಿಗೆ ನಮ್ಮ ಹಕ್ಕು…

ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…

1 day ago