Categories: ಮಂಗಳೂರು

ಮಂಗಳೂರಲ್ಲಿ ಮತ್ತೆ ಹರಿದ ನೆತ್ತರು: ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ: ದೃಶ್ಯ ಮೊಬೈಲ್‌ನಲ್ಲಿ ಸೆರೆ

ಮಂಗಳೂರಿನಲ್ಲಿ ಮತ್ತೆ ನೆತ್ತರು ಹರಿದಿದ್ದು, ಹಿಂದೂಪರ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

ಬಜಪೆ ಕಿನ್ನಿಪದವು ಸಮೀಪ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿ ಮೇಲೆ ತಲವಾರು ದಾಳಿ ನಡೆಸಿ ಬರ್ಭರವಾಗಿ
ಹತ್ಯೆ ಮಾಡಲಾಗಿದೆ.

2022 ರಲ್ಲಿ ಸುರತ್ಕಲ್‌ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಮತ್ತು ರೌಡಿಶೀಟರ್ ಸುಹಾಸ್ ಶೆಟ್ಟಿಯನ್ನು ಗುರುವಾರ ರಾತ್ರಿ 8.27 ರ ಸುಮಾರಿಗೆ ಮಂಗಳೂರಿನ ಹೊರವಲಯದ ಬಜ್ಪೆ ಠಾಣೆ ವ್ಯಾಪ್ತಿಯ ಕಿನ್ನಿಪದವು ಎಂಬಲ್ಲಿ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ.

ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ 2022ರ ಜುಲೈ 28ರಂದು ಫಾಜಿಲ್​ನ ಕೊಲೆಯಾಗಿತ್ತು. ಈ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ‌ ಪ್ರಮುಖ ಆರೋಪಿಯಾಗಿದ್ದ.

ಇದೀಗ ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾತನಾಡಿ, ‘ಈ ಘಟನೆ ರಾತ್ರಿ 8.27 ರ ಸುಮಾರಿಗೆ ನಡೆದಿದೆ. ಕೆಎ-12-ಎಂಬಿ-3731 ವಾಹನದಲ್ಲಿ ಪ್ರಯಾಣಿಸುತ್ತಿದ್ದ ಸುಶಾಂತ್ ಶೆಟ್ಟಿ ಅವರನ್ನು ಸ್ವಿಫ್ಟ್ ಕಾರು ಮತ್ತು ಪಿಕಪ್ ವಾಹನದಲ್ಲಿ ಪ್ರಯಾಣಿಸುತ್ತಿದ್ದ ದುಷ್ಕರ್ಮಿಗಳ ಗುಂಪು ಅಡ್ಡಗಟ್ಟಿದೆ. 5 ರಿಂದ 6 ಜನರಿದ್ದ ದುಷ್ಕರ್ಮಿಗಳು ಸುಹಾಸ್ ಶೆಟ್ಟಿ ಮೇಲೆ ಮಾರಕಾಯುಧಗಳಿಂದ ಹಲ್ಲೆ ನಡೆಸಿ ಗಂಭೀರ ಗಾಯಗಳನ್ನುಂಟುಮಾಡಿದರು. ಅವರನ್ನು ತಕ್ಷಣ ಎಜೆ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಅವರು ಸಾವನ್ನಪ್ಪಿದರು. ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಆದಷ್ಟು ಬೇಗ ಬಂಧಿಸಲು ಹಲವಾರು ತಂಡಗಳನ್ನು ರಚಿಸಲಾಗಿದೆ ಎಂದರು.

ಕ್ಯಾಮೆರಾದಲ್ಲಿ ಭೀಕರ ದಾಳಿ ಸೆರೆ!
ಇನ್ನು ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳ ಅಟ್ಟಾಡಿಸಿ ಕೊಲೆಗೈದ ಘಟನೆಯನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ಈ ವಿಡಿಯೋವನ್ನು ಬಿಜೆಪಿ ನಾಯಕ ಸುನಿಲ್ ಕುಮಾರ್ ಕಾರ್ಕಳ ತಮ್ಮ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ.

Ramesh Babu

Journalist

Recent Posts

ಹಿಂಬದಿಯಿಂದ ಬೈಕ್‌ಗೆ ಕಾರು ಡಿಕ್ಕಿ: ದಂಪತಿ ಸಾವು

ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ದಂಪತಿ ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…

3 hours ago

ಬಿಗ್ ಬಾಸ್ ಮತ್ತು ಏಷ್ಯನ್ ಗೇಮ್ಸ್……

ಜಪಾನಿನ ಐಚಿ - ನಾಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಮತ್ತು ಭಾರತದ ವಿವಿಧ ಭಾಷೆಯ ಟಿವಿ ಚಾನಲ್ ಗಳಲ್ಲಿ ಪ್ರಸಾರವಾಗುತ್ತಿರುವ…

4 hours ago

ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ- ಆರ್.ವಿ. ಮಹೇಶ್

ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…

17 hours ago

ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ 18ರ ಹರೆಯದ ವಿದ್ಯಾರ್ಥಿ

ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…

17 hours ago

ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ತೇಜಸ್ವಿನಿ.ಸಿ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…

18 hours ago

ಬರದ ನಡುವೆ ಜಾನುವಾರುಗಳಿಗೆ ಹಸಿರು ಆಸರೆ: 70 ಎಕರೆಯಲ್ಲಿ ಹಸಿಹುಲ್ಲು ಬೆಳವಣಿಗೆಗೆ ಜಿಪಂ ಕ್ರಮ: ಮತ್ತಷ್ಟು ಸರ್ಕಾರಿ ಜಮೀನು ಹುಲ್ಲುಗಾವಲಾಗಿ ಪರಿವರ್ತನೆ

ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…

1 day ago