ಭ್ರಷ್ಟಾಚಾರ ಆರೋಪ: ಮೂವರು ಅಧಿಕಾರಿಗಳ 14 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ


ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ಎಪಿಎಂಸಿ (ಕೃಷಿ ಇಲಾಖೆ) ಹೆಚ್ಚುವರಿ ನಿರ್ದೇಶಕಿ ಪುಷ್ಪ ಡಿ.ಆರ್., ಕೆಆರ್‌ಐಡಿಎಲ್‌ನ ಸೂಪರಿಂಟೆಂಡಿಂಗ್ ಇಂಜಿನಿಯರ್ ಪ್ರವೀಣ್ ಶ್ರೀಹರಿ ಹಾಗೂ ಸಾರ್ವಜನಿಕ ಕಾಮಗಾರಿ ಇಲಾಖೆ (PWD) ಕಾರ್ಯನಿರ್ವಾಹಕ ಎಂಜಿನಿಯರ್ ನರೇಂದ್ರ ಅವರಿಗೆ ಸಂಬಂಧಿಸಿದ ಒಟ್ಟು 14 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಶೋಧ ಕಾರ್ಯಾಚರಣೆ ನಡೆಸಿದೆ.

20ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದು, ಮನೆಗಳು, ಕಚೇರಿಗಳು ಮತ್ತು ಇತರೆ ಸ್ಥಳಗಳಲ್ಲಿ ದಾಖಲೆಗಳು, ಆಸ್ತಿ ವಿವರಗಳು ಹಾಗೂ ಮೌಲ್ಯಯುತ ವಸ್ತುಗಳ ಪರಿಶೀಲನೆ ನಡೆಸಿದರು.

ಎಪಿಎಂಸಿ ಹೆಚ್ಚುವರಿ ನಿರ್ದೇಶಕಿ ಪುಷ್ಪ ಡಿ.ಆರ್. ಅವರ ನಿವಾಸದಲ್ಲಿ ಚಿನ್ನಾಭರಣ ಸೇರಿದಂತೆ ದುಬಾರಿ ವಸ್ತುಗಳು ಪತ್ತೆಯಾಗಿರುವ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ವಶಪಡಿಸಿಕೊಂಡ ದಾಖಲೆಗಳು ಮತ್ತು ಆಸ್ತಿ-ಪಾಸ್ತಿಗಳ ಮೌಲ್ಯಮಾಪನ ಕಾರ್ಯ ಮುಂದುವರಿದಿದ್ದು, ತನಿಖೆ ಪೂರ್ಣಗೊಂಡ ಬಳಿಕ ಹೆಚ್ಚಿನ ಮಾಹಿತಿ ಬಹಿರಂಗವಾಗುವ ಸಾಧ್ಯತೆ ಇದೆ.

ಭ್ರಷ್ಟಾಚಾರ ಮತ್ತು ಆದಾಯ ಮೀರಿ ಆಸ್ತಿ ಗಳಿಕೆ ಸಂಬಂಧದ ಪ್ರಕರಣಗಳಲ್ಲಿ ಲೋಕಾಯುಕ್ತ ಇಲಾಖೆ ತನಿಖೆಯನ್ನು ಮುಂದುವರಿಸಿದ್ದು, ದಾಳಿಯಲ್ಲಿ ಸಂಗ್ರಹಿಸಿದ ದಾಖಲೆಗಳ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Ramesh Babu

Journalist

Recent Posts

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

7 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

20 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

21 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

24 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 day ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

1 day ago