ಮಂಗಳೂರಿನಲ್ಲಿ ಮತ್ತೆ ನೆತ್ತರು ಹರಿದಿದ್ದು, ಹಿಂದೂಪರ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.
ಬಜಪೆ ಕಿನ್ನಿಪದವು ಸಮೀಪ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿ ಮೇಲೆ ತಲವಾರು ದಾಳಿ ನಡೆಸಿ ಬರ್ಭರವಾಗಿ
ಹತ್ಯೆ ಮಾಡಲಾಗಿದೆ.
2022 ರಲ್ಲಿ ಸುರತ್ಕಲ್‌ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಮತ್ತು ರೌಡಿಶೀಟರ್ ಸುಹಾಸ್ ಶೆಟ್ಟಿಯನ್ನು ಗುರುವಾರ ರಾತ್ರಿ 8.27 ರ ಸುಮಾರಿಗೆ ಮಂಗಳೂರಿನ ಹೊರವಲಯದ ಬಜ್ಪೆ ಠಾಣೆ ವ್ಯಾಪ್ತಿಯ ಕಿನ್ನಿಪದವು ಎಂಬಲ್ಲಿ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ.
ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ 2022ರ ಜುಲೈ 28ರಂದು ಫಾಜಿಲ್ನ ಕೊಲೆಯಾಗಿತ್ತು. ಈ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ ಪ್ರಮುಖ ಆರೋಪಿಯಾಗಿದ್ದ.
ಇದೀಗ ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾತನಾಡಿ, ‘ಈ ಘಟನೆ ರಾತ್ರಿ 8.27 ರ ಸುಮಾರಿಗೆ ನಡೆದಿದೆ. ಕೆಎ-12-ಎಂಬಿ-3731 ವಾಹನದಲ್ಲಿ ಪ್ರಯಾಣಿಸುತ್ತಿದ್ದ ಸುಶಾಂತ್ ಶೆಟ್ಟಿ ಅವರನ್ನು ಸ್ವಿಫ್ಟ್ ಕಾರು ಮತ್ತು ಪಿಕಪ್ ವಾಹನದಲ್ಲಿ ಪ್ರಯಾಣಿಸುತ್ತಿದ್ದ ದುಷ್ಕರ್ಮಿಗಳ ಗುಂಪು ಅಡ್ಡಗಟ್ಟಿದೆ. 5 ರಿಂದ 6 ಜನರಿದ್ದ ದುಷ್ಕರ್ಮಿಗಳು ಸುಹಾಸ್ ಶೆಟ್ಟಿ ಮೇಲೆ ಮಾರಕಾಯುಧಗಳಿಂದ ಹಲ್ಲೆ ನಡೆಸಿ ಗಂಭೀರ ಗಾಯಗಳನ್ನುಂಟುಮಾಡಿದರು. ಅವರನ್ನು ತಕ್ಷಣ ಎಜೆ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಅವರು ಸಾವನ್ನಪ್ಪಿದರು. ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಆದಷ್ಟು ಬೇಗ ಬಂಧಿಸಲು ಹಲವಾರು ತಂಡಗಳನ್ನು ರಚಿಸಲಾಗಿದೆ ಎಂದರು.
ಕ್ಯಾಮೆರಾದಲ್ಲಿ ಭೀಕರ ದಾಳಿ ಸೆರೆ!
ಇನ್ನು ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳ ಅಟ್ಟಾಡಿಸಿ ಕೊಲೆಗೈದ ಘಟನೆಯನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ಈ ವಿಡಿಯೋವನ್ನು ಬಿಜೆಪಿ ನಾಯಕ ಸುನಿಲ್ ಕುಮಾರ್ ಕಾರ್ಕಳ ತಮ್ಮ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ.