ಮಂಜುನಾಥ ಅದ್ದೆ ಅವರಿಗೆ ‘ಸುವರ್ಣ ಮಹೋತ್ಸವ ಪ್ರಶಸ್ತಿ’

ದೊಡ್ಡಬಳ್ಳಾಪುರ: ಕರ್ನಾಟಕ ಸಂಭ್ರಮ-50ರ ಸಂದರ್ಭದಲ್ಲಿ ರಾಜ್ಯ ಸರ್ಕಾರ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿರುವ ವ್ಯಕ್ತಿಗಳಿಗೆ ನೀಡುತ್ತಿರುವ ‘ಸುವರ್ಣ ಮಹೋತ್ಸವ ಪ್ರಶಸ್ತಿ-2024’ ಮಾಧ್ಯಮ ಕ್ಷೇತ್ರದಲ್ಲಿನ ಸಾಧನೆಗಾಗಿ ತಾಲ್ಲೂಕಿಗೆ ಸಮೀಪದ ಯಲಹಂಕ ತಾಲ್ಲೂಕಿನ ಅದ್ದೆ ಗ್ರಾಮದ ಡಾ.ಮಂಜುನಾಥ ಅದ್ದೆ ಅವರಿಗೆ ದೊರೆತಿದೆ.

ಬೆಂಗಳೂರು ವಿಶ್ವ ವಿದ್ಯಾಲಯದಲ್ಲಿ ಸಮಾಜಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಮಂಜುನಾಥ ಅದ್ದೆ ಅವರು ಪತ್ರಕರ್ತರಾಗಿ ಎರಡು ದಶಕಗಳ ಕಾಲ ಸೇವೆ ಸಲ್ಲಿಸಿದ್ದಾರೆ.

ಸಾಹಿತ್ಯ ಕ್ಷೇತ್ರದಲ್ಲೂ ತೊಡಗಿಸಿಕೊಂಡಿದ್ದು, ಇವರು ಬರೆದಿರುವ ‘ಒಡಲ ತುಡಿತಕ್ಕೆ ಕೇಡು’ ಕೃತಿಗೆ 2008ರಲ್ಲಿ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ‘ಗಾಳಿ ಗಮಲು’ ಕೃತಿಗೆ 2010ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, 2014ರಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ದೊರೆತಿವೆ. ಒಡಲ ತುಡಿತಕ್ಕೆ ಕೇಡು ಕೃತಿಯಲ್ಲಿನ ಹೆಣ್ಣು ಭ್ರೂಣ ಹತ್ಯೆ ಕುರಿತ ಸಂಶೋಧನಾ ಲೇಖನವು ದ್ವಿತೀಯ ಪಿಯುಸಿ ಸಮಾಜಶಾಸ್ತ್ರ ಪಠ್ಯ ಪುಸ್ತಕದಲ್ಲಿ ಅಳವಡಿಕೆಯಾಗಿದೆ. ಕನ್ನಡಿ ಕಣ್ಣು (ಕವನ ಸಂಕಲ), ಸಾಮೂದಾಯಿಕ ಭೂಮಿ ಮತ್ತು ಜನಜೀವನ ಸಂಶೋಧನ ಪ್ರಬಂಧ, ಈತರ್ಕೆ-ಈತರ ವ್ಯಕ್ತಿಗಳ ಚಿತ್ರಣ ಕೃತಿಗಳನ್ನು ಬರೆದಿದ್ದಾರೆ.

‘ಕರ್ನಾಟಕದ ಪ್ರಜಾಸತ್ತಾತ್ಮಕ ಪ್ರಕ್ರಿಯೆಯಲ್ಲಿ ಡಾ.ರಾಜ್ ಕುಮಾರ್ ಅವರ ಪಾತ್ರ’ ಕುರಿತ ಮಹಾಪ್ರಬಂಧಕ್ಕೆ ಮೈಸೂರಿನ ಸಂಗಿತ ಮತ್ತು ಅಭಿನಯ ಕಲೆಗಳ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ದೊರೆತಿದೆ.ರೈತ,ದಲಿತ,ಪ್ರಗತಿಪರ ಚಳುವಳಿ ಗಳು ಸೇರಿದಂತೆ ಹಲವಾರು ಜನಪರ ಹೋರಾಟಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

Ramesh Babu

Journalist

Recent Posts

“ಗುಣಮಟ್ಟದ ಚಿಕಿತ್ಸೆಗೆ ಸಹ್ಯಾದ್ರಿ ಆಸ್ಪತ್ರೆ ಬದ್ಧ”

ದೊಡ್ಡಬಳ್ಳಾಪುರದ ಪಾಲನಜೋಗಿಹಳ್ಳಿ, ಗೌರಿಬಿದನೂರು ರಸ್ತೆಯ ಫ್ರೆಂಡ್ಸ್ ಫಂಕ್ಷನ್ ಹಾಲ್ ಎದುರಿನ ಸಹ್ಯಾದ್ರಿ ಆಸ್ಪತ್ರೆಯು 2025ರ ಮೇ.11ರಂದು ಪ್ರಾರಂಭವಾಗಿ ಆಧುನಿಕ ತಂತ್ರಜ್ಞಾನ,…

28 minutes ago

ಚಳಿಗಾಲದ ಪಾರ್ಟಿಗಳಿಂದ ಹೊಟ್ಟೆಗೆ ಕಾಟ: ಗ್ಯಾಸ್ಟ್ರೋ ಪ್ರಕರಣಗಳಲ್ಲಿ 25% ಏರಿಕೆ

ಪ್ರತಿ ವರ್ಷ ಚಳಿಗಾಲದಲ್ಲಿ ಬರುವ ಹಬ್ಬದಲ್ಲಿ, ಬೆಂಗಳೂರು ಮೆಡಿಕವರ್ ಆಸ್ಪತ್ರೆಗಳಲ್ಲಿ ಹೊಟ್ಟೆ ಸಂಬಂಧಿತ (ಗ್ಯಾಸ್ಟ್ರೋ) ಹೊರರೋಗಿ ವಿಭಾಗ (OPD) ಮತ್ತು…

4 hours ago

ಕೇರಳದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನ ಭೇಟಿಯಾದ ದೊಡ್ಡಬಳ್ಳಾಪುರ ಕಾಂಗ್ರೆಸ್ ಮುಖಂಡರು….

ಕೇರಳದ ತಿರುವನಂತಪುರಂ ಜಿಲ್ಲೆಯ ಶಿವಗಿರಿ ಮಠದಲ್ಲಿ ಶ್ರೀ ನಾರಾಯಣ ಧರ್ಮಸಂಗಮ ಟ್ರಸ್ಟ್‌ ಆಯೋಜಿಸಿರುವ ಮಠದ ಯಾತ್ರಾರ್ಥಿಗಳ‌ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ…

6 hours ago

ಮಡಿಕೇರಿ ಹನಿ ಟ್ರ್ಯಾಪ್ ಪ್ರಕರಣ: ಬಲೆಗೆ ಬಿದ್ದರಾ ಗಣ್ಯರು?

ಇತ್ತೀಚೆಗೆ ಮಂಡ್ಯ ಮೂಲಕ ವ್ಯಕ್ತಿ ಮಹಿಳೆ ಮತ್ತು ಆಕೆಯ ಸಹಚರರ ಜಾಲಕ್ಕೆ ಸಿಲುಕಿ ಮಾರಣಾಂತಿಕ ಹಲ್ಲೆಗೆ ಒಳಗಾಗಿ ನಂತರ ಅರೆ…

7 hours ago

ನೇಣಿಗೆ ಶರಣಾಗಿರೋ ವ್ಯಕ್ತಿ

ಮನನೊಂದ ವ್ಯಕ್ತಿಯೋರ್ವ ಮನೆಯಲ್ಲಿ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮುಕ್ತಾಂಭಿಕಾ ಬಡಾವಣೆಯಲ್ಲಿ ನಿನ್ನೆ ರಾತ್ರಿ ಸುಮಾರು 10ಗಂಟೆಯಲ್ಲಿ ನಡೆದಿದೆ....…

8 hours ago

” ಹೊಸ ವರುಷ ಎಂಬುದೇನಿಲ್ಲ ಅರಿತವಗೆ…”

2026ಕ್ಕೆ ಕೆಲವೇ ಗಂಟೆಗಳು ಇರುವಾಗ.......... ಒಂದು ಜೀವನದ ಇಲ್ಲಿಯವರೆಗಿನ ನೆನಪಿನ ಪಯಣ......... " ನಿದ್ದೆಗೊಮ್ಮೆ ನಿತ್ಯ ಮರಣ ಎದ್ದ ಸಲ…

13 hours ago