ಮಂಗಳೂರು ಟೆಕ್ಕಿ ಉಸಿರುಗಟ್ಟಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಕೊಲೆ ಆರೋಪಿ ಅರೆಸ್ಟ್

ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಟೆಕ್ಕಿ ಶರ್ಮಿಳಾ ಅವರ ಸಾವು ಶಾರ್ಟ್ ಸರ್ಕ್ಯೂಟ್‌ನಿಂದಾದ ಬೆಂಕಿ ಅವಘಡವೆಂದು ಆರಂಭದಲ್ಲಿ ಶಂಕಿಸಲಾಗಿತ್ತು.

ಆದರೆ, ಪೊಲೀಸ್ ತನಿಖೆಯು ಇದೊಂದು ಪೂರ್ವನಿಯೋಜಿತ ಕೊಲೆ ಎಂದು ಬಹಿರಂಗಪಡಿಸಿದ್ದು, ಈ ಸಂಬಂಧ ಆಕೆಯ ಪ್ರಿಯಕರ, ಕೇರಳ ಮೂಲದ ಕರ್ನಲ್ ಕುರೈನನ್ನು ಬಂಧಿಸಲಾಗಿದೆ.

ಬೆಂಗಳೂರು: ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಟೆಕ್ಕಿ ಮಹಿಳೆಯ ನಿಗೂಢ ಸಾವು ಪ್ರಕರಣಕ್ಕೆ ಇದೀಗ ಸ್ಪೋಟಕ ತಿರುವು ದೊರೆತಿದೆ.

ಆರಂಭದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ಬೆಂಕಿ ಅವಘಡದಲ್ಲಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದ್ದ ಟೆಕ್ಕಿ ಶರ್ಮಿಳಾ ಅವರ ಸಾವು, ವಾಸ್ತವವಾಗಿ ಕೊಲೆ ಎಂಬುದು ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಶರ್ಮಿಳಾರನ್ನು ಪ್ರೀತಿಸುತ್ತಿದ್ದ ಕರ್ನಲ್ ಕುರೈ ಎಂಬ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಕೇರಳ ಮೂಲದವನು ಎಂದು ತಿಳಿದುಬಂದಿದೆ. ಶರ್ಮಿಳಾ ಕಳೆದ ಎರಡು ವರ್ಷಗಳಿಂದ ಸುಬ್ರಹ್ಮಣ್ಯ ಲೇಔಟ್‌ನಲ್ಲಿ ವಾಸವಿದ್ದರು.

ಆರೋಪಿ ಕರ್ನಲ್ ಕುರೈ ಪಕ್ಕದ ಮನೆ ವಾಸಿಯಾಗಿದ್ದರಿಂದ ಮುಖ ಪರಿಚಯವಿತ್ತು. ಆದರೆ ಯುವಕ ಕುರೈ ಶರ್ಮಿಳನ್ನು ಪ್ರೀತಿ ಮಾಡ್ತಿದ್ದ. ಈ ವಿಚಾರ ತಿಳಿಯದ ಟೆಕ್ಕಿ ಶರ್ಮಿಳಾ ಕೊಲೆಯಾಗಿದ್ದಾಳೆ.

ಶರ್ಮಿಳಾ ಯಾರು?

ಮೃತ ಶರ್ಮಿಳಾ (34) ಅವರು ಮಂಗಳೂರಿನ ಕಾವೂರು ಮೂಲದವರು. ಕಳೆದ ಒಂದೂವರೆ ವರ್ಷಗಳಿಂದ ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಲೇಔಟ್‌ನ ಅಪಾರ್ಟ್‌ಮೆಂಟ್‌ನಲ್ಲಿ ಸ್ನೇಹಿತೆಯೊಂದಿಗೆ ವಾಸವಾಗಿದ್ದರು. ಮನೆ ಸಮೀಪದ ಖಾಸಗಿ ಸಾಫ್ಟ್‌ವೇರ್ ಕಂಪನಿಯಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದರು. ಘಟನೆ ನಡೆದ ದಿನ ಶರ್ಮಿಳಾಗೆ ರಜೆ ಇದ್ದು, ಆಕೆಯ ಸ್ನೇಹಿತೆ ಊರಿಗೆ ತೆರಳಿದ್ದ ಕಾರಣ ಶರ್ಮಿಳಾ ಮನೆಯಲ್ಲಿ ಒಬ್ಬರೇ ಇದ್ದರು.

ಘಟನೆ ಹೇಗಿತ್ತು….?

ಶನಿವಾರ ರಾತ್ರಿ ಸುಮಾರು 11 ಗಂಟೆ ಸುಮಾರಿಗೆ, ಮನೆಯ ಒಂದು ಕೋಣೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ದಟ್ಟವಾದ ಹೊಗೆ ಆವರಿಸಿತ್ತು.

ಬೆಂಕಿ ಕಾಣಿಸಿಕೊಂಡ ಕೂಡಲೇ ಶರ್ಮಿಳಾ ಆ ಕೋಣೆಯತ್ತ ತೆರಳಲು ಯತ್ನಿಸಿದ್ದಾರೆ. ಇದೇ ವೇಳೆ ವಿದ್ಯುತ್ ಸಂಪರ್ಕ ಕಡಿತಗೊಂಡ ಪರಿಣಾಮ ಮನೆ ಸಂಪೂರ್ಣ ಕತ್ತಲಲ್ಲಿ ಮುಳುಗಿದೆ.

ಕತ್ತಲೆ ಮತ್ತು ದಟ್ಟ ಹೊಗೆಯಿಂದಾಗಿ ಕಿಟಕಿ ಅಥವಾ ಬಾಗಿಲು ತೆರೆಯಲು ಸಾಧ್ಯವಾಗದೆ, ಶರ್ಮಿಳಾ ಉಸಿರುಗಟ್ಟಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಹೊರಬಿದ್ದಿತ್ತು. ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದರು. ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿತ್ತು.

Ramesh Babu

Journalist

Recent Posts

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ: ವೈದ್ಯ, ಪತ್ರಕರ್ತ, ಪೊಲೀಸ್, ಪೌರಕಾರ್ಮಿಕರಿಗೆ ಸನ್ಮಾನ

"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…

10 hours ago

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ: ಪತ್ರಕರ್ತ, ಪೊಲೀಸ್, ಪೌರಕಾರ್ಮಿಕರು ಸೇರಿದಂತೆ ಇತರೆ ಸಾಧಕರಿಗೆ ಸನ್ಮಾನ

"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…

11 hours ago

ಬೆಳಗಾವಿಯ ಚೋರ್ಲಾ ಘಾಟ್‌ನಲ್ಲಿ ₹400 ಕೋಟಿ ದರೋಡೆ ಪ್ರಕರಣ: ದಟ್ಟಾರಣ್ಯದ ಮೌನದಲ್ಲಿ ಅಡಗಿದ್ದ ಭೀಕರ ರಹಸ್ಯ..ಬೆಚ್ಚಿಬೀಳಿಸುವ ಪ್ರಮುಖ ಅಂಶಗಳು…ಇಲ್ಲಿವೆ ಓದಿ…

ಬೆಳಗಾವಿಯ ದಟ್ಟ ಅರಣ್ಯ ಪ್ರದೇಶದ ನಡುವೆ ಸಾಗುವ ಚೋರ್ಲಾ ಘಾಟ್‌ನ ರಸ್ತೆಗಳು ಸಾಮಾನ್ಯವಾಗಿ ಮೌನದಿಂದ ಕೂಡಿರುತ್ತವೆ. ಆದರೆ, ಆ ಮೌನದಲ್ಲೇ…

20 hours ago

2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟ: ಕರ್ನಾಟಕದ 8 ಮಂದಿಯು ಈ ನಾಗರಿಕ ಗೌರವಕ್ಕೆ ಭಾಜನ

2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟವಾಗಿದೆ. ಒಟ್ಟು 131 ಮಂದಿ ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕದ 8 ಮಂದಿಯು ಈ…

1 day ago

ಹುಲುಕುಡಿ ವೀರಭದ್ರಸ್ವಾಮಿ ಮತ್ತು ಪ್ರಸನ್ನ ಭದ್ರಕಾಳಮ್ಮ ರಥೋತ್ಸವ

ದೊಡ್ಡಬಳ್ಳಾಪುರ ತಾಲ್ಲೂಕಿನ ಹುಲುಕುಡಿ ವೀರಭದ್ರಸ್ವಾಮಿ ಕ್ಷೇತ್ರದಲ್ಲಿ ಕ್ಷೇತ್ರಾಭಿವೃದ್ಧಿ ಟ್ರಸ್ಟ್ ವತಿಯಿಂದ ರಥಸಪ್ತಮಿ ಅಂಗವಾಗಿ ಇಂದು (ಜ.25) ವೀರಭದ್ರಸ್ವಾಮಿ ಮತ್ತು ಪ್ರಸನ್ನ…

1 day ago

ರಘುನಾಥಪುರ ಬಳಿ ಪಿಕಪ್ ವಾಹನ, ಆಟೋ ಹಾಗೂ ಬೈಕ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು

ಪಿಕಪ್ ವಾಹನ, ಆಟೋ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ…

2 days ago