ಠಾಣೆ ವಶದಲ್ಲಿದ್ದ ವಾಹನ ಬಿಡುಗಡೆಗೆ 40 ಸಾವಿರ ರೂ. ಲಂಚ ಪಡೆದ ಆರೋಪದ ಮೇರೆಗೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಚೇತನ ಅವರನ್ನು ಲೋಕಾಯುಕ್ತ ಪೊಲೀಸರು ಇಂದು ಬೆಳಗಿನ ಜಾವ ವಶಕ್ಕೆ ಪಡೆದಿದ್ದಾರೆ.
ವಾಹನ ಬಿಡುಗಡೆ ಮಾಡಲು 1 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಇದರಲ್ಲಿ 40 ಸಾವಿರ ಹಣವನ್ನು ಕ್ಯಾತ್ಸಂದ್ರ ಬಳಿಯ ಹೋಟೆಲ್ ಸಿಬ್ಬಂದಿಯೊಬ್ಬರಿಗೆ ನೀಡುವಂತೆ ವಾಹನ ಮಾಲೀಕರಿಗೆ ಚೇತನ್ ತಿಳಿಸಿದ್ದರು. ಈ ಕುರಿತು ವಾಹನ ಮಾಲೀಕರು ಲೋಕಾಯುಕ್ತ ಠಾಣೆಯಲ್ಲಿ ದೂರು ಸಲ್ಲಿಸಿದ್ದರು.
ಶುಕ್ರವಾರ ರಾತ್ರಿ ಕ್ಯಾತ್ಸಂದ್ರದ ಹೋಟೆಲ್ ಸಿಬ್ಬಂದಿ ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಿಬ್ಬಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪಿಎಸ್ಐ ಚೇತನ್ ಬಗ್ಗೆ ಹೇಳಿದ್ದಾರೆ.
ಶನಿವಾರ ಬೆಳಗಿನ ಜಾವ ಲೋಕಾಯುಕ್ತ ಪೊಲೀಸರು ಚೇತನ್ ಅವರನ್ನು ಬಂಧಿಸಿದ್ದಾರೆ.
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…
ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…
ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…