ಮಂಡ್ಯದ ಕೆರಗೋಡಿನಲ್ಲಿ ರಾಷ್ಟ್ರಧ್ವಜಕ್ಕೆ ಅಗೌರವ ವಿಚಾರ- ಬರೆದುಕೊಟ್ಟ ಮುಚ್ಚಳಿಕೆಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ- ಇದರಲ್ಲಿ ಸರ್ಕಾರದ ವೈಫಲ್ಯ ಇಲ್ಲ- ಸಿಎಂ ಸಿದ್ದರಾಮಯ್ಯ

ಮಂಡ್ಯದ ಕೆರಗೋಡಿನಲ್ಲಿ ರಾಷ್ಟ್ರಧ್ವಜಕ್ಕೆ ಅಗೌರವ ತೋರಿರುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ ನೀಡಿದ್ದಾರೆ.

ಮಾಜಿ‌ ಸಿಎಂ ಕುಮಾರಸ್ವಾಮಿ ಅವರು ಬಿಜೆಪಿಯೊಂದಿಗೆ ಕೈಜೋಡಿಸಿರುವುದರಿಂದ ಈಗವರು ಬಿಜೆಪಿಯ ವಕ್ತಾರರಾಗಿದ್ದಾರೆ, ಬಿಜೆಪಿಯನ್ನು ಹಾಡಿ ಹೊಗಳುತ್ತಿದ್ದಾರೆ. ತಮ್ಮ ಪಕ್ಷದ ಹೆಸರಿನ ಜೊತೆಗೆ ಜಾತ್ಯತೀತ ಎಂದು ಇಟ್ಟುಕೊಂಡಿದ್ದಾರೆ. ಜಾತ್ಯತೀತ ಎಂದರೆ ಏನು? ಬಿಜೆಪಿ ಅವರೊಂದಿಗೆ ಸೇರಿಕೊಂಡರೆ ಇವರನ್ನು ಏನೆಂದು ಕರೆಯಬೇಕು? ಕುಮಾರಸ್ವಾಮಿಯವರು ಮೊದಲು ನಡವಳಿಕೆ ಕಲಿತು ಆಮೇಲೆ ಬೇರೆಯವರಿಗೆ ಹೇಳಲಿ ಎಂದು ಹೇಳಿದ್ದಾರೆ.

ಮಂಡ್ಯದ ಕೆರಗೋಡು ಗ್ರಾಮದಲ್ಲಿ ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ್ದರ ಪರವಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಪ್ರತಿಭಟನೆ ಮಾಡಲು ಹೋಗುತ್ತಾರೆ ಎಂದರೆ ಇದು ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯಲು ಹಾಗೂ ಪ್ರಚೋದನೆ ನೀಡಲು ಮಾಡುತ್ತಿರುವ ರಾಜಕೀಯ ಕುತಂತ್ರ. ಇದರಲ್ಲಿ ಸರ್ಕಾರದ ವೈಫಲ್ಯ ಇಲ್ಲ ಎಂದು ತಿಳಿಸಿದ್ದಾರೆ.

ರಾಷ್ಟ್ರಧ್ವಜ ಅಥವಾ ಕನ್ನಡ ಧ್ವಜ ಹಾರಿಸುತ್ತೇವೆ, ಯಾವುದೇ ಧರ್ಮದ ಧ್ವಜವನ್ನು ಹಾಕುವುದಿಲ್ಲ ಎಂದು ಹೇಳಿ, ಅದನ್ನು ಉಲ್ಲಂಘಿಸಿ ಭಗವಾಧ್ವಜವನ್ನು ಹಾರಿಸಿದ್ದಾರೆ. ಅವರೇ ಬರೆದುಕೊಟ್ಟ ಮುಚ್ಚಳಿಕೆಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂದಿದ್ದಾರೆ.

ಇಂದು ಪ್ರತಿಭಟನೆ ನಡೆಸುವ ವೇಳೆ ಕಲ್ಲು ತೂರಾಟ ನಡೆಸಿದ್ದಾರೆ, ಪೋಲಿಸರಿಗೆ ಹೊಡೆದಿದ್ದಾರೆ ಎಂಬ ಮಾಹಿತಿ ಇದೆ. ಪೊಲೀಸರಿಗೆ ಹೊಡೆದರೆ ಪರಿಸ್ಥಿತಿ ನಿಯಂತ್ರಣಕ್ಕೆ ಅವರು ಏನು ಮಾಡಬೇಕು? ಎಂದು‌ ಪ್ರಶ್ನೆ ಮಾಡಿದ್ದಾರೆ.

ನಿನ್ನೆ ಚಿತ್ರದುರ್ಗದಲ್ಲಿ ಅಹಿಂದ ಸಮಾವೇಶದಿಂದಾಗಿ ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲುತ್ತೇವೆ ಎಂಬ ಭಯ ಹುಟ್ಟಿದೆ. ಅದಕ್ಕೆ ಈ ರೀತಿ ಹೇಳಿಕೆ ನೀಡುತ್ತಾರೆ. ಯಾವುದೇ ವಿಷಯವಿಲ್ಲದಿರುವ ಕಡೆ ಕೋಮು ವಿಷಯಗಳನ್ನು ಮುಂದಕ್ಕೆ ತರುತ್ತಾರೆ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಲಗೇಜ್ ಟ್ರಾಲಿಯಲ್ಲಿ ಚಿನ್ನ ಸಾಗಾಟ: ಇಬ್ಬರ ಬಂಧನ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಗೇಜ್ ಟ್ರಾಲಿಯಲ್ಲಿ ಚಿನ್ನದ ಬಿಸ್ಕೆಟ್‌ಗಳನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರು ಪ್ರಯಾಣಿಕರನ್ನು ಡೈರೆಕ್ಟರೇಟ್…

34 minutes ago

ಆಧುನಿಕ ತಂತ್ರಜ್ಞಾನ–ಸಾವಯವ ಕೃಷಿಯಿಂದ ಮಾದರಿಯಾದ ನೆಲಮಂಗಲದ ರೈತ ಮಹಿಳೆ

ನೆಲಮಂಗಲ: ಕಡಿಮೆ ಶಿಕ್ಷಣದ ನಡುವೆಯೂ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಹಾಗೂ ಸಾವಯವ ಪದ್ಧತಿಗಳನ್ನು ಅಳವಡಿಸಿಕೊಂಡು ಸಾಧನೆ ಮಾಡಿರುವ ನೆಲಮಂಗಲ ತಾಲೂಕಿನ…

1 hour ago

ನೊಬೆಲ್ ಪ್ರಶಸ್ತಿ ಮತ್ತೆ ಮನಸ್ಸು ಮತ್ತು ಸಮಾಜ ಪುನ:ಶ್ಚೇತನಗೊಳ್ಳುವಂತೆ ಮಾಡಲಿ

ನೊಬೆಲ್ ಪ್ರಶಸ್ತಿ ಘೋಷಣೆಯ ವಾರ....... ಈ ವಾರ ಪ್ರಕಟವಾಗುತ್ತಿರುವ ನೊಬೆಲ್ ಪ್ರಶಸ್ತಿಗಳ ಕಡೆಯೂ ಸ್ವಲ್ಪ ಮನಸ್ಸು ಹರಿಯಲಿ ಮತ್ತು ಅರಿಯಲಿ..........…

4 hours ago

ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳ ಸರಣಿ: ಜನರಲ್ಲಿ ಆತಂಕ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಮುಂದುವರಿದಿದ್ದು, ಎರಡು ದಿನಗಳ ಅಂತರದಲ್ಲಿ ಎರಡು ಮನೆಗಳ ಕಳ್ಳತನ ಹಾಗೂ ಬೈಕ್ ಕಳವು…

18 hours ago