ಕೈ ತುಂಬಾ ಸಂಬಳ ಬರುವ ಸರ್ಕಾರಿ ಕೆಲಸವನ್ನು ತೊರೆದು ಭ್ರಷ್ಟ ಆಡಳಿತ ವ್ಯವಸ್ಥೆಯನ್ನು ಸರಿಪಡಿಸಲು ಮತ್ತು ಜನಸಾಮಾನ್ಯರ ಪರವಾಗಿ ಕ್ರಾಂತಿಕಾರಿ ಹೋರಾಟಕ್ಕೆ ಧುಮುಕಿದ್ದವರು ಕವಿ ಗದ್ದರ್ ಎಂದು ಕನ್ನಡ ಜಾಗೃತಿ ಪರಿಷತ್ ಅಧ್ಯಕ್ಷ ಕೆ.ವೆಂಕಟೇಶ್ ಅಭಿಪ್ರಾಯಪಟ್ಟರು.
ನಗರದ ಕನ್ನಡ ಜಾಗೃತ ಪರಿಷತ್ ಮತ್ತು ಪ್ರಗತಿ ಪರ ಸಂಘಟನೆಗಳಿಂದ ಕನ್ನಡ ಜಾಗೃತ ಪರಿಷತ್ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ದಲಿತ ಹೋರಾಟಗಾರ ಗದ್ದರ್ ನುಡಿನಮನ ಸಭೆಯಲ್ಲಿ ಅವರು ಮಾತನಾಡಿದರು. ಅನ್ಯಾಯ, ಮೋಸ, ವಂಚನೆ, ದೌರ್ಜನ್ಯ, ದಬ್ಬಾಳಿಕೆಯನ್ನು ಕೆಚ್ಚೆದೆಯದಿಂದ ವಿರೋಧಿಸುವ, ಹಿಮ್ಮೆಟ್ಟಿಸುವ ಶಕ್ತಿ ಗದ್ದರ್ ಅವರಲ್ಲಿತ್ತು. ಸದಾಕಾಲ ಶೋಷಣೆಗೆ ಒಳಗಾದ, ದಮನಕ್ಕೆ ಒಳಗಾದ, ದೀನ ದಲಿತ ಶ್ರೇಯೋಭಿವೃದ್ಧಿಗಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟ ಮಹಾನ್ ಕ್ರಾಂತಿಕಾರಿ ಗಾಯಕ ಗದ್ದರ್. ಅಂತಹ ಶಕ್ತಿ, ಮನಸ್ಥಿತಿ ಇರುವ ವ್ಯಕ್ತಿಗಳನ್ನು ಕಾಣುವುದು ಈಗಿನ ಕಾಲಘಟ್ಟದಲ್ಲಿ ಅಪರೂಪವಾಗಿದೆ ಎಂದರು.
ಸಿಪಿಐಎಂ ಮುಖಂಡ ಚಂದ್ರತೇಜಸ್ವಿ ಮಾತನಾಡಿ ಜೀವನುದುದ್ದಕ್ಕೂ ಪ್ರತಿಕ್ಷಣವೂ ಹೋರಾಟದ ಮನೋಭಾವ ರೂಪಿಸಿಕೊಂಡಿದ್ದರು. ನಕ್ಸಲ್ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ಸಮಯದಲ್ಲಿ ಹಲವು ಗುಂಡೇಟು ತಿಂದಿದ್ದಾರೆ. ಒಂದು ಗುಂಡು ಸ್ಪೈನಲ್ ಕಾರ್ಡ್ ನಲ್ಲಿ ಸೇರಿಕೊಂಡಿದ್ದರಿಂದ ಜೀವನ ಪೂರ್ತಿ ಗುಂಡಿನ ಜೊತೆ ಸಾಗಿದ್ದರು. ಅವಿಭಜಿತ ಆಂಧ್ರಪ್ರದೇಶದ ಸುಧಾರಣೆಗೆ ಸಾಕಷ್ಟು ಶ್ರಮಿಸಿದ್ದರು ಎಂದು ತಿಳಿಸಿದರು.
ಕನ್ನಡ ಜಾಗೃತ ಪರಿಷತ್ ಮುಖಂಡರು, ಪ್ರಗತಿ ಪರ ಸಂಘಟನೆಗಳ ಮುಖಂಡರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…
ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…